ಹಾಸನದಲ್ಲಿ ಭೀಕರ ರಸ್ತೆ ಅಪಘಾತ, ಮಗು ಸೇರಿದಂತೆ 6 ಜನ ಸಾವು

ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಈಚನಹಳ್ಳಿ ಬಳಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮಗು, ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ.

ಹಾಸನದಲ್ಲಿ ಭೀಕರ ರಸ್ತೆ ಅಪಘಾತ, ಮಗು ಸೇರಿದಂತೆ 6 ಜನ ಸಾವು
ಹಾಸನ ಅಪಘಾತ
Follow us
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ

Updated on:May 26, 2024 | 10:28 AM

ಹಾಸನ, ಮೇ 26: ಬೆಳ್ಳಂಬೆಳಗ್ಗೆ ಹಾಸನ (Hassan) ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ NH 75ನಲ್ಲಿ ಕಾರು (Car) ಹಾಗೂ ಟ್ರಕ್ (Truck) ನಡುವೆ ಭೀಕರ ಅಪಘಾತ ಸಂಭವಿಸಿದೆ.  ಘಟನೆಯಲ್ಲಿ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ ರಾಕೇಶ್ ಮೃತ ದುರ್ದೈವಿಗಳು. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ.  ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಮೂಲದ ಆರು ಜನ, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿಯಾಗಿ, ವಾಪಸ್ ಊರಿಗೆ ಹೋಗುತ್ತಿದ್ದರು. ನಸುಕಿನ ಜಾವ ಈಚನಹಳ್ಳಿ ಬಳಿ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.ಕಾರು ಮನೋಜ್ ಕುಮಾರ್ ಎಂಬುವರಿಗೆ ಸೇರಿದೆ.

ಕಾರು ಹಾಗೂ ಕಾರಿನಲ್ಲಿ ಇದ್ದವರ ಬಗ್ಗೆ ತಕ್ಷಣ ವಿಳಾಸ ಪತ್ತೆ ಹಚ್ಚಿ ಎಂದು ಚಿಕ್ಕಬಳ್ಳಾಫುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಿಎಲ್ ನಾಗೇಶ ಹಾಗೂ ಆರ್​ಟಿಒ ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್  ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಸ್​ ಮೇಲೆ ಉರುಳಿಬಿದ್ದ ಲಾರಿ, 11 ಮಂದಿ ಸಾವು, 25 ಮಂದಿಗೆ ಗಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಕಾರಳ್ಳಿ ಗ್ರಾಮದ ನಾರಾಯಣಪ್ಪ, ಸುನಂದಾ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂದರಹಳ್ಳಿ ಗ್ರಾಮದ ನೇತ್ರಾ ಹಾಗೂ ರವಿಕುಮಾರ್ ದಂಪತಿ ಹಾಗೂ ಪುತ್ರ ಚೇತನ್ ಒಂದೇ ಕುಟುಂಬದವರು. ಕುಟುಂಬಸ್ಥರು, ಪಾಶ್ವವಾಯುಗೆ ತುತ್ತಾಗಿದ್ದ ನಾರಾಯಣಪ್ಪ ಅವರಿಗೆ ಚಿಕಿತ್ಸೆ ಕೊಡಿಸಲೆಂದು KA-53-C. 1419 ನಂಬರ್​ನ ಇಟಿಯೋಸ್​ ಬಾಡಿಗೆ ಕಾರು ಮಾಡಿಕೊಂಡು ಮಂಗಳೂರಿಗೆ ಹೋಗಿದ್ದರು.

ಚಿಕಿತ್ಸೆ ಪಡೆದು ವಾಪಸ್ಸು ಬೆಂಗಳೂರಿನ ಕಡೆಗೆ ಬರುವಾಗ ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಪಕ್ಕದ ಲೇನ್​ಗೆ ಹಾರಿ ಕಂಟೇನರ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ.

ಘಟನೆ ಸಂಬಂಧ ಮೃತ ನಾರಾಯಣಪ್ಪ ಸಂಬಂಧಿ ಶ್ರೀನಿವಾಸ್ ಮಾತನಾಡಿ, ನಾರಾಯಣಪ್ಪ ಪಾಶ್ವವಾಯುಗೆ ತುತ್ತಾದ ಹಿನ್ನೆಲೆಯಲ್ಲಿ ಮದ್ದು ತೆಗೆದುಕೊಂಡು ಬರಲು ಕುಟುಂಬಸ್ಥರು ಮಂಗಳೂರಿಗೆ ಹೋಗಿದ್ದರು. ಬಾಡಿಗೆ ಕಾರು ಮಾಡಿ ಮೊನ್ನೆ ರಾತ್ರಿ ಕಳುಹಿಸಲಾಗಿತ್ತು. ವಾಪಸ್ ಬರುವಾಗ ದುರ್ಘಟನೆ ನಡೆದಿದೆ ಎಂದರು.

ಕಾರಿನ ಮಾಲಿಕ ಮನೋಜ್ ಕುಮಾರ್ ಮಾತನಾಡಿ, ಚಿಕ್ಕಬಳ್ಳಾಫುರದಿಂದ ಮೊನ್ನೆ ರಾತ್ರಿ ಕಾರು ಮಂಗಳೂರಿಗೆ ಬಾಡಿಗೆ ಹೋಗಿದೆ. ದೇವನಹಳ್ಳಿ ತಾಲೂಕಿನ ಕಾರಹಳ್ಳಿ ನಿವಾಸಿ ನಾರಾಯಣಪ್ಪ ಬಾಡಿಗೆ ಪಡೆದಿದ್ದರು. ಮಂಗಳೂರಿಗೆ ಹೋಗಿ ಬರಲು ಕಾರು ಬಾಡಿಗೆ ಪಡೆದಿದ್ದರು. ಕಾರಿನ ಚಾಲಕನಾಗಿ ಕೊಂಡೇನಹಳ್ಳಿ ನಿವಾಸಿ ರಾಕೇಶನನ್ನು ಕಳುಹಿಸಲಾಗಿತ್ತು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:21 am, Sun, 26 May 24

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ