ಹಾಸನ: ಕೆರೆ ಮೀನು ತಿಂದು ಇಬ್ಬರ ಸಾವು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Hassan News: ಭೀಕರ ಬರಗಾಲ ಹಿನ್ನಲೆಯಲ್ಲಿ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿ ಕರೆ ಒಣಗಿದೆ. ಖಾಲಿಯಾದ ಕರೆಯ ಒಂದು ಬದಿ ನಿಂತಿದ್ದ ಕೆಸರಿನಲ್ಲಿನ ಮೀನುಗಳನ್ನು ಹಿಡಿದು ಗ್ರಾಮಸ್ಥರು ಅಡುಗೆ ಮಾಡಿ ಊಟ ಮಾಡಿದ್ದಾರೆ. ಇದರಿಂದ ಇಬ್ಬರು ಮೃತಪಟ್ಟಿದ್ದು. 15ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ.

ಹಾಸನ, ಮೇ 03: ಅರಕಲಗೂಡು (Arkalgud) ತಾಲೂಕಿನ ಬಸವನಹಳ್ಳಿ ಕೆರೆ (Basavnhalli Lake) ಮೀನು (Fish) ತಿಂದು ಇಬ್ಬರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಬಸವಹಳ್ಳಿ ಗ್ರಾಮದ ರವಿಕುಮಾರ್ (46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತ ದುರ್ದೈವಿಗಳು. ಅಸ್ವಸ್ಥರನ್ನು ಅರಕಲಗೂಡು ಹಾಗೂ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಕ್ಕೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬಸವನಹಳ್ಳಿ ಗ್ರಾಮದ ಕೆರೆ ನೀರಿಲ್ಲದೆ ಬತ್ತಿ ಹೋಗಿದೆ. ಖಾಲಿಯಾಗಿದ್ದ ಕೆರೆಯ ಕೆಸರಿನಲ್ಲಿದ್ದ ಮೀನುಗಳನ್ನ ಹಿಡಿದ್ದಾರೆ. ಬಳಿಕ ಮೀನು ಅಡುಗೆ ಮಾಡಿ ಊಟ ಮಾಡಿದ್ದಾರೆ. ಬಳಿಕ ವಾಂತಿ, ಭೇದಿಯಿಂದ ಬಳಲಿ 15ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಮೃತ ಪುಟ್ಟಮ್ಮ ಬಸವನಹಳ್ಳಿ ಗ್ರಾಮದಲ್ಲಿರುವ ತವರು ಮನೆಗೆ ಬಂದಿದ್ದರು. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಮರ್ಮಾಂಗ ಕತ್ತರಿಸಿಕೊಳ್ಳಲು ಮುಂದಾದ ಮಾನಸಿಕ ಅಸ್ವಸ್ಥ
24 ವಿದ್ಯಾರ್ಥಿನಿಯರು ಅಸ್ವಸ್ಥ
ರಾಯಚೂರು: ಅರೆಬೆಂದ ಊಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಸಿಂಧನೂರಿನಲ್ಲಿರುವ ಅಂಬೇಡ್ಕರ್ ವಸತಿ ನಿಲಯದಲ್ಲಿ ನಡೆದಿತ್ತು. ವಿದ್ಯಾರ್ಥಿನಿಯರು ಏ.26 ರಂದು ಮಧ್ಯಾಹ್ನ ಊಟ ಸೇವಿಸಿ ಅಸ್ವಸ್ಥರಾಗಿದ್ದರು. ಕೂಡಲೆ ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ವಿದ್ಯಾರ್ಥಿನಿಯರು 2 ಗಂಟೆ ಕಾಲ ನರಳಾಡಿದ್ದರು. ಆಸ್ಪತ್ರೆಗೆ ಸಮಾಜ ಕಲ್ಯಾಣ ಉಪನಿರ್ದೇಶಕ ಮಹೇಶ್ ಪೊತೆದಾರ್ ಭೇಟಿ ನೀಡಿದ್ದರು. ವಸತಿ ನಿಲಯದಲ್ಲಿನ ಊಟದ ಸಮಸ್ಯೆ ಬಗ್ಗೆ ಈ ಹಿಂದೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಪ್ರಯೋಜನವಾಗಿರಲಿಲ್ಲ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:05 pm, Fri, 3 May 24



