AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಕೈ ಬಲಪಡಿಸುವ ಕೆಲಸ ನಾವು ಮಾಡಬೇಕು: ಹಾಸನದಲ್ಲಿ ಹೆಚ್​ಡಿ ದೇವೇಗೌಡ ಕರೆ

ಪ್ರಧಾನಿ ನರೇಂದ್ರ ಮೋದಿ ಅವರ ಕೈಬಲಪಡಿಸಲು ಶ್ರಮಿಸುವಂತೆ ಹಾಸನದ ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಟೆಯಲ್ಲಿ ನಡೆದ ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಕರೆ ನೀಡಿದರು.

ಪ್ರಧಾನಿ ಮೋದಿ ಕೈ ಬಲಪಡಿಸುವ ಕೆಲಸ ನಾವು ಮಾಡಬೇಕು: ಹಾಸನದಲ್ಲಿ ಹೆಚ್​ಡಿ ದೇವೇಗೌಡ ಕರೆ
ಹೆಚ್​ಡಿ ದೇವೇಗೌಡ
ಮಂಜುನಾಥ ಕೆಬಿ
| Edited By: |

Updated on:Dec 01, 2023 | 3:53 PM

Share

ಹಾಸನ, ಡಿಸೆಂಬರ್ 1: ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ನಾವು ಬಿಜೆಪಿಯನ್ನು ಎದುರಿಸಿದ್ದೆವು. ಆದರೆ ಈಗ ಅದನ್ನೆಲ್ಲ ಮರೆಯಬೇಕು. ಈಗಿನ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕೈಯನ್ನು ನಾವು ಬಲಪಡಿಸಬೇಕಿದೆ ಎಂದು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಕರೆ ನೀಡಿದರು. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಟೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಜೊತೆ ಒಗ್ಗಟ್ಟಾಗಿ ಕೆಲಸ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸೋಣ. ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಲು ತೀರ್ಮಾನಿಸಿದ್ದೇವೆ ಎಂದರು.

ಪಂಚ ರಾಜ್ಯಗಳ ಚುನಾವಣೆಯ ಎಕ್ಸಿಟ್ ಪೋಲ್ ರಿಪೋರ್ಟ್ ಬಂದಿದೆ. ಒಂದೆರಡು ಕಡೆ ಕಾಂಗ್ರೆಸ್, ಒಂದೆರಡು ಕಡೆ ಬಿಜೆಪಿ ಎಂದು ಸಮೀಕ್ಷೆ ಫಲಿತಾಂಶ ತಿಳಿಸಿದೆ. ವಿಧಾನಸಭಾ ಚುನಾವಣೆ ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ. ಇದು ನನ್ನ ರಾಜಕೀಯ ಅನುಭವದಲ್ಲಿ ಹೇಳುತ್ತಿದ್ದೇನೆ ಎಂದು ದೇವೇಗೌಡ ಹೇಳಿದರು.

ಕೊನೆ ಕ್ಷಣದಲ್ಲಿ ಗ್ಯಾರಂಟಿ ಯೋಜನೆ ಕಾಂಗ್ರೆಸ್ ಅಧಿಕಾರ ಹಿಡಿಯಿತು. ಈಗ ದೇಶದ ಎಲ್ಲಾ ಕಡೆಯೂ ಗ್ಯಾರಂಟಿ ಶುರುವಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ನಾನು ಈಗ ಹೆಚ್ಚು ಮಾತನಾಡುವುದಿಲ್ಲ. ನನಗೆ ರಾಜ್ಯಸಭೆ ಸದಸ್ಯನಾಗಿ ಇನ್ನೂ ಎರಡೂವರೆ ವರ್ಷ ಅವಕಾಶವಿದೆ. ಮಂಡಿ ನೋವು ಬಿಟ್ಟರೆ ಎಲ್ಲಾ ಕಡೆ ಕೆಲಸ ಮಾಡುವ ಸಾಮರ್ಥ್ಯವಿದೆ. ಲೋಕಸಭೆ ಚುನಾವಣಾ ಸಂದರ್ಭ ಹೆಚ್​ಡಿ ಕುಮಾರಸ್ವಾಮಿ ‌ಕೂಡ ಬರುತ್ತಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರನ್ನ ಭೇಟಿಯಾದ ಆರ್ ಅಶೋಕ್ ಏನಂದ್ರು ಗೊತ್ತಾ?

ಮುಂದಿನ ಲೋಕಸಭೆಯಲ್ಲಿ ನಮಗೆ ಎಷ್ಟು ಸೀಟು ಹಂಚಿಕೆಯಾಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಪ್ರಧಾನಿ, ಬಿಜೆಪಿ ಅಧ್ಯಕ್ಷಕರು, ಹೆಚ್​ಡಿಕೆ ತೀರ್ಮಾನ ಮಾಡಲಿದ್ದಾರೆ ಎಂದು ದೇವೇಗೌಡರು ಹೇಳಿದ್ದಾರೆ.

ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಚುನಾಯಿತ ಜನಪ್ರತಿನಿಧಿಗಳು ದೇವೇಗೌಡರ ಸಭೆಯಲ್ಲಿ ಭಾಗಿಯಾಗಿದ್ದರು. ಲೋಕಸಭಾ ಚುನಾವಣೆ ಸಂಬಂಧ ಸಲಹೆ ಪಡೆಯಲು ದೇವೇಗೌಡ ಅವರು ಈ ಸಭೆ ನಡೆಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ, ಶಾಸಕರಾದ ಹೆಚ್ ಡಿ ರೇವಣ್ಣ, ಸಿ.ಎನ್.ಬಾಲಕೃಷ್ಣ, ಸ್ವರೂಪ್, ಸೂರಜ್ ರೇವಣ್ಣ ಉಪಸ್ಥಿತರಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:49 pm, Fri, 1 December 23

Follow Us
Manjunath KB
Manjunath KB
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ