AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮುಂದುವರೆದ ಹೃದಯಾಘಾತ ಸರಣಿ ಸಾವು: ಮತ್ತೋರ್ವ ಬಲಿ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಮುಂದುವರೆದಿದೆ. ಇಂದು ಹೃದಯಾಘಾತದಿಂದ ಮತ್ತೋರ್ವ ವ್ಯಕ್ತಿಯ ಸಾವು ಸಂಭವಿಸಿದೆ. 37 ವರ್ಷದ ಆಟೋ ಚಾಲಕನಿಗೆ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಇದೇ ರೀತಿಯ 16 ಸಾವುಗಳು ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ಹಾಸನದಲ್ಲಿ ಮುಂದುವರೆದ ಹೃದಯಾಘಾತ ಸರಣಿ ಸಾವು: ಮತ್ತೋರ್ವ ಬಲಿ
ಗೋವಿಂದ
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Jun 28, 2025 | 11:24 AM

Share

ಹಾಸನ, ಜೂನ್​ 28: ಜಿಲ್ಲೆಯಲ್ಲಿ ಹೃದಯಾಘಾತದ (heart attack) ಸರಣಿ ಮುಂದುವರಿದಿದೆ. ಇಂದು ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ (death). ಅಲ್ಲಿಗೆ ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ(37) ಮೃತ ವ್ಯಕ್ತಿ. ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಊಹಿಸೋಕೂ ಆಗ್ತಿಲ್ಲ, ಅರಗಿಸಿಕೊಳ್ಳೂಕೂ ಆಗುತ್ತಿಲ್ಲ. ಬಾಳಿ ಬದುಕ ಬೇಕಾದವರೇ ಅರ್ಧಕ್ಕೇ ಜೀವನದ ಆಟ ಮುಗಿಸುತ್ತಿದ್ದಾರೆ. ಅದರಲ್ಲೂ ಜಿಲ್ಲೆಯಲ್ಲಿ ಹೃದಯಾಘಾತ ಇನ್ನಿಲ್ಲದಂತೆ ಕಾಡುತ್ತಿದೆ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಯಾರನ್ನೂ ಬಿಡುತ್ತಿಲ್ಲ. ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಈವರೆಗೆ ಹೃದಯಾಘಾತಕ್ಕೆ ಮೃತಪಟ್ಟವರು

ಮೇ 20 ರಂದು ಅರಕಲಗೂಡು ತಾಲೂಕಿನ ಅಭಿಷೇಕ್ ಬೆಂಗಳೂರಿನಲ್ಲಿ ಉಸಿರು ನಿಲ್ಲಿಸಿದ್ರೆ, ಅದೇ ದಿನ ಹೊಳೆನರಸೀಪುರದ 20 ವರ್ಷದ ವಿದ್ಯಾರ್ಥಿನಿ ಸಂದ್ಯಾ ಬಲಿ ಆಗಿದ್ದರು. ಮೇ 28 ರಂದು ಕವನ ಉಸಿರು ನಿಲ್ಲಿಸಿದ್ದರು.

ಇದನ್ನೂ ಓದಿ
Image
ಹೃದಯಾಘಾತ: ಸರ್ಕಾರ ನೇಮಿಸಿದ ಸಮಿತಿ ವರದಿಯಲ್ಲಿ ಆತಂಕಕಾರಿ ಅಂಶ ಬಯಲು
Image
ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಸಂಶೋಧನಾ ವರದಿಯಲ್ಲಿ ಆಘಾತಕಾರಿ ಅಂಶ
Image
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
Image
ಹಾಸನ: ಹೃದಯಾಘಾತದಿಂದ ಮತ್ತಿಬ್ಬರು ಸಾವು, ಒಂದೇ ತಿಂಗಳಲ್ಲಿ 12 ಜನ ಬಲಿ

ಇದನ್ನೂ ಓದಿ: 24 ಗಂಟೆಗಳಲ್ಲಿ ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿ: ಒಂದೇ ತಿಂಗಳಲ್ಲಿ 14 ಜನ ಸಾವು

ಇನ್ನು ಜೂನ್‌ 11 ರಂದು ನಿಶಾಂತ್, ಜೂನ್‌ 12 ರಂದು ನಾಗಪ್ಪ, ಅದೇ ದಿನ ನೀಲಕಂಠಪ್ಪ ಕೂಡ ಸಾವಿನ ಮನೆ ಸೇರಿದ್ದರು. ಜೂನ್‌ 13 ರಂದು ದೇವರಾಜ್, ಅಂದೇ ಸತೀಶ್ ಅನ್ನೋರು ಜೀವ ಬಿಟ್ಟಿದ್ದರು. ಜೂನ್‌ 14 ರಂದು ಕಾಂತರಾಜು ಬಲಿ ಆಗಿದ್ದರು. ಜೂನ್‌ 18 ರಂದು ನವೀನ್, ತೀರ್ಥಪ್ಪ ಸಾವನ್ನಪ್ಪಿದ್ದರು. ಜೂನ್‌ 21 ರಂದು ನಿಶಾದ್ ಅಹ್ಮದ್ ಮತ್ತು ಚೇತನ್ ಹೃದಯಾಘಾತದಿಂದ ಉಸಿರು ಚೆಲ್ಲಿದ್ದರು.

ಇದನ್ನೂ ಓದಿ: ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಸ್ಫೋಟಕ ಕಾರಣ ಬಿಚ್ಚಿಟ್ಟ ಡಿಹೆಚ್​ಓ

ಜೂ.25 ರಂದು ಯೋಗೇಶ್.ಎಂ.ಕೆ, ಮಂಜುನಾಥ್, ಜೂ.26 ರಂದು 22 ವರ್ಷದ ಸುಪ್ರೀತಾ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಸಾವನ್ನಪ್ಪಿದ್ದಾರೆ. ಜೂ.28 ಗೋವಿಂದ (37) ಮೃತಪಟ್ಟಿದ್ದಾರೆ. ಎದೆ ನೋವನ್ನ ನಿರ್ಲಕ್ಷಿಸದೇ ಪರೀಕ್ಷಿಸಿ ಕೊಂಡರೆ ಸಾವುಗಳನ್ನ ತಡೆಯಬಹುದು ಎಂದು ಹೃದಯ ತಜ್ಞ ಆಶ್ರಿತ್ ಶ್ರೀದರ್ ಸಲಹೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:05 am, Sat, 28 June 25

ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ