AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಪೊಲೀಸರ ಭರ್ಜರಿ ಕಾರ್ಯಾಚರಣೆ: 15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!

ಹಾಸನ ಪೊಲೀಸರು 2011ರಲ್ಲಿ ಸಕಲೇಶಪುರ ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಖೈದಿ ಚನ್ನಕೇಶವನನ್ನು 15 ವರ್ಷಗಳ ಬಳಿಕ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಕೊಲೆ ಯತ್ನ ಪ್ರಕರಣದ ಆರೋಪಿಯಾಗಿದ್ದ ಚನ್ನಕೇಶವ ಮುಂಬೈ, ಗೋವಾ ಸೇರಿದಂತೆ ವಿವಿಧ ನಗರಗಳಲ್ಲಿ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಆಧರಿಸಿ ಗೋವಾದಲ್ಲಿ ಕಾರ್ಯಾಚರಣೆ ನಡೆಸಿದ ಹಾಸನ ಪೊಲೀಸರು ಆತನನ್ನು ಬಂಧಿಸಿ ಮತ್ತೆ ಜೈಲಿಗೆ ಅಟ್ಟಿದ್ದಾರೆ. ಇದು ಪೊಲೀಸ್ ಇಲಾಖೆಯ ದೊಡ್ಡ ಸಾಧನೆ.

ಹಾಸನ ಪೊಲೀಸರ ಭರ್ಜರಿ ಕಾರ್ಯಾಚರಣೆ: 15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!
ಸಾಂದರ್ಭಿಕ ಚಿತ್ರ
ಮಂಜುನಾಥ ಕೆಬಿ
| Edited By: |

Updated on: Apr 18, 2026 | 4:32 PM

Share

ಹಾಸನ, ಏ.18: ಪೊಲೀಸರು ತಮ್ಮ ಕಾರ್ಉಕ್ಷಮತೆಯಲ್ಲಿ ದೊಡ್ಡ ಸಾಧನೆಯೊಂದನ್ನು ಮಾಡಿದ್ದಾರೆ. ಇದೀಗ ಪೊಲೀಸ್​​ ಇಲಾಖೆಯ ಈ ಸಾಧನೆ ಭಾರೀ ಮೆಚ್ಚುಗೆಗೆ ಕಾರಣವಾಗಿದೆ.2011ರಲ್ಲಿ ಸಕಲೇಶಪುರ ಜೈಲಿನಿಂದ ನಾಪತ್ತೆಯಾಗಿದ್ದ ವಿಚಾರಣಾಧೀನ ಖೈದಿಯನ್ನು ಹದಿನೈದು ವರ್ಷಗಳ ನಂತರ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯನ್ನು ಸಕಲೇಶಪುರ ತಾಲೂಕಿನ ನಲ್ಲುಲ್ಲಿ ಗ್ರಾಮದ ಚನ್ನಕೇಶವ @ ಕೇಶವ@ ಸುರೇಶ ಬಿನ್ ಲೇಟ್ ಸಣ್ಣೇಗೌಡ ಎಂದು ಗುರುತಿಸಲಾಗಿದೆ.

ಈತ ಈ ಹಿಂದೆ ಕೊಲೆ ಯತ್ನ ಪ್ರಕರಣವೊಂದರಲ್ಲಿ ಬಂಧಿತನಾಗಿ ಸಕಲೇಶಪುರ ಜೈಲು ಸೇರಿದ್ದನು. 2011ರಲ್ಲಿ ಸಕಲೇಶಪುರ ಜೈಲಿನಲ್ಲಿದ್ದ ಈತ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದನು. ಅಂದಿನಿಂದ ಪೊಲೀಸರು ಈತನ ಪತ್ತೆಗಾಗಿ ಬಲೆ ಬೀಸಿದ್ದರು.

ಜೈಲಿನಿಂದ ತಪ್ಪಿಸಿಕೊಂಡ ನಂತರ ಚನ್ನಕೇಶವ ತನ್ನ ಗುರುತು ಸಿಗದಂತೆ ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಅಲೆದಾಡಿದ್ದನು. ಈ ವೇಳೆ ವಿವಿಧ ಹೋಟೆಲ್‌ಗಳಲ್ಲಿ ಕೆಲಸ ಮಾಡಿಕೊಂಡಿದ್ದ ಈತ, ಇತ್ತೀಚೆಗೆ ಗೋವಾದ ರೆಸ್ಟೋರೆಂಟ್ ಒಂದರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದನು.

ಇದನ್ನೂ ಓದಿ: ಸುಡುವ ಬಿಸಿಲಲ್ಲಿ ಹೈ ಟೆನ್ಷನ್ ಕಂಬ ಏರಿ ಕುಳಿತ ರೈತ! ವಿಂಡ್ ಪವರ್ ಕಂಪನಿ ವಿರುದ್ಧ ಭಾರಿ ಆಕ್ರೋಶ

ಆರೋಪಿ ಗೋವಾದಲ್ಲಿರುವ ಬಗ್ಗೆ ಹಾಸನ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸ್ ತಂಡ ಗೋವಾಕ್ಕೆ ಧಾವಿಸಿ, ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ ಚನ್ನಕೇಶವನನ್ನು ವಶಕ್ಕೆ ಪಡೆದಿದೆ. ಸದ್ಯ ಆರೋಪಿಯನ್ನು ಹಾಸನಕ್ಕೆ ಕರೆತಂದು ಮತ್ತೆ ಜೈಲಿಗಟ್ಟಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕೆಪಿಎಸ್​ಸಿ ಚೀಫ್ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲು!
ಕೆಪಿಎಸ್​ಸಿ ಚೀಫ್ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲು!