ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಎಸ್​ಐಟಿ ಸಹಾಯವಾಣಿಗೆ ಬಂತು 30ಕ್ಕೂ ಹೆಚ್ಚು ಕರೆ

ಎಸ್​ಐಟಿ ಆರಂಭಿಸಿರುವ ಸಹಾಯವಾಣಿ ಸಂಖ್ಯೆಗೆ ಈವರೆಗೆ ಪ್ರಜ್ವಲ್ ವಿರುದ್ಧ 30 ಕರೆಗಳು ಬಂದಿವೆ. ಆದರೆ, ಯಾವ ಸಂತ್ರಸ್ತೆಯೂ ದೂರು ನೀಡಲು ಮುಂದೆ ಬರುತ್ತಿಲ್ಲ. ದೂರು ನೀಡಿದರೆ ಮಾಹಿತಿ ಸಂಗ್ರಹಿಸಲು ಸಿದ್ದರಿದ್ದೇವೆ. ಗುರುತು, ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎಸ್​ಐಟಿ ಭರವಸೆ ನೀಡಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಎಸ್​ಐಟಿ ಸಹಾಯವಾಣಿಗೆ ಬಂತು 30ಕ್ಕೂ ಹೆಚ್ಚು ಕರೆ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಎಸ್​ಐಟಿ ಸಹಾಯವಾಣಿಗೆ ಬಂತು 30ಕ್ಕೂ ಹೆಚ್ಚು ಕರೆ
Follow us
ಮಂಜುನಾಥ ಕೆಬಿ
| Updated By: Ganapathi Sharma

Updated on: May 24, 2024 | 10:35 AM

ಹಾಸನ, ಮೇ 24: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಬಗೆದಷ್ಟೂ ಹೊರಬರುತ್ತಿದೆ. ಪ್ರಕರಣ ಸಂಬಂಧ ಸಂತ್ರಸ್ತೆಯರು ದೂರು ನೀಡಲು ಎಸ್​ಐಟಿ (SIT) ಆರಂಭಿಸಿದ್ದ ಸಹಾಯವಾಣಿಗೆ ಈವರೆಗೆ 30ಕ್ಕೂ ಹೆಚ್ಚು ಕರೆಗಳು ಬಂದಿವೆ ಎಂಬುದು ತಿಳಿದುಬಂದಿದೆ. ದೌರ್ಜನ್ಯ ಸಂಬಂಧ 30 ಕರೆ ಬಂದಿದೆ ಎಂದು ಎಸ್​​ಐಟಿ ಮಾಹಿತಿ ನೀಡಿದೆ.

ಆದರೆ ಇದುವರೆಗೂ ಸಂತ್ರಸ್ತ ಮಹಿಳೆಯರು ದೂರು ನೀಡಿಲ್ಲ. ಹೀಗಾಗಿ ಹೆಲ್ಪ್‌ಲೈನ್ ಸಂಪರ್ಕಿಸಿ ಮಾಹಿತಿ ನೀಡುವಂತೆ ಮತ್ತೊಮ್ಮೆ ಎಸ್​ಐಟಿ ಮನವಿ ಮಾಡಿದೆ. 6360938947 ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ದೂರು ನೀಡಲು ಎಸ್​​​​ಐಟಿ ಮನವಿ ಮಾಡಿದೆ. ದೂರು ನೀಡಿದರೆ ಮಾಹಿತಿ ಸಂಗ್ರಹಿಸಲು ಸಿದ್ದರಿದ್ದೇವೆ. ಗುರುತು, ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎಸ್​ಐಟಿ ಭರವಸೆ ನೀಡಿದೆ.

ನೇರವಾಗಿ ಅಧಿಕಾರಿಗಳನ್ನೂ ಸಂಪರ್ಕಿಸಿ ದೂರು ನೀಡಹುದು ಎಂದು ಎಸ್​ಐಟಿ ಹೇಳಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಹೆಲ್ಪ್‌ಲೈನ್‌ ಮೂಲಕ ದಾಖಲಾಗುವ ಹೇಳಿಕೆಗಳನ್ನೂ ಎಸ್​ಐಟಿ ಪರಿಗಣಿಸುತ್ತಿದೆ.

ಭವಾನಿ ಕಾರು ಚಾಲಕ ಅಜಿತ್​ಗೆ ಮೂರನೇ ಬಾರಿ ನೋಟಿಸ್

ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ವಿರುದ್ಧದ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಭವಾನಿಯವರ ಕಾರು ಚಾಲಕ ಅಜಿತ್​​ಗೆ ಎಸ್​ಐಟಿ 3ನೇ ಬಾರಿ ನೋಟಿಸ್​ ನೀಡಿದೆ. ಈಗಾಗಲೇ ನೀಡಿರುವ 2 ನೋಟಿಸ್​​ಗೆ ಅಜಿತ್ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಅಜಿತ್​ ವಿಚಾರಣೆ ಮಾಡಿದರೆ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸಂತ್ರಸ್ತೆ ವಶಕ್ಕೆ ಪಡೆಯುವ ಮುನ್ನ ವಿಡಿಯೋ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸಂತ್ರಸ್ತೆ ವಿಡಿಯೋ ವೈರಲ್​ ಮಾಡಿದ್ದು ಅಜಿತ್​​ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಅಜಿತ್​ಗೆ ನೋಟಿಸ್​ ನೀಡಲಾಗಿದೆ.

ಇದನ್ನೂ ಓದಿ: ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ಆರೋಪ: ಭವಾನಿ ರೇವಣ್ಣ ಕಾರು ಚಾಲಕನಿಗೆ ಮತ್ತೆ ಸಮನ್ಸ್​

ಅಜಿತ್ ವಿಡಿಯೋ ಮಾಡಿಕೊಂಡಿರುವ ಬಗ್ಗೆ ಪ್ರಾಥಮಿಕ ತನಿಖೆ ವೇಳೆ ಎಸ್​​ಐಟಿಗೆ ಮಾಹಿತಿ ದೊರೆತಿದೆ. ಹೀಗಾಗಿ ಐಪಿಸಿ ಸೆಕ್ಷನ್​ 120 ಬಿ ಅಡಿಯಲ್ಲಿ ತನಿಖೆ ನಡೆಸಲು ಎಸ್​ಐಟಿ ಸಿದ್ಧತೆ ಮಾಡಿಕೊಂಡಿದೆ. ಚಾಲಕ ಅಜಿತ್​ಗಾಗಿ ಇದೀಗ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್