ರಿಂಗ್ ರಸ್ತೆ ಪರಿಹಾರ ವಿವಾದ; ಉದ್ದೂರಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ, ಶಾಸಕ ಪ್ರೀತಂಗೌಡ ಬೆಂಬಲಿಗರ ವಿರುದ್ಧ ಹಲ್ಲೆ ಆರೋಪ

ಹಾಸನದ ಡೈರಿ ವೃತ್ತದಿಂದ ಬೇಲೂರು ರಸ್ತೆಗೆ ಸಂಪರ್ಕ ಕಲ್ಪಿಸುವ ರಿಂಗ್ ರಸ್ತೆ ಕಾಮಗಾರಿಗೆ ಭೂಮಿ ನೀಡಿದ್ದು ಸೂಕ್ತ ಪರಿಹಾರ ನೀಡಿಲ್ಲ ಎಂದು ರೈತರು ನ್ಯಾಯಾಲಯದ ಮೊರೆ ಹೋಗಿದ್ದರು. ಇದನ್ನು ಪರಿಗಣಿಸಿ ಕಳೆದ ಆಗಸ್ಟ್ 16 ರಂದು ಕೋರ್ಟ್ ಕಾಮಗಾರಿಗೆ ತಡೆ ನೀಡಿತ್ತು.

ರಿಂಗ್ ರಸ್ತೆ ಪರಿಹಾರ ವಿವಾದ; ಉದ್ದೂರಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ, ಶಾಸಕ ಪ್ರೀತಂಗೌಡ ಬೆಂಬಲಿಗರ ವಿರುದ್ಧ ಹಲ್ಲೆ ಆರೋಪ
ರಿಂಗ್ ರಸ್ತೆ ಪರಿಹಾರ ವಿವಾದ; ಉದ್ದೂರಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ, ಶಾಸಕ ಪ್ರೀತಂಗೌಡ ಬೆಂಬಲಿಗರ ವಿರುದ್ಧ ಹಲ್ಲೆ ಆರೋಪ
Follow us
TV9 Web
| Updated By: ಆಯೇಷಾ ಬಾನು

Updated on: Jan 09, 2022 | 9:17 AM

ಹಾಸನ: ನಗರದ ರಿಂಗ್ ರಸ್ತೆ ಪರಿಹಾರ ವಿವಾದಕ್ಕೆ ಸಂಬಂಧಿಸಿ ಉದ್ದೂರು ಗ್ರಾಮದಲ್ಲಿ ತಡರಾತ್ರಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಕೋರ್ಟ್‌ನಲ್ಲಿ ಹಾಕಿರುವ ಕೇಸ್ ವಾಪಸ್‌ಗೆ ಒತ್ತಾಯಿಸಿ ಧಮ್ಕಿ ಹಾಕಿದ್ದು ಸುರೇಶ್, ಆನಂದ, ಕೃಷ್ಣ, ಕುಮಾರಿ, ಲೋಲಾಕ್ಷಿ ಮೇಲೆ ಶಾಸಕ ಪ್ರೀತಂಗೌಡ ಬೆಂಬಲಿಗರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.

ಹಾಸನದ ಡೈರಿ ವೃತ್ತದಿಂದ ಬೇಲೂರು ರಸ್ತೆಗೆ ಸಂಪರ್ಕ ಕಲ್ಪಿಸುವ ರಿಂಗ್ ರಸ್ತೆ ಕಾಮಗಾರಿಗೆ ಭೂಮಿ ನೀಡಿದ್ದು ಸೂಕ್ತ ಪರಿಹಾರ ನೀಡಿಲ್ಲ ಎಂದು ರೈತರು ನ್ಯಾಯಾಲಯದ ಮೊರೆ ಹೋಗಿದ್ದರು. ಇದನ್ನು ಪರಿಗಣಿಸಿ ಕಳೆದ ಆಗಸ್ಟ್ 16 ರಂದು ಕೋರ್ಟ್ ಕಾಮಗಾರಿಗೆ ತಡೆ ನೀಡಿತ್ತು. ಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ಕಾಮಗಾರಿ ನಡೆಸಲಾಗುತ್ತಿತ್ತು. ಹೀಗಾಗಿ ಇದನ್ನು ಪ್ರಶ್ನಿಸಿದವರಿಗೆ ಈಗ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಶಾಸಕ ಪ್ರೀತಂಗೌಡ ಹಾಗೂ ಬೆಂಬಲಿಗರ ವಿರುದ್ಧ ರೈತರು ಗಂಭೀರ ಆರೋಪ ಮಾಡಿದ್ದಾರೆ. ಶಾಸಕರ ಬೆಂಬಲಿಗರು ಪ್ರತಿನಿತ್ಯ ಗ್ರಾಮಸ್ಥರಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ನೀವು ನ್ಯಾಯಾಲಯದಲ್ಲಿ ಹಾಕಿರುವ ಕೇಸ್ ವಾಪಸ್ ಪಡೆಯಿರಿ. ಇಲ್ಲವಾದರೆ ಯಾವುದೇ ರೀತಿಯ ಪರಿಹಾರ ಕೊಡುವುದಿಲ್ಲ ಎಂದು ಆವಾಜ್ ಹಾಕುತ್ತಿದ್ದಾರಂತೆ. ನಿನ್ನೆ ತಡರಾತ್ರಿ ಶಾಸಕರ ಕೆಲ ಬೆಂಬಲಿಗರು ಉದ್ದೂರಿಗೆ ತೆರಳಿ ಸ್ಥಳೀಯರೊಂದಿಗೆ ಗಲಾಟೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಗ್ರಾಮಸ್ಥರು ಮತ್ತು ಶಾಸಕರ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ. ಸದ್ಯ ಗ್ರಾಮಸ್ಥರು ಪೆನ್ ಷನ್ ಮೊಹಲ್ಲಾ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಒಮಿಕ್ರಾನ್ ರೂಪಾಂತರಿಯಿಂದಾಗಿ ಅಮೆರಿಕದಲ್ಲಿ ಕೊವಿಡ್ ಉಲ್ಬಣ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಏರಿಕೆ

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು