ಹಾಸನ: ಸಕಲೇಶಪುರದ ಗುಳಗಳಲೆಯಲ್ಲಿ ಕಾಡಾನೆ ದಾಳಿ, ಇಬ್ಬರಿಗೆ ಗಾಯ

ಸಕಲೇಶಪುರ ತಾಲ್ಲೂಕಿನ ಗುಳಗಳಲೆ ಹಾಗೂ ಹೆಬ್ಬನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಕಾಡಾನೆ ದಾಳಿಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಹಾಸನ: ಸಕಲೇಶಪುರದ ಗುಳಗಳಲೆಯಲ್ಲಿ ಕಾಡಾನೆ ದಾಳಿ, ಇಬ್ಬರಿಗೆ ಗಾಯ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 14, 2023 | 4:50 PM

ಹಾಸನ: ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದೆ. ಸಕಲೇಶಪುರ (Sakaleshpur) ತಾಲ್ಲೂಕಿನ ಗುಳಗಳಲೆ ಹಾಗೂ ಹೆಬ್ಬನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಕಾಡಾನೆ ದಾಳಿಯಲ್ಲಿ (Elephant Attack) ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗುಳಗಳಲೆ ಗ್ರಾಮದ ಕುರ್ಚಿ ಕಾಫಿ ಎಸ್ಟೆಟ್‌ ರೈಟರ್ ಇನಾಯತ್ (45) ಮೇಲೆ ಕಾಡಾನೆ ದಾಳಿ ಮಾಡಿದೆ. ಈ ವೇಳೆ ಕೂದಲೆಳೆ ಅಂತರದಲ್ಲಿ ಇನಾಯತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನಾಯತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗಿದೆ.

ಈ ಘಟನೆಯ ಬೆನ್ನಲ್ಲೇ ಹೆಬ್ಬನಹಳ್ಳಿ ಗ್ರಾಮದಲ್ಲಿ ಯುವಕನ ಮೇಲೆ ಒಂಟಿಸಲಗ ದಾಳಿ ಮಾಡಿದೆ. ಅಸ್ಸಾಂ ಮೂಲದ ಕಾರ್ಮಿಕ ಹಬೀದ್ (26) ಮೇಲೆ ಏಕಾಏಕಿ ಸಲಗ ದಾಳಿ ಮಾಡಿದ್ದು, ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೀಟಮ್ಮ ಎಂಬ ಹೆಸರಿನ ಗ್ರೂಪ್‌ನಲ್ಲಿದ್ದ ಒಂಟಿಸಲಗ ಗುಂಪಿನಿಂದ ಬೇರ್ಪಟ್ಟು ಸಿಕ್ಕಸಿಕ್ಕವರ ಮೇಲೆ ದಾಳಿ ನಡೆಸುತ್ತಿದೆ. ಇದರಿಂದಾಗಿ ಗ್ರಾಮಸ್ಥರು ಭಯಭೀತಗೊಂಡಿದ್ದಾರೆ.

ಈ ಮಧ್ಯೆ ಎಚ್ಚರಿಕೆಯಿಂದ ಓಡಾಡುವಂತೆ ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವಂತೆ ಮಲೆನಾಡು ಭಾಗದ ಜನರು ಸರ್ಕಾರ ಹಾಗೂ ಇಲಾಖೆಯನ್ನು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್