AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಕಾಡಾನೆಗಳ ದಾಂಧಲೆ: ಕಾಳಗದಲ್ಲಿ ದಂತ ಮುರಿದುಕೊಂಡ ಭೀಮ

ಹಾಸನ ಜಿಲ್ಲೆಯಲ್ಲಿ ಕಾಡಾನೆ ಭೀಮನ ಹಾವಳಿ ಹೆಚ್ಚಿದೆ. ಮತ್ತೊಂದು ಆನೆ ಜೊತೆಗಿನ ಕಾಳಗದಲ್ಲಿ ಭೀಮ ತನ್ನ ದಂತ ಮುರಿದುಕೊಂಡಿದೆ. ಗ್ರಾಮಗಳಲ್ಲಿ ಭೀತಿ ಸೃಷ್ಟಿಸಿರುವ ಮದವೇರಿದ ಭೀಮ, ಅರಣ್ಯ ಇಲಾಖೆಗೆ ಸವಾಲಾಗಿದೆ. ಹಿಂದೆ ಚಿಕಿತ್ಸೆ ವೇಳೆ ಶಾರ್ಪ್ ಶೂಟರ್ ವೆಂಕಟೇಶ್‌ರನ್ನು ಕೊಂದ ಬಳಿಕ ಗಾಯ ಗುಣಮುಖವಾಗಿ ಎಲ್ಲಿಯೂ ಕಾಣಿಸಿಕೊಳ್ಳದೆ ಓಡಾಡುತ್ತಿದ್ದ ಭೀಮ ಇದೀಗ ಮತ್ತೆ ಮದವೇರಿದ ಕಾರಣ ಊರೂರು ಒಳಗೆ ಅಡ್ಡಾಡುತ್ತಾ ದಾಂದಲೆನಡೆಸುತ್ತಿದೆ.

ಹಾಸನದಲ್ಲಿ ಕಾಡಾನೆಗಳ ದಾಂಧಲೆ: ಕಾಳಗದಲ್ಲಿ ದಂತ ಮುರಿದುಕೊಂಡ ಭೀಮ
ದಂತ ಮುರಿದರೂ ಅರಣ್ಯ ಇಲಾಖೆಯ ಕೈಗೆ ಸಿಗದೆ ಕಾಡಿಸುತ್ತಿರುವ ಭೀಮ
ಮಂಜುನಾಥ ಕೆಬಿ
| Updated By: ಭಾವನಾ ಹೆಗಡೆ|

Updated on: Nov 09, 2025 | 5:34 PM

Share

ಹಾಸನ, ನವೆಂಬರ್ 9: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ (Hassan wild elephant rampage) ದಿನೇ ದಿನೇ ಹೆಚ್ಚುತ್ತಿದೆ. ಜನರ ಬಳಿಯೇ ಓಡಾಡುತ್ತಾ ಯಾರಿಗೂ ಏನೂ ಮಾಡುವುದಿಲ್ಲ ಎಂಬ ನಂಬಿಕೆ ಮೂಡಿಸಿದ್ದ ಭೀಮ, ಈಗ ಊರಿನ ಜನರಲ್ಲಿ ಆತಂಕ ಮೂಡುವಂತೆ ಮಾಡಿದೆ. ಗ್ರಾಮದೊಳಗೆ ಸಿಕ್ಕ ಸಿಕ್ಕದ್ದನ್ನು ಪುಡಿಗಟ್ಟಿ ಅಟ್ಟಹಾಸ ಮೆರೆಯುತ್ತಿರುವ ಬೃಹತ್ ಸಲಗ ಮತ್ತೊಂದು ಮದವೇರಿದ ಕಾಡಾನೆ ಜೊತೆಗಿನ ಕಾಳಗದಲ್ಲಿ ಒಂದು ದಂತವನ್ನೇ ಮುರಿದುಕೊಂಡಿದೆ.  ಇದೀಗ ಭೀಮ ನಡೆಸುತ್ತಿರುವ ದಾಂಧಲೆ ಅರಣ್ಯ ಇಲಾಖೆಗೆ ದೊಡ್ಡ ತಲೆನೋವು ತರಿಸಿದೆ.

ಮದವೇರಿದ ಆನೆಯ ಹುಚ್ಚಾಟ

ಕಳೆದ ಐದಾರು ವರ್ಷಗಳಿಂದ ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಬೇಲೂರು ತಾಲ್ಲೂಕಿನ ವಿವಿದೆಡೆ ಸಂಚಾರ ಮಾಡುತ್ತಾ, ಶಾಂತವಾಗಿ ಓಡಾಡುತ್ತಿದ್ದ ಭೀಮ ಇದೀಗ ಮತ್ತೆ ಆತಂಕ ಮೂಡಿಸಿದೆ. ಕಳೆದ ಒಂದು ವಾರದಿಂದ ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿಯ ಹಲವು ಗ್ರಾಮಗಳ ಮುಖ್ಯಬೀದಿಯಲ್ಲೇ ನಡೆದು ಹೋಗಿದ್ದ ಭೀಮ, ಇಂದು ಮತ್ತೊಂದು ದೈತ್ಯಾಕಾರದ ಕ್ಯಾಫ್ಟನ್ ಹೆಸರಿನ ಕಾಡಾನೆ ಜೊತೆಗೆ ಓಡಾಡುತ್ತಾ ಭೀತಿ ಸೃಷ್ಟಿಸಿದೆ.

ಇಂದು ಬೆಳಿಗ್ಗೆ ಬೇಲೂರು ತಾಲ್ಲೂಕಿನ ಜಗಬೋರನಹಳ್ಳೀ ಗ್ರಾಮದಲ್ಲಿ ಎರಡೂ ಆನೆಗಳು ಕಾಳಗ ಶುರುಮಾಡಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ರೋಷಾವೇಶದಿಂದ ಗ್ರಾಮದೊಳಗೆ ಎಂಟ್ರಿಯಾದ ಭೀಮ, ನೀರಿನ ಟ್ಯಾಂಕರ್ ಪುಡಿಗಟ್ಟಿ, ಎತ್ತಿನ ಗಾಡಿಯಲ್ಲ ಎತ್ತಿ ಬಿಸಾಡಿ ರೌದ್ರಾವತಾರ ಪ್​ರದರ್ಶನ ಮಾಡಿದೆ.ಕಾಡಾನೆ ಗ್ರಾಮದೊಳಗೆ ಬಂದಾಗ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಹಿಂಬಾಲಿಸಿದರೂ ಸಹ ಪಟಾಕಿ ಇಲ್ಲದೆ ಆನೆಯನ್ನು ಓಡಿಸಲು ಪರದಾಡಬೇಕಾಯಿತು.

ಕಾಡಾನೆಯೊಂದಿಗಿನ ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ

ಕ್ಯಾಫ್ಟನ್ ಜೊತೆಗಿನ ಕಾದಾಟದಲ್ಲಿ ಭೀಮನ ಬಲಬಾಗದ ದಂತ ಸಂಪೂರ್ಣ ಮುರಿದು ಬಿದ್ದಿದ್ದು, ಮತ್ತೊಂದು ಆನೆಗೂ ಗಾಯಗಳಾಗಿವೆ. ಸದ್ಯ ದಂತ ಮುರಿದುಕೊಂಡು ಕಾಫಿತೋಟದಲ್ಲಿ ಸೇರಿಕೊಂಡಿರುವ ಸಲಗ ನರಳಾಡುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಆನೆಯನ್ನು ಬೆನ್ನಟ್ಟಿ ಜನರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಿದ್ದಾರೆ.

ಶಾರ್ಪ್ ಶೂಟರ್ ಕೊಂದಿದ್ದ ಭೀಮ

2023ರ ಆಗಸ್ಟ್ ತಿಂಗಳಲ್ಲಿ ಬೆನ್ನಿನ ಕೆಳಬಾಗದಲ್ಲಿ ದೊಡ್ಡ ಗಾಯವಾಗಿ ನರಳಾಡಿದ್ದ ಭೀಮನಿಗೆ ಸೆಪ್ಟೆಂಬರ್ 25ರಂದು ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ವೈದ್ಯರ ಮೂಲಕ ಚಿಕಿತ್ಸೆ ಕೊಡಿಸಿದ್ದರು. ಆದರೆ ಅದು ಪರಿಣಾಮಕಾರಿಯಾಗದ್ದರಿಂದ ಆಗಸ್ಟ್ 31ರಂದು ಭೀಮನಿಗೆ ಅರವಳಿಕೆ ಮದ್ದು ನೀಡಿ ಚಿಕಿತ್ಸೆ ನೀಡಲಾಗಿತ್ತು. ಆಪರೇಷನ್ ನಡೆಸುತ್ತಿದ್ದ ವೇಳೆ ಮದವೇರಿದ್ದ ಭೀಮ ಏಕಾ ಏಕಿ ಅಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಶಾರ್ಪ್ ಶೂಟರ್ ವೆಂಕಟೇಶ್ ಮೇಲೆ ದಾಳಿ ಮಾಡಿ ಕೊಂದಿತ್ತು. ಬಳಿಕ ಗಾಯ ಗುಣಮುಖವಾಗಿ ಎಲ್ಲಿಯೂ ಕಾಣಿಸಿಕೊಳ್ಳದೆ ಓಡಾಡುತ್ತಿದ್ದ ಭೀಮ ಇದೀಗ ಮತ್ತೆ ಮದವೇರಿದ ಕಾರಣ ಊರೂರು ಒಳಗೆ ಅಡ್ಡಾಡುತ್ತಾ ದಾಂದಲೆನಡೆಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!