AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಬಿಜೆಪಿಯ ಕೆಲವರ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ದೇವೇಗೌಡ

ಲೋಕಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದೆ ಎಂಬಷ್ಟರಲ್ಲೇ ಬಿಜೆಪಿ ಜೆಡಿಎಸ್​​ ಮೈತ್ರಿಯಲ್ಲಿ ಇನ್ನೂ ಕೆಲವು ಸಣ್ಣಪುಟ್ಟ ಬಿರುಕು ಇರುವುದನ್ನು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರು ಒಪ್ಪಿಕೊಂಡಿದ್ದಾರೆ. ಹಾಸನದಲ್ಲಿ ಕೆಲವು ಬಿಜೆಪಿ ನಾಯಕರು ಸಹಕಾರ ಕೊಡುತ್ತಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ ಎಂದ ಅವರು, ಇದೆಲ್ಲ ದೊಡ್ಡ ವಿಷಯವಲ್ಲ. 28ಕ್ಕೆ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದಿದ್ದಾರೆ.

ಹಾಸನದಲ್ಲಿ ಬಿಜೆಪಿಯ ಕೆಲವರ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ದೇವೇಗೌಡ
ಹೆಚ್​ಡಿ ದೇವೇಗೌಡ (ಸಂಗ್ರಹ ಚಿತ್ರ)
ಮಂಜುನಾಥ ಕೆಬಿ
| Updated By: Ganapathi Sharma|

Updated on: Apr 24, 2024 | 12:46 PM

Share

ಹಾಸನ, ಏಪ್ರಿಲ್ 24: ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿದೆ ಇದೆ. ಈ ಮಧ್ಯೆ, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿರುವ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರು (HD Deve Gowda), ಹಾಸನದಲ್ಲಿ (Hassan) ಬಿಜೆಪಿಯ ಕೆಲವರ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಮೈತ್ರಿಯಲ್ಲಿ ಇನ್ನೂ ಪೂರ್ಣ ಒಮ್ಮತ ಮೂಡದಿರುವ ಬಗ್ಗೆ ಸುಳಿವು ನೀಡಿದ್ದಾರೆ. ಆದಾಗ್ಯೂ, ಮೈತ್ರಿ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ ಎಂದು ನೀವು ಕೇಳಬಹುದು. ನಾವು ಈ ಭಾಗದ ಎಲ್ಲಾ ಕ್ಷೇತ್ರದಲ್ಲಿ ಗೆಲ್ಲುವ ಸಾಧ್ಯತೆ ಇದೆ. ಹಾಸನದಲ್ಲಿ ಬಿಜೆಪಿಯ ಕೆಲವು ವ್ಯಕ್ತಿಗಳು ಸಹಕಾರ ನೀಡದೇ ಇರುವುದು ನಿಜ. ಮಂಡ್ಯದಲ್ಲಿ ಕುಮಾರಸ್ವಾಮಿಗೆ ಸುಮಲತಾ ಸಹಾಯ ಮಾಡಿಲ್ಲ. ಹಾಗೆಂದು ಅದರಿಂದ ಕುಮಾರಸ್ವಾಮಿಗೆ ಬಹಳ ಅಪಾಯ ಆಗಿಬಿಡುತ್ತದೆ ಎನ್ನೋ ಹಾಗಿಲ್ಲ ಎಂದು ದೇವೇಗೌಡರು ಹೇಳಿದರು.

ಕಳೆದ ಎರಡು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ದೊಡ್ಡ ಹೋರಾಟ ನಡೆದಿದೆ. ಸಂಪತ್ತು ಹಂಚಿಕೆ ಬಗ್ಗೆ ಎರಡು ಪಕ್ಷಗಳ ನಡುವ ದೊಡ್ಡ ಚರ್ಚೆ ನಡೆದಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹಲವು ವಿಚಾರ ಹೇಳಿದೆ. ಅವರು ಹೇಗಾದರೂ ಸರಿ, ಅಧಿಕಾರಿಕ್ಕೆ ಬರಬೇಕು ಎಂದು ಹೊರಟಿದ್ದಾರೆ. ಸಂಪತ್ತಿನ ಸರ್ವೇ ಹಾಗೂ ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಪಾಪ ಎಂದು ದೇವೇಗೌಡ ಲೇವಡಿ ಮಾಡಿದ್ದಾರೆ.

ನಾನು ಕಾವೇರಿ ಭಾಗದ ಎಲ್ಲ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದೇನೆ. ಪ್ರಧಾನಿ ಮೋದಿ ಅವರ ಜೊತೆ ಎರಡು ಸಭೆಗಳಲ್ಲಿ ಭಾಗಿಯಾಗಿದ್ದೇನೆ. ಎರಡನೆ ಹಂತದ ಚುನಾವಣೆ ಭಾಗದಲ್ಲೂ ಪ್ರಚಾರ ನಡೆಸುತ್ತೇನೆ. ಮೊದಲ‌ ಹಂತದ ಚುನಾವಣೆಯ ಈ ಭಾಗದಲ್ಲಿ ಬಿಜೆಪಿ ಜೆಡಿಎಸ್ ಸೇರಿ ಪ್ರಚಾರ ಮಾಡುತ್ತಿದ್ದೇವೆ. ಕಾವೇರಿ ಹೋರಾಟ ಜೀವನ್ಮರಣದ ಪ್ರಶ್ನೆ. ಹಾಗಾಗಿಯೇ ನಾವು 28ಕ್ಕೆ 28 ಸ್ಥಾನ‌ ಗೆಲ್ತೇವೆ. ಮೋದಿಯವರು ಡಿಎಂಕೆ ಹಂಗಿನಿಂದ ದೇಶ ಆಳುವ ಪರಿಸ್ಥಿತಿ ಬರುವುದಿಲ್ಲ. ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎಂದು ದೇವೇಗೌಡ ಆಶಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ‘ಕೈ’ಕೊಟ್ಟ ಚೆಂಬನ್ನು ಅಕ್ಷಯ ಪಾತ್ರೆಯಾಗಿಸಿ ಬಡವರಿಗೆ ಕೊಟ್ಟ ಮೋದಿ: ಹೆಚ್​ಡಿ ದೇವೇಗೌಡ

ಕಾಂಗ್ರೆಸ್ ಮುಸ್ಲಿಮರಿಗೆ ಸಂಪತ್ತು ಹಂಚಲು ಹೊರಟಿದೆ ಎಂಬ ಪ್ರಧಾನಿ ಮೋದಿ ಹೇಳಿಕೆ ವಿಚಾರವಾಗಿ ಕೇಳಲಾದ ಪ್ರಶ್ನೆಗೆ, ಈ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ನಾನು ಚಿಕ್ಕ ಮಗು ಅಲ್ಲ ಎಂದು ಮಾದ್ಯಮಗಳ ವಿರುದ್ಧವೇ ಗರಂ ಆದರು.

ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಎಲ್ಲಿ ನೋಡಿದರೂ ಜನ ಸಾಗರ. ಅಲ್ಲಿ ನಾನು ನಿನ್ನೆ ಏಳು ಸಭೆ ಮಾಡಿದ್ದೇನೆ. ಆ ಜನ ಸಾಗರದ ನಡುವೆ ಒಂದೊಂದು ಸಭೆ ಮೂರು ಗಂಟೆ ತಡವಾಗಿದೆ. ಅವರು (ಕಾಂಗ್ರೆಸ್) ದುಡ್ಡಿನ ಹೊಳೆ ಹರಿಸಿದರೂ ಗೆಲ್ಲುವುದು ನಾವೇ ಎಂದು ದೇವೇಗೌಡರು ಹೇಳಿದರು.

ಲೋಕಸಭೆ ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!