ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ: ಡಿಕೆಶಿ ಹೇಳಿದ್ದೇನು?
ಮುಖ್ಯಾಂಶಗಳು
- ನನ್ನ ವಿರುದ್ಧ ಮಾಡಿರುವ ಎಲ್ಲಾ ಆರೋಪಗಳು ಸುಳ್ಳು
- ಟಿವಿ9ಗೆ ಹಾಸನ ಡಿಸಿ ಕೆ.ಎಸ್.ಲತಾಕುಮಾರಿ ಪ್ರತಿಕ್ರಿಯೆ
- ನನ್ನ ವಿರುದ್ಧದ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದಿರುವೆ ಎಂದ ಡಿಸಿ
ಹಾಸನ ಡಿಸಿ ಲತಾಕುಮಾರಿ ತಮ್ಮ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಮಾಡಿರುವ ಭ್ರಷ್ಟಾಚಾರ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ವಾಟ್ಸಾಪ್ ಚಾಟ್ ಎಡಿಟ್ ಮಾಡಲಾಗಿದೆ ಎಂದು ಅವರ ಪಿ.ಎ. ಸೈಬರ್ ಕ್ರೈಮ್‌ಗೆ ದೂರು ನೀಡಿದ್ದಾರೆ. ಸತ್ಯ ಗೆಲ್ಲುತ್ತದೆ, ನಿಯಮಾನುಸಾರ ಕೆಲಸ ಮಾಡಿ ಎಂದು ಸಿಎಂ ಡಿಕೆಶಿ ಸಲಹೆ ನೀಡಿದ್ದಾರೆ.
ಹಾಸನ, ನವೆಂಬರ್ 08: ಭ್ರಷ್ಟಾಚಾರ ಆರೋಪ ವಿಚಾರವಾಗಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಹಾಸನ ಡಿಸಿ ಲತಾಕುಮಾರಿ ಆಕ್ರೋಶ ವ್ಯಕ್ತಪಡಿಸಿದ್ದು, ‘ನಾನು ಯಾವುದೇ ತಪ್ಪು ಮಾಡಿಲ್ಲ, ಮಾಡುತ್ತಿಲ್ಲ, ಮಾಡುವುದೂ ಇಲ್ಲ. ಈ ಬಗ್ಗೆ ತನಿಖೆ ನಡೆದು ಯಾರು ತಪ್ಪಿತಸ್ಥಿರಿದ್ದಾರೆ ಅವರ ವಿರುದ್ಧ ಕ್ರಮ ಆಗಲಿ ಎಂದಿದ್ದಾರೆ’. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನನ್ನನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಒಬ್ಬ ಜಿಲ್ಲಾಧಿಕಾರಿ ಬಗ್ಗೆ ಸುಳ್ಳು ಹೇಳುವುದನ್ನು ಸಹಿಲಾಗಲ್ಲ. ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಗಮನಕ್ಕೆ ತಂದಿರುವೆ. ಅವರು ಸತ್ಯ ಯಾವಾಗಲೂ ಗೆಲ್ಲುತ್ತದೆ, ನಿಯಮಾನುಸಾರ ಜನಪರ ಕೆಲಸ ಮಾಡಿ ಮತ್ತು ಧೈರ್ಯದಿಂದ ಇರಿ ಎಂದು ಸಲಹೆ ನೀಡಿದ್ದಾರೆ’ ಎಂದು ಡಿಸಿ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
