AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಹೆಚ್​ಡಿ ರೇವಣ್ಣಗೆ ಹೈಕೋರ್ಟ್‌ ಸಮನ್ಸ್‌; ಎರಡು ರಾಷ್ಟ್ರೀಯ ‌ಪಕ್ಷಗಳು ಜೆಡಿಎಸ್ ಮುಗಿಸಲು ಹೊರಟಿವೆ ಎಂದು ವಾಗ್ದಾಳಿ

ಹೆಚ್​ಡಿ ರೇವಣ್ಣರಿಗೂ ಈಗ ಹೈಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಈ ಸಂಬಂಧ ಹೊಳೆನರಸೀಪುರದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಕುಟುಂಬ ರಾಜಕೀಯದಲ್ಲಿ ಹೋರಾಟ ಮಾಡಿಕೊಂಡೇ ಬಂದಿರೋದು. ಎರಡು ರಾಷ್ಟ್ರೀಯ ‌ಪಕ್ಷಗಳು ಸೇರಿ ಈ ಪಕ್ಷ ಮುಗಿಸೋದಕ್ಕೆ ಹೊರಟಿದ್ರೆ ಏನ್‌ ಮಾಡೋಕಾಗುತ್ತೆ ಎಂದು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶಾಸಕ ಹೆಚ್​ಡಿ ರೇವಣ್ಣಗೆ ಹೈಕೋರ್ಟ್‌ ಸಮನ್ಸ್‌; ಎರಡು ರಾಷ್ಟ್ರೀಯ ‌ಪಕ್ಷಗಳು ಜೆಡಿಎಸ್ ಮುಗಿಸಲು ಹೊರಟಿವೆ ಎಂದು ವಾಗ್ದಾಳಿ
ಮಾಜಿ ಸಚಿವ ಹೆಚ್​ ಡಿ ರೇವಣ್ಣ
ಮಂಜುನಾಥ ಕೆಬಿ
| Edited By: ಆಯೇಷಾ ಬಾನು|

Updated on: Sep 04, 2023 | 3:57 PM

Share

ಹಾಸನ, ಸೆ.04: ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ (Prajwal Revanna) ಅವರು ಅನರ್ಹಗೊಂಡ ಬೆನ್ನಲ್ಲೇ ಶಾಸಕ ಹೆಚ್​ಡಿ ರೇವಣ್ಣ (HD Revanna) ಅವರಿಗೂ ಈಗ ಸಂಕಷ್ಟ ಎದುರಾಗಿದೆ. ಚುನಾವಣಾ ಅಕ್ರಮಕ್ಕೆ (Election malpractices) ಸಂಬಂಧಪಟ್ಟಂತೆ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಹೆಚ್​ಡಿ ರೇವಣ್ಣರಿಗೂ ಈಗ ಹೈಕೋರ್ಟ್‌ ಸಮನ್ಸ್‌ (High Court summons) ಜಾರಿ ಮಾಡಿದೆ. ಈ ಸಂಬಂಧ ಹೊಳೆನರಸೀಪುರದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಕುಟುಂಬ ರಾಜಕೀಯದಲ್ಲಿ ಹೋರಾಟ ಮಾಡಿಕೊಂಡೇ ಬಂದಿರೋದು. ಎರಡು ರಾಷ್ಟ್ರೀಯ ‌ಪಕ್ಷಗಳು ಸೇರಿ ಈ ಪಕ್ಷ ಮುಗಿಸೋದಕ್ಕೆ ಹೊರಟಿದ್ರೆ ಏನ್‌ ಮಾಡೋಕಾಗುತ್ತೆ ಎಂದು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹೆಚ್​ಡಿ ದೇವೇಗೌಡರು ಮುಖ್ಯಮಂತ್ರಿ, ‌ಪ್ರಧಾನ ಮಂತ್ರಿ ಎಲ್ಲವೂ ಆದ್ರಪ್ಪ. ನನಗೆ ಕೋರ್ಟ್ ನೋಟಿಸ್ ಕೊಟ್ಟರೆ ನಮ್ಮ ವಕೀಲರ ಮೂಲಕ ಉತ್ತರ ಕೊಡುತ್ತೇನೆ ಎಂದರು. ಇನ್ನು ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸುಪ್ರೀಂಕೋರ್ಟ್​ನಲ್ಲಿ ತಡೆ ಸಿಗುವ ವಿಶ್ವಾಸವಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಹೆಚ್​ಡಿ ರೇವಣ್ಣ, ಮುಂಚಿತವಾಗಿ ನಾನ್ಯಾಕೆ ಅದರ ಬಗ್ಗೆ ಹೇಳಲಿ. ಪ್ರಜ್ವಲ್ ಸುಪ್ರೀಂಕೋರ್ಟ್​ಗೆ ಹಾಕ್ತಾರೋ ಏನ್‌ ಮಾಡ್ತಾರೋ. ಅದು ಅವರಿಗೆ ಬಿಟ್ಟಿದ್ದು, ಅವರ ಕೇಸ್ ಅದು. ಅವರ ಕೇಸ್‌ನಲ್ಲಿ ಏನಾಗುತ್ತೋ ನಾನು ಏನ್ ಹೇಳಲಿ. ಕೆಲವರು ಭವಿಷ್ಯ ನುಡಿಯೋರು ಇದ್ದಾರೆ, ಅದನ್ನ ನಾನ್ಯಾಕೆ ಹೇಳಲಿ. ಕಾನೂನು ಏನಿದೆ ಅದನ್ನ ಪ್ರಜ್ವಲ್‌ರವರು ಮಾಡಿಕೊಳ್ತಾರೆ. ಪ್ರಜ್ವಲ್‌ರವರಿಗೇನು ಏಜ್ ಇಲ್ವಾ? ಅವರು ಏನ್ ಮಾಡಿದ್ದಾರೆ? ಎಂತು ಮಾಡಿದ್ದಾರೆ ಗೊತ್ತಿಲ್ಲ ನನಗೆ. ಅದನ್ನೆಲ್ಲಾ ತಿಳ್ಕೊಂಡು ಎಲ್ಲಾ ಆದ ಮೇಲೆ ಸವಿಸ್ತಾರವಾಗಿ ಹೇಳುತ್ತೇನೆ. ನಮ್ಮ ಜೀವನದಲ್ಲಿ ನಾವು ಯಾವ ಆಸ್ತಿಯನ್ನು ಮುಚ್ಚಿಟ್ಟಿಲ್ಲ. ಐಟಿ ರಿಪೋರ್ಟ್ ಅನ್ನು ನಾನು ಕೊಡ್ತೀನಿ ನನ್ನ ಹೆಂಡತಿನೂ ಕೊಡ್ತಾರೆ. ಪಡುವಲ ಹಿಪ್ಪೆ ಬಳಿ ತೆಂಗು, ಅಡಿಕೆ, ಸಪೋಟ, ಮಾವಿನ ತೋಟವು ಇದೆ. ಎಲ್ಲವನ್ನು ಚೆಕ್ ಮೇಲೆ ತೆಗೆದುಕೊಂಡಿರೋದು. ನನ್ನದೆಲ್ಲ ಚೆಕ್ ವ್ಯವಹಾರನೆ. ಪ್ರತಿ ಹಂತ ಹಂತದಲ್ಲೂ ಇನ್ಕಮ್ ಟ್ಯಾಕ್ಸ್​ಗೆ ಮಾಹಿತಿ ಕೊಡುತ್ತಿದ್ದೇನೆ ಎಂದು ಹೆಚ್​ಡಿ ರೇವಣ್ಣ ತಿಳಿಸಿದರು.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣ ಅನರ್ಹ ಬೆನ್ನಲ್ಲೇ ಇದೀಗ ತಂದೆ ಹೆಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು

ರಾಜ್ಯದ ಏಕೈಕ ಸಂಸತ್ ಸ್ಥಾನ ಹೊಂದಿದ್ದ ಜೆಡಿಎಸ್​ಗೆ ಹೈಕೋರ್ಟ್ ತೀರ್ಪು ಬಿಗ್ ಶಾಕ್ ನೀಡಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಮಾಣ ಪತ್ರ ಸಲ್ಲಿಸುವಾಗ ಪ್ರಜ್ವಲ್ ರೇವಣ್ಣ ತಮ್ಮ ಆಸ್ತಿ ವಿವರವನ್ನು ಮುಚ್ಚಿಟ್ಟಿದ್ದಾರೆಂಬ ಆರೋಪದದಲ್ಲಿ ಸಲ್ಲಿಕೆಯಾಗಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸದಸ್ಯತ್ವವನ್ನೇ ಅಸಿಂಧುಗೊಳಿಸಿ ಆದೇಶ ನೀಡಿದೆ. ಪ್ರಜ್ವಲ್ ರೇವಣ್ಣ ತಮ್ಮ ಸಂಸತ್ ಸದಸ್ಯತ್ವ ಕಳೆದುಕೊಂಡಿದ್ದಾರೆ. ಇದರ ನಡುವೆ ಹೆಚ್​ಡಿ ರೇವಣ್ಣರಿಗೂ ಈಗ ಹೈಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ.

ಹಾಸನಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Manjunath KB
Manjunath KB
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?