AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಪ್ರವಾಸ ಮುಗಿಸಿ ಬರುವಾಗ ದುರಂತ: ಹೇಮಾವತಿ ಹಿನ್ನೀರಿನಲ್ಲಿ ಮೂವರು ಯುವಕರು ಜಲಸಮಾಧಿ

ಹಾಸನದ ಗೊರೂರು ಬಳಿಯ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಮೂವರು ಬೆಂಗಳೂರು ಮೂಲದ ಯುವಕರು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಸದ್ಯ ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಶವ ಹೊರತೆಗೆಯಲು ಅಗ್ನಿಶಾಮಕ ದಳ ಮತ್ತು ಪೊಲೀಸರು ಶೋಧ ನಡೆಸಿದ್ದಾರೆ.

ಧರ್ಮಸ್ಥಳ ಪ್ರವಾಸ ಮುಗಿಸಿ ಬರುವಾಗ ದುರಂತ: ಹೇಮಾವತಿ ಹಿನ್ನೀರಿನಲ್ಲಿ ಮೂವರು ಯುವಕರು ಜಲಸಮಾಧಿ
ಮೃತರುImage Credit source: tv9 kannada
ಮಂಜುನಾಥ ಕೆಬಿ
| Edited By: |

Updated on: Jun 14, 2026 | 7:50 PM

Share

ಹಾಸನ, ಜೂನ್​​ 14: ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಪ್ರವಾಸಿ ತಾಣವಾದ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಹೋಗಿದ್ದ ಬೆಂಗಳೂರು ಮೂಲದ ಮೂವರು ಯುವಕರು (Youths) ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ (death). ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ಜಲಸಮಾಧಿಯಾದ ಕರುಣಾಜನಕ ಘಟನೆ ಹಾಸನ ತಾಲೂಕಿನ ಗೊರೂರು ಬಳಿಯಿರುವ ಹೇಮಾವತಿ ಜಲಾಶಯದಲ್ಲಿ ನಡೆದಿದೆ. ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

  • ಈಜಲು ಹೋಗಿ ಮೂವರು ಯುವಕರು ನೀರುಪಾಲು
  • ಹಾಸನ ತಾಲೂಕಿನ ಗೊರೂರು ಬಳಿಯಿರುವ ಹೇಮಾವತಿ ಜಲಾಶಯದಲ್ಲಿ ಘಟನೆ
  • ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು

ನಡೆದಿದ್ದೇನು?

ಬೆಂಗಳೂರು ಮೂಲದ ಹತ್ತು ಜನ ಯುವಕರ ತಂಡವೊಂದು ಧರ್ಮಸ್ಥಳ ಪ್ರವಾಸಕ್ಕೆ ತೆರಳಿತ್ತು. ಶ್ರೀಕ್ಷೇತ್ರದ ದರ್ಶನ ಮುಗಿಸಿ ವಾಪಸ್ ಬರುವಾಗ ಹಾಸನ ತಾಲೂಕಿನ ಗೊರೂರು ಬಳಿಯಿರುವ ಪ್ರಸಿದ್ಧ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಬಂದಿದ್ದಾರೆ. ಈ ವೇಳೆ ಚರ್ಚ್ ಬಳಿ ಹಿನ್ನೀರನ್ನು ಕಂಡು ಖುಷಿಯಾದ ಯುವಕರು ನೀರಿನಲ್ಲಿ ಈಜಲು ಮುಂದಾಗಿದ್ದಾರೆ. ಆದರೆ, ಈಜು ಬಾರದಿದ್ದರೂ ಯುವಕರು ಹಿನ್ನೀರಿಗೆ ಇಳಿದಿರುವುದೇ ಈ ಭೀಕರ ದುರಂತಕ್ಕೆ ಕಾರಣವಾಗಿದೆ. ಚರಣ್ (20), ಮಿಲನ್ (23) ಮತ್ತು ಮಣಿಕಂಠ (20) ಮೃತ ದುರ್ದೈವಿಗಳು.

ಸ್ನೇಹಿತರ ಕಣ್ಣೆದುರೇ ಮುಳುಗಿ ಸಾವು

ಇನ್ನು ಯುವಕರು ನೀರಿನಲ್ಲಿ ಮುಳುಗುತ್ತಿದ್ದಂತೆ ಆತಂಕಗೊಂಡ ಉಳಿದ ಸ್ನೇಹಿತರು, ರಕ್ಷಿಸುವಂತೆ ದಡಕ್ಕೆ ಬಂದು ಜೋರಾಗಿ ಕಿರುಚಾಡಿದ್ದಾರೆ. ಆದರೆ ಸಕಾಲಕ್ಕೆ ಯಾವುದೇ ನೆರವು ಸಿಗದ ಕಾರಣ ಮೂವರು ಯುವಕರು ಸ್ನೇಹಿತರ ಕಣ್ಣೆದುರೇ ನೀರಿನಲ್ಲಿ ಮುಳುಗಿ ದುರ್ಮರಣ ಹೊಂದಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ಕು ಮಕ್ಕಳು ಜಲಸಮಾಧಿ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಸದ್ಯ ಘಟನಾ ಸ್ಥಳಕ್ಕೆ ಗೊರೂರು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಮೃತದೇಹಗಳನ್ನು ಹೊರತೆಗೆಯಲು ತೀವ್ರ ಕಾರ್ಯಾಚರಣೆ ನಡೆಸಿದ್ದಾರೆ. ಜತೆಗಿದ್ದ ಗೆಳೆಯರನ್ನು ಕಣ್ಣೆದುರೇ ಕಳೆದುಕೊಂಡ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್