AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನಮ್ಮ ಅಂತ್ಯಕ್ರಿಯೆ: ಜು.20ರಂದು ಹೊಳೆನರಸೀಪುರ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಮಾಜಿ ಪ್ರಧಾನಿ ಹೆಚ್​​​​​ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದು, ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬೆಟ್ಟದ ರಂಗನಾಥ್ ತಪ್ಪಲಿನಲ್ಲಿ ಒಕ್ಕಲಿಗರ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದ್ದು, ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚೆನ್ನಮ್ಮ ಅಂತ್ಯಕ್ರಿಯೆ: ಜು.20ರಂದು ಹೊಳೆನರಸೀಪುರ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
Chennamma Devegowda
ಮಂಜುನಾಥ ಕೆಬಿ
| Edited By: |

Updated on:Jul 19, 2026 | 9:43 PM

Share

ಮುಖ್ಯಾಂಶಗಳು

  • ಸೋಮವಾರ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚೆನ್ನಮ್ಮ ದೇವೇಗೌಡ ಅಂತ್ಯಕ್ರಿಯೆ
  • ಮುಂಜಾಗ್ರತಾ ಕ್ರಮವಾಗಿ ಹೊಳೆನರಸೀಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
  • ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಿರುವುದರಿದ ರಜೆ ಘೋಷಣೆ ಮಾಡಿದ ಡಿಸಿ ಲತಾಕುಮಾರಿ

ಹಾಸನ, (ಜುಲೈ 19) : ಮಾಜಿ ಪ್ರಧಾನಿ ದೇವೇಗೌಡರ (HD Deve Gowda) ಪತ್ನಿ ಚೆನ್ನಮ್ಮ (Chennamma Devegowda) ನಿಧನರಾಗಿದ್ದು, ನಾಳೆ ಅಂದರೆ ಜುಲೈ 20ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದಲ್ಲಿರುವ ಕ್ಯಾತನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಹಾಸನ ಜಿಲ್ಲಾಡಳಿತ ಸಹ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ (school and colleges) ರಜೆ ಘೋಷಣೆ ಮಾಡಿದೆ. ಹೌದು..ಸೋಮವಾರ ಜುಲೈ 20ರಂದು ಹೊಳೆನರಸೀಪುರ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಲತಾಕುಮಾರಿ ಘೋಷಣೆ ಮಾಡಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ

ಮಾಜಿ ಪ್ರಧಾನಿ ಪತ್ನಿಯಾಗಿರುವುದರಿಂದ ಚೆನ್ನಮ್ಮನ ಅಂತ್ಯಕ್ರಿಯೆಗೆ ಅನೇಕ ಗಣ್ಯರು, ರಾಜಕೀಯ ನಾಯಕರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಅವರ ಅಭಿಮಾನಿಗಳು ಬರಲಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಸಂಚಾರಕ್ಕೆ ತೊಡಕಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಹೊಳೆನರಸೀಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನು ನೋಡಿ: ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ? ಕಾರಣ ಬಿಚ್ಚಿಟ್ಟ ಅಳಿಯ

ಹೊಳೆನರಸೀಪುರ ಪಟ್ಟಣ ಬಂದ್

ಚೆನ್ನಮ್ಮ ನಿಧನ ಹಿನ್ನೆಲೆ ನಾಳೆ (ಜುಲೈ 20) ಹೊಳೆನರಸೀಪುರ ಪಟ್ಟಣದ ಅಂಗಡಿ ಮುಗ್ಗಟ್ಟು ಬಂದ್ ಆಗಲಿವೆ. ವರ್ತಕರು ತಮ್ಮ ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಚನ್ನಮ್ಮರಿಗೆ ಸಂತಾಪ ಸೂಚಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಹೊಳೆನರಸೀಪುರ ಪಟ್ಟಣ ಸಂಪೂರ್ಣ ಸ್ತಬ್ಧವಾಗಲಿದೆ. ಇನ್ನು ಈಗಾಗಲೇ ಇಂದು ಮತ್ತು ನಾಳೆ (ಸೋಮವಾರ) ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ

ನಾಳೆ ಹೊಳೆನರಸೀಪುರದಲ್ಲೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ 9:30ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಬಳಿಕ 11:30ಕ್ಕೆ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದಲ್ಲಿರುವ ಕ್ಯಾತನಹಳ್ಳಿಗೆ ಮೃತದೇಹ ತಲುಪಲಿದೆ. ನಂತರ ಮಧ್ಯಾಹ್ನ 2 ರಿಂದ ಸಂಜೆ 4:15ರವರೆಗೆ ವಾಸ್ತು ಪ್ರಕಾರವೇ ಅಂತ್ಯಕ್ರಿಯೆ ನಡೆಯಲಿದೆ. ಪುರೋಹಿತರಾದ ಕಣ್ಣನ್‌ ಶರ್ಮಾ, ಮಹೇಶ್‌ ಶರ್ಮಾ, ನರಸಿಂಹಸ್ವಾಮಿ ಅಂತಿಮ ವಿಧಿವಿಧಾನ ನೆರವೇರಿಸಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.

ಗಣ್ಯರಿಗಾಗಿ 5 ಹೆಲಿಪ್ಯಾಡ್, 2 ಸಾವಿರ ಪೊಲೀಸ್‌ ಭದ್ರತೆ

ಹೊಳೆನರಸೀಪುರದ ರೇವಣ್ಣ ನಿವಾಸಕ್ಕೆ ಚೆನ್ನಮ್ಮ ಪಾರ್ಥಿವ ಶರೀರ ಆಗಮಿಸಲಿದು,. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ರೇವಣ್ಣ ನಿವಾಸದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಡಾಗ್ ಸ್ಕ್ವಾಡ್ ಹಾಗೂ ಬಾಂಬ್ ನಿಷ್ಕ್ರೀಯ ದಳ ಪರಿಶೀಲನೆ ಮಾಡಿದೆ. ಇನ್ನು  5 ಎಸ್ಪಿಗಳ ನೇತೃತ್ವದಲ್ಲಿ 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ. ಇನ್ನು ಅಂತ್ಯಕ್ರಿಯೆ ಬರುವ ಗಣ್ಯರಿಗಾಗಿ ಒಟ್ಟು ಐದು ಹೆಲಿಪ್ಯಾಡ್​​​ಗಳನ್ನು ನಿರ್ಮಾನಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:30 pm, Sun, 19 July 26

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್