Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಪತ್ನಿ ತುಂಡುಡುಗೆ ಧರಿಸುತ್ತಾಳೆಂದು ಕತ್ತು ಸೀಳಿ ಕೊಲೆ ಮಾಡಿ ಎಸ್ಕೇಪ್ ಆದ ಪತಿ

ಹಾಸನದಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. ತನ್ನ ಹೆಂಡತಿ ತುಂಡು ಬಟ್ಟೆ ಧರಿಸುತ್ತಾಳೆಂದು ಸಿಟ್ಟು ಮಾಡಿಕೊಂಡಿದ್ದ ಪತಿ ಆಕೆಯ ಜೊತೆ ಜಗಳವಾಡಿ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಪತ್ನಿಯನ್ನೇ ಕತ್ತು ಸೀಳಿ ಕೊಲೆ ಮಾಡಿದ್ದಾನೆ.

ಹಾಸನ: ಪತ್ನಿ ತುಂಡುಡುಗೆ ಧರಿಸುತ್ತಾಳೆಂದು ಕತ್ತು ಸೀಳಿ ಕೊಲೆ ಮಾಡಿ ಎಸ್ಕೇಪ್ ಆದ ಪತಿ
ಜ್ಯೋತಿ, ಜೀವನ್
Follow us
ಮಂಜುನಾಥ ಕೆಬಿ
| Updated By: ಆಯೇಷಾ ಬಾನು

Updated on: Dec 31, 2023 | 9:05 AM

ಹಾಸನ, ಡಿ.31: ತುಂಡುಡುಗೆ ಧರಿಸುತ್ತಾಳೆಂದು ಕತ್ತು ಸೀಳಿ ಪತ್ನಿಯನ್ನೇ ಪತಿ ಹತ್ಯೆಗೈದ (murder) ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಜ್ಯೋತಿ(22) ಕೊಲೆಯಾದ ಗೃಹಿಣಿ. ಜೀವನ್, ಕೊಲೆ ಮಾಡಿದ ಆರೋಪಿ. ತನ್ನ ಹೆಂಡತಿ ತುಂಡು ಬಟ್ಟೆ ಧರಿಸುತ್ತಾಳೆಂದು ಸಿಟ್ಟು ಮಾಡಿಕೊಂಡಿದ್ದ ಪತಿ ಆಕೆಯ ಜೊತೆ ಜಗಳವಾಡಿ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಪತ್ನಿಯನ್ನೇ ಕತ್ತು ಸೀಳಿ ಕೊಲೆ ಮಾಡಿದ್ದಾನೆ.

ಧಾರವಾಡ ಮೂಲದ ಜ್ಯೋತಿ ಹಾಗೂ ಜೀವನ್ ಇಬ್ಬರೂ ಪರಸ್ಪರ ಪ್ರೀತಿಸಿ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿಗೆ ತುಂಡು ಬಟ್ಟೆ ಧರಿಸುವುದು, ಮಾಡರ್ನ್​ ಉಡುಪು ಧರಿಸುವುದು ಅಂದ್ರೆ ಇಷ್ಟ. ಆದರೆ ಜೀವನ್​ಗೆ ಅದು ಇಷ್ಟ ಆಗುತ್ತಿರಲಿಲ್ಲ. ಹೀಗಾಗಿ ಬಟ್ಟೆ ವಿಚಾರಕ್ಕೆ ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಆದರೆ ನಿನ್ನೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ.

ನಿನ್ನೆ ಕೂಡ ಜ್ಯೋತಿ ಮಾಡರ್ನ್​ ಉಡುಪು ಧರಿಸಿ ಆಚೆ ಹೊರಟಿದ್ದಳು. ಆಗ ಜೀವನ್, ನಾನೇ ಡ್ರಾಪ್​ ಮಾಡುತ್ತೇನೆಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕುವಿನಿಂದ ಕುತ್ತಿಗೆ ಸೀಳಿ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಅರಸೀಕೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬೆಂಗಳೂರು: ರೈಲಿನಲ್ಲಿ ಸಾಗಿಸುತ್ತಿದ್ದ 60 ಕೆಜಿ ಗಾಂಜಾ ವಶ, 7 ಜನರ ಬಂಧನ

ಮಾಜಿ ರೌಡಿಶೀಟರ್​ ಕೊಲೆ

ಮಾಜಿ ರೌಡಿಶೀಟರ್​​ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಬಳಿ ಘಟನೆ ನಡೆದಿದ್ದು, ಸುರೇಶ್ ಅಲಿಯಾಸ್ ಕ್ಯಾಪ್ಟನ್ ಕೊಲೆಯಾದ ದುರ್ದೈವಿ. ಬೆಂಗಳೂರಿನ ಹನುಮಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿದ್ದ, ಸುರೇಶ್ ಕಳೆದ ನಾಲ್ಕೈದು ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ. ನಿನ್ನೆ ಹುಲಿಯೂರುದುರ್ಗ ಬಳಿ ತೆರಳಿದಾಗ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಗಾಂಜಾ ಮಾರುತ್ತಿದ್ದ ಆರೋಪಿ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧಿಸಲಾಗಿದೆ. ಆರೋಪಿ ಪೃಥ್ವಿಯನ್ನ ಬೆಂಗಳೂರು ಹೊರ ವಲಯ ಆನೇಕಲ್​​ನಲ್ಲಿ ಬಂಧಿಸಲಾಗಿದೆ. ಬಂಧಿತನಿಂದ 550 ಗ್ರಾಂ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಆನೇಕಲ್ ತಾಲ್ಲೂಕಿನ ಹಾಲ್ದೇನಹಳ್ಳಿ ನಿವಾಸಿಯಾಗಿರೋ ಆರೋಪಿ, ನಿನ್ನೆ ಕರ್ಪೂರು ಗೇಟ್ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ಕಾಲೇಜು ವಿಧ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡ್ತಿದ್ದಾಗ ಪೊಲೀಸರು ಲಾಕ್ ಮಾಡಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ