AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ತುಮಕೂರಿನವ, ಆದ್ರೆ ನನಗೆ ಹಾಸನ ಜಿಲ್ಲೆ ಉಸ್ತುವಾರಿ ಯಾಕೆ ಕೊಟ್ಟರೋ ಗೊತ್ತಿಲ್ಲ! ಅಸಮಾಧಾನ ಹೊರಹಾಕಿದರಾ ಸಚಿವ ಕೆ.ಎನ್​. ರಾಜಣ್ಣ

ನಾನು ತುಮಕೂರಿನವ. ನನಗೆ ಹಾಸನ ಜಿಲ್ಲೆ ಉಸ್ತುವಾರಿ ಯಾಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಹಾಸನ ಜಿಲ್ಲಾ ಉಸ್ತುವಾರಿ ನೀಡುತ್ತಾರೆಂದು ನಿರೀಕ್ಷಿಸಿರಲಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಸಚಿವ ಕೆಎನ್ ರಾಜಣ್ಣ ಹೇಳಿದ್ರು.

ಆಯೇಷಾ ಬಾನು
|

Updated on: Jun 17, 2023 | 1:27 PM

Share

ಹಾಸನ: ನಾನು ತುಮಕೂರಿನವ. ನನಗೆ ಹಾಸನ ಜಿಲ್ಲೆ ಉಸ್ತುವಾರಿ ಯಾಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಹಾಸನ(Hassan) ಜಿಲ್ಲಾ ಉಸ್ತುವಾರಿ ನೀಡುತ್ತಾರೆಂದು ನಿರೀಕ್ಷಿಸಿರಲಿಲ್ಲ. ಬೇರೆ ಯಾವುದಾದರೂ ಜಿಲ್ಲೆ ಕೊಡಬಹುದೆಂದುಕೊಂಡಿದ್ದೆ ಎಂದು ಹೇಳುವ ಮೂಲಕ ಹಾಸನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್​.ರಾಜಣ್ಣ(KN Rajanna) ಕಾಂಗ್ರೆಸ್(Congress) ನಿರ್ಧಾರದ ಬಗ್ಗೆ ಕೊಂಚ ಅಸಮಾಧಾನ ಹೊರಹಾಕಿದ್ದಾರೆ.

ಹಾಸನದಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ ಮಾಡಿ ಡಿಸಿ ಕಚೇರಿಯಲ್ಲಿ ಮಧುಗಿರಿ ಶಾಸಕ, ಹಾಸನ ಜಿಲ್ಲೆ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಅವರು, ಮುಂಗಾರು ಬಿತ್ತನೆ ಹಿನ್ನೆಲೆಯಲ್ಲಿ ಕೈಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡುತ್ತೇನೆ. ನನಗೆ ಹಾಸನ ಜಿಲ್ಲೆ ಉಸ್ತುವಾರಿ ಯಾಕೆ ಕೊಟ್ಟಿದಾರೊ ಗೊತ್ತಿಲ್ಲ. ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ, ಬಹುಶಃ ಬೇರೆ ಕಡೆ ಕೊಡಬಹುದು ಎಂದು ಕೊಂಡಿದ್ದೆ. ಶಿವಲಿಂಗೇಗೌಡ ಸಚಿವರಾಗಿದ್ರೆ ಅವರೇ ಉಸ್ತುವಾರಿ ಆಗೋರು. ಮುಂದೆ ಅವರೂ ಸಚಿವರು ಆಗಬಹುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಲ್ಲರಿಗು ಅನುಕೂಲ ಆಗಬೇಕು. ಜಿಲ್ಲೆ ಅಭಿವೃದ್ಧಿ ಆಗಿದೆ ಅದರ ಬಗ್ಗೆ ತಕರಾರು ಇಲ್ಲ. ಆದರೆ ಕಲವು ಕಡೆ ಸಾಕಷ್ಟು ಕೆಲಸ ಆಗಬೇಕು ಎಂದರು.

ಇದನ್ನೂ ಓದಿ:  Anti-encroachment drive: ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವಾಗ ಸರ್ಕಾರಕ್ಕೆ ಕೇವಲ ಬಡವರ ಮನೆ ಮಾತ್ರ ಕಾಣಿಸುತ್ತವೆಯೇ?

ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ತಾರತಮ್ಯ ಮಾಡುತ್ತಿದೆ

ನಾನು ಪಕ್ಷಾತೀತವಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ. ಧ್ವನಿ ಇಲ್ಲದವರಿಗೆ ಧ್ವನಿ ಆಗಬೇಕು ಎನ್ನೋದು ನಮ್ಮ ಪಕ್ಷದ ಉದ್ದೇಶ. ಚುನಾವಣೆ ವರೆಗೆ ಮಾತ್ರ ಪಕ್ಷ, ಈಗ ಎಲ್ಲರೂ ಒಂದೇ. ಕೇಂದ್ರ ಸರ್ಕಾರದ ನೀತಿಯ ವಿರುದ್ಧ ನಾವು ಹೋರಾಟಕ್ಕೆ ಕರೆ ಕೊಡಲಾಗಿದೆ. ಪಡಿತರ ನೀಡಲು ಹಿಂದೇಟು ಹಾಕುತ್ತಿರುವ ಬಗ್ಗೆ ಹೋರಾಟಕ್ಕೆ ಕರೆಕೊಡಲಾಗಿದೆ. ಅವರು ಅಕ್ಕಿ ಕೊಡಲಿಲ್ಲ ಎಂದರೆ ನಾವು ಸುಮ್ಮನೇ ಕೂರಲ್ಲ. ಬೇರೆ ಹಲವು ರಾಜ್ಯಗಳಲ್ಲಿ ಅಕ್ಕಿ ಇದೆ ಅಲ್ಲಿ ಖರೀದಿ ಮಾಡಿ ಜನರಿಗೆ ಕೊಡುತ್ತೇವೆ. ಕೇಂದ್ರ ಸರ್ಕಾರ ಚುನಾವಣಾ ಬಳಿಕ ಕರ್ನಾಟಕದ ಬಗ್ಗೆ ತಾರತಮ್ಯ ಮಾಡುತ್ತಿದೆ ಎಂದರು.

ಇನ್ನು ಇದೇ ವೇಳೆ ಸರ್ಕಾರ ಉಚಿತ ಅಕ್ಕಿ ಘೋಷಣೆ ವೇಳೆ ಎಫ್.ಸಿ.ಐ ಜೊತೆ ಚರ್ಚೆ ಮಾಡಿಲ್ಲ ಎಂಬ ವಿಚಾರಕ್ಕೆ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಜೊತೆ ಚರ್ಚೆ ಮಾಡಿ ನಾವು ಘೋಷಣೆ ಮಾಡಬೇಕಿಲ್ಲ. ಅವರೇನು ಪುಕ್ಕಟ್ಟೆ ಕೊಡ್ತಾರಾ ನಾವು ಖರೀದಿ ಮಾಡೋದು ಎಂದು ಎಫ್.ಸಿ.ಐ ಅಧಿಕಾರಿಗಳ ವಿರುದ್ಧ ಸಚಿವ ರಾಜಣ್ಣ ಆಕ್ರೋಶ ಹೊರ ಹಾಕಿದ್ರು. ಮೋದಿಯವರು ಎಲ್ಲರ ಖಾತೆಗೆ ಹದಿನೈದು ಲಕ್ಷ ಹಣ ಹಾಕ್ತೀನಿ ಅಂತಾ ಹೇಳಿದ್ರಲ್ವಾ. ಅವರು ಅನುಮತಿ ತಗೊಂಡು ಘೋಷಣೆ ಮಾಡಿದ್ರಾ ಎಂದು ಕಿಡಿಕಾರಿದ್ರು.

ಹಾಸನಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು