AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯ ನಾಲ್ವರು ಯುವಕರು ಹೃದಯಾಘಾತಕ್ಕೆ ಬಲಿ

ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ನಾಲ್ವರು ಯುವಕರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದು ಪೋಷಕರಲ್ಲಿ ಆತಂಕವನ್ನು ಹೆಚ್ಚಿಸಿದೆ. 19 ವರ್ಷದ ನಿಶಾಂತ್ ಗೌಡ ಅವರ ಸಾವು ಇದಕ್ಕೆ ಇತ್ತೀಚಿನ ಉದಾಹರಣೆ. ಒಂದು ತಿಂಗಳಲ್ಲಿ ನಾಲ್ವರು ಯುವಕರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬುದು ಆತಂಕಕಾರಿ ಸಂಗತಿಯಾಗಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆ ಗಮನ ಹರಿಸಬೇಕಿದೆ.

ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯ ನಾಲ್ವರು ಯುವಕರು ಹೃದಯಾಘಾತಕ್ಕೆ ಬಲಿ
ಮೃತ ಯುವಕ, ಯುವತಿಯರು
Follow us
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ

Updated on:Jun 11, 2025 | 7:16 PM

ಹಾಸನ, ಜೂನ್​ 11: ಇತ್ತೀಚಿಗೆ ಯುವಕ ಮತ್ತು ಯುವತಿಯರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಇಂದು (ಜೂ.11) ಹಾಸನ (Hassan) ಮೂಲದ ಓರ್ವ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ.ನಗರದಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದ 19 ವರ್ಷದ ನಿಶಾಂತ್ ಗೌಡ ಮೃತ ದುರ್ದೈವಿ. ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ನಿವಾಸಿಯಾಗಿರುವ ನಿಶಾಂತ್ ಗೌಡ ಡಿಪ್ಲೋಮಾ ಓದಿದ್ದರು. 15 ದಿನಗಳ ಹಿಂದೆ ಹಾಸನದಿಂದ ಬೆಂಗಳೂರಿಗೆ ಕೈಗಾರಿಕಾ ತರಬೇತಿಗೆಂದು ಬಂದಿದ್ದರು.

ಬೆಂಗಳೂರಿನಲ್ಲಿ ನಿಶಾಂತ್ ಗೌಡ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದರು. ಕಳೆದ ರಾತ್ರಿ ನಿಶಾಂತ್​ ಗೌಡ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಈ ವಿಚಾರವನ್ನು ಸ್ನೇಹಿತರಿಗೆ ತಿಳಿಸಿ, ಮಲಗಿಕೊಂಡಿದ್ದಾರೆ. ಬೆಳಗ್ಗೆ ಎಷ್ಟೊತ್ತಾದರೂ ನಿಶಾಂತ್​ ನಿದ್ದೆಯಿಂದ ಎದ್ದಿರಲಿಲ್ಲ. ಸ್ನೇಹಿತರು ಎಬ್ಬಿಸಲು ಮುಂದಾಗ ನಿಶಾಂತ್ ಮೃತಪಟ್ಟಿರುವುದು ಗೊತ್ತಾಗಿದೆ. ಈ ವಿಚಾರ ತಿಳಿದ ಜೆಪಿ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಇದನ್ನೂ ನೋಡಿ: ಬಾತ್‌ರೂಂನಲ್ಲೇ ಯುವತಿಗೆ ಹೃದಯಾಘಾತ, ನಿಂತಲ್ಲೇ ಕುಸಿದು ಬಿದ್ದು ಯುವಕ ಸಾವು

ಇದನ್ನೂ ಓದಿ
Image
ಹಾಸನ: ಆರು ವರ್ಷದ ಕರುಳ ಬಳ್ಳಿಯನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ತಾಯಿ
Image
ನೂಕು ನುಗ್ಗಲಿನಲ್ಲಿ ಬಸ್ ಹತ್ತುವ ಮುನ್ನ ಹುಷಾರ್... ಓದಲೇ ಬೇಕಾದ ಸುದ್ದಿ!
Image
ಇಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಇಡೀ ಕುಟುಂಬಕ್ಕೆ ವಿಷ ಹಾಕಿದ್ಲು
Image
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ

ನಾಲ್ವರು ಯುವಕರು ಹೃದಯಾಘಾತಕ್ಕೆ ಬಲಿ

ಒಂದು ತಿಂಗಳ ಅಂತರದಲ್ಲಿ ಹಾಸನ ಜಿಲ್ಲೆ ಮೂಲದ ಇಬ್ಬರು ಯುವತಿಯರು ಹಾಗೂ ಇಬ್ಬರು ಯುವಕರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೊಳೆನರಸೀಪುರ ಪಟ್ಟಣದ ಓರ್ವ ಯುವತಿ, ಅರಕಲಗೂಡು ತಾಲೂಕಿನ ಓರ್ವ ಯುವಕ, ಹಾಸನ ತಾಲೂಕಿನ ಓರ್ವ ಯುವತಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಹೊಳೆನರಸೀಪುರದ 20 ವರ್ಷದ ಯುವತಿ ಸಂದ್ಯ, ಮೇ 22 ರಂದು ಅರಕಲಗೂಡು ತಾಲ್ಲೂಕಿನ ಕೊಣನೂರು ಮೂಲದ 19 ವರ್ಷದ ಯುವಕ ಅಭಿಷೇಕ್ ಬೆಂಗಳೂರಿನಲ್ಲಿ ಮತ್ತು ಮೇ 28 ರಂದು ಹಾಸನ ತಾಲೂಕಿನ ಕೆಲವತ್ತಿ ಗ್ರಾಮದ 20 ವರ್ಷದ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಕವನ ಮೃತಪಟ್ಟಿದ್ದಾರೆ.  ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳ ಅಂತರದಲ್ಲಿ 18 ರಿಂದ 20 ವಯಸ್ಸಿನ ಒಳಗಿನ ನಾಲ್ವರು ಯುವಕರು ಹೃದಯಾಘಾತದಿಂದ ಸಾವಿಗೀಡಾಗುತ್ತಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಶಾಕ್​ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 pm, Wed, 11 June 25

Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!