ಹಾಸನ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 26, 2024 | 6:24 PM

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ಅರಕಲಗೂಡು(Arakalagudu) ತಾಲೂಕಿನ ರಾಗಿಮರೂರು ಸರ್ಕಾರಿ ಪ್ರೌಢಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ನಡೆದಿದೆ. ಕೂಡಲೇ ಅಸ್ವಸ್ಥ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹೆ್ಚ್ಚಿನ ವಿವರ ಇಲ್ಲಿದೆ.

ಹಾಸನ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
Follow us on

ಹಾಸನ, ಸೆ.26: ಇಂದು(ಗುರುವಾರ) ಮಧ್ಯಾಹ್ನ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ಹಾಸನ ಜಿಲ್ಲೆ‌ಯ ಅರಕಲಗೂಡು (Arakalagudu) ತಾಲೂಕಿನ ರಾಗಿಮರೂರು ಸರ್ಕಾರಿ ಪ್ರೌಢಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ನಡೆದಿದೆ. ಕೂಡಲೇ ತಾಲೂಕಿನ ಕೊಣನೂರಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ಅಸ್ವಸ್ಥ ವಿದ್ಯಾರ್ಥಿಗಳನ್ನು ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಅಸ್ವಸ್ಥಗೊಂಡ 8 ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ವಾಂತಿಯಿಂದ ಬಳಲುತ್ತಿರೋ ವಿದ್ಯಾರ್ಥಿಗಳು

ಹೌದು, ಮಧ್ಯಾಹ್ನ ಹಲ್ಲಿ ಬಿದ್ದು ಕಲುಷಿತಗೊಂಡ ಅಹಾರವನ್ನು ಸೇವಿಸಿದ ನೂರಾರು ಮಕ್ಕಳು ಏಕಾಎಕಿ ವಾಂತಿಯಿಂದ ಬಳಲು ಶುರುಮಾಡಿದ್ದಾರೆ. ಇದನ್ನು ಗಮನಿಸಿದ ಶಿಕ್ಷಕರು, ಕೂಡಲೇ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಇದೀಗ ಸುರಕ್ಷತಾ ಕ್ರಮ ವಹಿಸದ ಶಾಲಾ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ:ಚಿತ್ರದುರ್ಗ: ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಹೆಚ್ಚು ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

ಅಪ್ಡೇಟ್​ ಆಗುತ್ತಿದೆ…

 

Published On - 6:15 pm, Thu, 26 September 24