AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋಗಿ ಅಪ್ರಾಪ್ತ ಸೇರಿ ಇಬ್ಬರು ಸಾವು

ಇತ್ತೀಚೆಗೆ ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಿರುವವರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅದರಂತೆ ಇದೀಗ ಹಾಸನ ಜಿಲ್ಲೆಯ ಬೇಲೂರು(Belur) ತಾಲ್ಲೂಕಿನ ಬಳ್ಳೂರು ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋಗಿ ಅಪ್ರಾಪ್ತ ಸೇರಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಹಾಸನ: ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋಗಿ ಅಪ್ರಾಪ್ತ ಸೇರಿ ಇಬ್ಬರು ಸಾವು
ಬೇಲೂರು ತಾಲೂಕಿನಲ್ಲಿ ಕೆರೆಗೆ ಬಿದ್ದ ಚಪ್ಪಲಿ ತೆಗೆಯಲು ಹೋಗಿ ಅಪ್ರಾಪ್ತ ಸೇರಿ ಇಬ್ಬರು ಸಾವು
ಮಂಜುನಾಥ ಕೆಬಿ
| Edited By: |

Updated on:Aug 15, 2024 | 7:32 PM

Share

ಹಾಸನ, ಆ.15: ಕೆರೆಯಲ್ಲಿ ಮುಳುಗಿ ಓರ್ವ ಅಪ್ರಾಪ್ತ ಸೇರಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಬೇಲೂರು(Belur) ತಾಲ್ಲೂಕಿನ ಬಳ್ಳೂರು ಗ್ರಾಮದ ದೊಡ್ಡಕೆರೆಯಲ್ಲಿ ನಡೆದಿದೆ.  ಶ್ರೀಕಾಂತ್ (15) ಹಾಗೂ ವಿಜಯ್ (18) ಮೃತ ದುರ್ದೈವಿಗಳು. ಕೆರೆಗೆ ಮೀನು ಹಿಡಿಯಲು ತೆರಳಿದ್ದ ವೇಳೆ ದಿಢೀರ್ ಮಳೆ ಬಂದಿದೆ. ತಕ್ಷಣ ರಕ್ಷಣೆ ಪಡೆಯಲು ಕೆರೆಯ ಪಕ್ಕದಲ್ಲಿದ್ದ ಮರದ ಕೆಳಗೆ ಇಬ್ಬರು ನಿಂತಿದ್ದರು.

ಚಪ್ಪಲಿ ತೆಗೆಯಲು ಹೋಗಿ ಅಪ್ರಾಪ್ತ ಸೇರಿ ಇಬ್ಬರು ಸಾವು

ಈ ಸಂದರ್ಭದಲ್ಲಿ ವಿಜಯ್ ಎಂಬಾತನ ಒಂದು ಕಾಲಿನ ಚಪ್ಪಲಿ ಕೆರೆಗೆ ಬಿದ್ದಿದ್ದು, ಶ್ರೀಕಾಂತ್ ಚಪ್ಪಲಿ ತೆಗೆದುಕೊಳ್ಳಲು ನೀರಿಗೆ ಇಳಿದಿದ್ದಾನೆ. ಕೆರೆಯಲ್ಲಿ ಹೂಳು, ಗಿಡ, ಗಂಟೆಗಳು ಬೆಳೆದಿದ್ದರಿಂದ ಕೆರೆಯ ನೀರಲ್ಲಿ ಶ್ರೀಕಾಂತ್ ಸಿಲುಕಿ ಒದ್ದಾಡಿದ್ದಾನೆ. ಕೂಡಲೇ ಶ್ರೀಕಾಂತ್ ರಕ್ಷಣೆಗೆ ವಿಜಯ್ ತೆರಳಿದ್ದು, ಈಜು ಬಾರದಿದ್ದರಿಂದ ಕೆರೆಯಲ್ಲಿ ಮುಳುಗಿ ಇಬ್ಬರು ಅಸುನೀಗಿದ್ದಾರೆ. ಇದೀಗ ಮುಳುಗು ತಜ್ಞರು ಸ್ಥಳಕ್ಕಾಗಮಿಸಿ ಇಬ್ಬರ ಮೃತದೇಹವನ್ನ ಹೊರತೆಗೆಯಲಾಗಿದೆ. ಇನ್ನು ಮಕ್ಕಳನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಆನ್​​ಲೈನ್​ ಗೇಮ್ ಗೀಳಿಗೆ ಕುಟುಂಬವೇ ಸರ್ವನಾಶ! ಸಾಲಗಾರರ ಕಾಟಕ್ಕೆ ಹೆದರಿ ಮಗಳು, ಮಡದಿಯೊಂದಿಗೆ ಆತ್ಮಹತ್ಯೆ

ರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ಇಂಡಿಕಾ ಕಾರು

ಆನೇಕಲ್: ಗ್ಯಾರೇಜ್​ನಿಂದ ಮನೆಗೆ ಟಾಟಾ ಇಂಡಿಕಾ ಕಾರು ತರುವಾಗ ಹೊತ್ತಿ ಉರಿದ ಘಟನೆ ಆನೇಕಲ್​ನ ಕೋರ್ಟ್ ಹಿಂಭಾಗದಲ್ಲಿ ನಡೆದಿದೆ. ಕೋರ್ಟ್ ಹಿಂಭಾಗದ ಸರ್ಕಾರಿ ಸಾರ್ವಜನಿಕ ಬಾಲಕರ ವಿಧ್ಯಾರ್ಥಿ ನಿಲಯದ ಬಳಿ ಬರುತ್ತಿದ್ದಂತೆ ಧಿಡೀರನೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಧಗಧಗನೇ ಸುಟ್ಟು ಕರಕಲಾಗಿದೆ. ಕಾರಿನಿಂದ ಇಳಿದು ಚಾಲಕ ಬಚಾವ್ ಆಗಿದ್ದಾನೆ. ಗ್ಯಾರೇಜ್ ನಿಂದ ಮನೆಗೆ ತೆಗೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಠಾಣಾ ತಂಡ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:27 pm, Thu, 15 August 24

Follow Us
Manjunath KB
Manjunath KB
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್