ಆನ್​​ಲೈನ್​ ಗೇಮ್ ಗೀಳಿಗೆ ಕುಟುಂಬವೇ ಸರ್ವನಾಶ! ಸಾಲಗಾರರ ಕಾಟಕ್ಕೆ ಹೆದರಿ ಮಗಳು, ಮಡದಿಯೊಂದಿಗೆ ಆತ್ಮಹತ್ಯೆ

ಅದು ಗಂಡ-ಹೆಂಡತಿ, ಮಗಳು ಎಂದು ಸುಖವಾಗಿದ್ದ ಸಂಸಾರ, ದುಡಿಮೆಗಾಗಿ ಎರಡು ಕಾರು, ವಾಸಕ್ಕೆ ಸ್ವಂತ ಮನೆ, ಗಂಡನ ದುಡಿಮೆಗೆ ಸಾಥ್ ನೀಡಿದ್ದ ಮಡದಿ, ಇನ್ನೇನು ಬೇಕಿತ್ತು ಹೇಳಿ. ಆದರೆ ಆನ್ಲೈನ್ ಗೇಮ್ ಗೀಳಿಗೆ ಬಿದ್ದ ಮನೆಯ ಯಜಮಾನನ ಯಡವಟ್ಟಿಗೆ ಇಡೀ ಕುಟುಂಬವೇ ಸರ್ವನಾಶವಾಗಿದೆ. ಆಟವಾಡಿ ಮಾಡಿದ ಸಾಲ ಮಾಡಿ ತೀರಿಸಲಾಗದೆ ಏನೂ ಅರಿಯದ ಮಗಳು, ಮಡದಿಯೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ  ಕುರಿತು ಒಂದು ಸ್ಟೋರಿ ಇಲ್ಲಿದೆ.

ಆನ್​​ಲೈನ್​ ಗೇಮ್ ಗೀಳಿಗೆ ಕುಟುಂಬವೇ ಸರ್ವನಾಶ! ಸಾಲಗಾರರ ಕಾಟಕ್ಕೆ ಹೆದರಿ ಮಗಳು, ಮಡದಿಯೊಂದಿಗೆ ಆತ್ಮಹತ್ಯೆ
ಚನ್ನರಾಯಪಟ್ಟಣದಲ್ಲಿ ಸಾಲಗಾರರ ಕಾಟಕ್ಕೆ ಹೆದರಿ ಮಗಳು, ಮಡದಿಯೊಂದಿಗೆ ಆತ್ಮಹತ್ಯೆ
Follow us
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 15, 2024 | 6:59 PM

ಹಾಸನ, ಆ.15: ಜಿಲ್ಲೆಯ ಚನ್ನರಾಯಪಟ್ಟಣ(Channarayapatna)ದ ಶ್ರೀನಿವಾಸ್(43) ಆನ್ಲೈನ್ ಗೇಮ್ ಹುಚ್ಚಿಗೆ ಬಿದ್ದು ಇದ್ದ ಬದ್ದ ಆಸ್ತಿ ಮಾರಾಟ ಮಾಡಿ, ಮೈತುಂಬ ಸಾಲಮಾಡಿಕೊಂಡು ಕಡೆಗೆ ಸಾಲ ತೀರಿಸಲಾಗದೆ ಪತ್ನಿ ಶ್ವೇತಾ(36) ಹಾಗೂ ಮಗಳು ನಾಗಶ್ರೀ(13) ಜೊತೆಗೆ ಹೇಮಾವತಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಶನಿವಾರದಿಂದಲೇ ಶ್ರೀನಿವಾಸ್ ಪತ್ನಿ ಮಗಳ ಜೊತೆಗೆ ಕಾಣೆಯಾಗಿದ್ದರು. ಕುಟುಂಬ ಸದಸ್ಯರ ಸಂಪರ್ಕಕ್ಕೆ ಸಿಗದಿದ್ದಾಗ ಅನುಮಾನಗೊಡು ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ಕೊಟ್ಟಿದ್ದಾರೆ. ಕೇಸ್ ದಾಖಲಿಸಿಕೊಂಡು ಕಾಣೆಯಾದವರಿಗಾಗಿ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ನಿನ್ನೆ(ಆ.14) ಸಂಜೆ ನುಗ್ಗೆಹಳ್ಳೀ ಪೊಲೀಸ್ ಠಾಣೆ ವ್ಯಾಪ್ತಿಯ ಮುದ್ಲಾಪುರ ಹೇಮಾವತಿ ನಾಲೆಯಲ್ಲಿ ಗಂಡ-ಹೆಂಡತಿ ಶವ ಪತ್ತೆಯಾಗಿದ್ದು, ಇಂದು ಪುತ್ರಿ ಶವ ಕೂಡ ಪತ್ತೆಯಾಗಿದೆ.

ಆನ್ಲೈನ್ ರಮ್ಮಿ ಗೇಮ್ ಗೀಳಿಗೆ ಬಿದ್ದಿದ್ದ ಮನೆ ಯಜಮಾನ

ಎರಡು ಸ್ವಂತದ ಕಾರ್ ಇಟ್ಟುಕೊಂಡು ಚಾಲಕನಾಗಿ ಚೆನ್ನಾಗಿಯೇ ಜೀವನ ಸಾಗಿಸುತ್ತಾ ಬೆಂಗಳೂರಿನಲ್ಲಿದ್ದ ಶ್ರೀನಿವಾಸ್​ಗೆ ಶಿಕ್ಷಕಿಯಾಗಿದ್ದ ಪತ್ನಿ ಕೂಡ ದುಡಿಮೆಗೆ ಸಾಥ್ ಕೊಟ್ಟಿದ್ದರು. ವಾಸಕ್ಕೆ ಚನ್ನರಾಯಪಟ್ಟಣದಲ್ಲಿ ಒಂದು ಸ್ವಂತ ಮನೆ ಕೂಡ ಇತ್ತು. ಆದ್ರೆ, ಮೊಬೈಲ್ ಜಾಹೀರಾತು ನೋಡಿ ಆನ್ಲೈನ್ ರಮ್ಮಿ ಗೇಮ್ ಗೀಳಿಗೆ ಬಿದ್ದ ಶ್ರೀನಿವಾಸ್, ಕಾರು ಮತ್ತು ಮನೆ ಎಲ್ಲವನ್ನು ಮಾರಿಕೊಂಡು ಬೀದಿಪಾಲಾಗಿದ್ದ, ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿ ಆಟ ಆಡುವುದಕ್ಕೆ ಶುರುಮಾಡಿದ್ದ. ಕೆಲಸಬಿಟ್ಟು ಆನ್ಲೈನ್ ಗೇಮ್​ಗೆ ಸೀಮಿತವಾಗಿ ಸಾಲ ಹೆಚ್ಚಾದಾಗ ಕುಟುಂಬ ಸಮೇತ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಆನ್​ಲೈನ್​ ​​​ಲೂಡೋಗೇಮ್​​​ ಆಡಿ​​ 4.6 ಲಕ್ಷ ರೂ. ಕಳೆದುಕೊಂಡ ಮಹಿಳೆ; ಮಕ್ಕಳೊಂದಿಗೆ ಪರಾರಿ

ಇತ್ತೀಚಿನವರೆಗೂ ಬೆಂಗಳೂರಿನಲ್ಲಿ ಸೆಟಲ್ ಆಗಿದ್ದ ಶ್ರೀನಿವಾಸ್ ಕುಟುಂಬ ಚನ್ನಾಗಿಯೇ ಇತ್ತು. ಕೈತುಂಬ ದುಡಿದು ಸಂಸಾರ ಸಾಗಿಸುತ್ತಿದ್ದ ಶ್ರೀನಿವಾಸ್, ಇತ್ತೀಚೆಗೆ ಆನ್ಲೈನ್ ರಮ್ಮಿ ಗೀಳಿಗೆ ಬಿದ್ದಿದ್ದ. ಅಲ್ಪ ಅವಧಿಯಲ್ಲಿ ಲಕ್ಷ ಲಕ್ಷ ಹಣ ಗಳಿಸುವ ದುರಾಸೆಯ ಜಾಹೀರಾತಿನ ಕರಾಮತ್ತಿಗೆ ಮರುಳಾಗಿ ಇದ್ದಿದೆಲ್ಲವನ್ನು ಕಳೆದುಕೊಂಡು ಬರಿಗೈ ಆಗಿದ್ದ. ಕಾರು, ಮನೆ ಎಲ್ಲವನ್ನು ಮಾರಾಟ ಮಾಡಿ ದುಡಿಯೋದನ್ನೆ ನಿಲ್ಲಿಸಿಬಿಟ್ಟಿದ್ದ. ಬೆಂಗಳೂರು ಬಿಟ್ಟು ಚನ್ನರಾಯಪಟ್ಟಣಕ್ಕೆ ಬಂದು ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಸೇರಿಕೊಂಡಿದ್ದ ಪತ್ನಿ ಶ್ವೇತಾ, ದುಡಿದು ಸಂಸಾರ ಸಾಗಿಸುತ್ತಿದ್ದರು. ಆದ್ರೆ, ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿ ಆನ್ಲೈನ್ ಗೇಮ್ ಆಡಿ ಸಾಲಗಾರನಾದ ಶ್ರೀನಿವಾಸ್, ಸಾಲಗಾರರ ಕಾಟ ಹೆಚ್ಚಾದಾಗ ನೆಮ್ಮದಿ ಕಳೆದುಕೊಂಡಿದ್ದ. ಮಾಡಿದ ಸಾಲ ತೀರಿಸಲಾಗದೆ ಮಡದಿ ಹಾಗೂ ಮಗಳ ಜೊತೆಗೆ ಮನೆಬಿಟ್ಟು ಹೋಗಿ ಹೇಮಾವತಿ ಕಾಲುವೆಗೆ ಬಿದ್ದಿದ್ದಾನೆ.

ಶನಿವಾರದಿಂದಲೇ ಶ್ರೀನಿವಾಸ್ ಕುಟುಂಬ ಕಾಣುತ್ತಿಲ್ಲ ಎನ್ನುವುದನ್ನ ತಿಳಿದಾಗ ಮನೆಯವರು ಮಂಗಳವಾರ ಪೊಲೀಸರಿಗೆ ದೂರು ನೀಡಿದ್ದಾರೆ. ನಿನ್ನೆ ಮೃತದೇಹಗಳು ಪತ್ತೆಯಾಗಿದ್ದು, ಮೊದಲು ಮಿಸ್ಸಿಂಗ್ ದೂರು ಕೊಟ್ಟಿದ್ದ ಸಂಬಂಧಿಕರು ಇದೀಗ ಸಾಲ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ದೂರು ನೀಡಿದ್ದಾರೆ. ಸಾಲ ಕೊಟ್ಟವರು ಯಾರಾದರೂ ಕಿರುಕುಳ ಕೊಟ್ಟಿದ್ದರಾ?, ಅಥವಾ ಬೇರೆ ಏನಾದರೂ ಒತ್ತಡ ಇತ್ತೇ ಎನ್ನುವುದು ಸೇರಿ ಎಲ್ಲ ಆ್ಯಂಗಲ್​ನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತದೇಹಗಳನ್ನ ಹೊರ ತೆಗೆದು ಹಾಸನದ ವೈದ್ಯಕೀಯ ಬೋದಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ತನಿಖೆ ಮುಂದುವರೆದಿದೆ.

ಒಟ್ಟಿನಲ್ಲಿ ಆನ್ಲೈನ್ ಗೇಮ್ ವ್ಯಾಮೋಹಕ್ಕೆ ಮರುಳಾಗಿ ಕಷ್ಟಪಟ್ಡು ದುಡಿಯೋದು ಬಿಟ್ಟು, ಮೊಬೈಲ್ ಹಿಡಿದು ಆಟಕ್ಕೆ ಕುಂತ ಮನೆ ಯಜಮಾನ ಎಲ್ಲವನ್ನು ಕಳೆದುಕೊಂಡು ಬರಿಗೈ ಆಗಿದ್ದ. ಮಾಡಿದ ಸಾಲಕ್ಕೆ ಇದ್ದದ್ದನ್ನೆಲ್ಲಾ ಮಾರಾಟ ಮಾಡಿದವನು ಕುಟುಂಬ ಸಮೇತವಾಗಿ ಜೀವವನ್ನು ಕಳೆದುಕೊಂಡಿದ್ದಾನೆ. ಆನ್ಲೈನ್ ಗೇಮ್​ಗಳ ಹಾವಳಿಗೆ ಹಲವು ಕುಟುಂಬಗಳು ಬೀದಿಪಾಲಾಗ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸಂಬಂಧಿಕರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್