AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ 3 ದಿನಗಳಿಂದ ಒಂದೇ ಸ್ಥಳದಲ್ಲಿ ನಿಂತಲ್ಲೇ ನಿಂತು ಕೊನೆಗೆ ಪ್ರಾಣ ಬಿಟ್ಟ ಹೆಣ್ಣಾನೆ

ಹಾಸನ ಜಿಲ್ಲೆಯ ಸಕಲೇಶಪುರ(Sakleshpur) ತಾಲ್ಲೂಕಿನ ವಣಗೂರು ಬಳಿ ಅನಾರೋಗ್ಯದಿಂದ ಹೆಣ್ಣಾನೆವೊಂದು ಕಳೆದ ಮೂರು ದಿನಗಳಿಂದ ಒಂದೇ ಸ್ಥಳದಲ್ಲಿ ನಿಂತಲ್ಲೇ ನಿಂತು ಕೊನೆಗೆ ಪ್ರಾಣ ಬಿಟ್ಟ ದಾರುಣ ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ 3 ದಿನಗಳಿಂದ ಒಂದೇ ಸ್ಥಳದಲ್ಲಿ ನಿಂತಲ್ಲೇ ನಿಂತು ಕೊನೆಗೆ ಪ್ರಾಣ ಬಿಟ್ಟ ಹೆಣ್ಣಾನೆ
ನಿಂತಲ್ಲೇ ನಿಂತು ಕೊನೆಗೆ ಪ್ರಾಣ ಬಿಟ್ಟ ಹೆಣ್ಣಾನೆ
ಮಂಜುನಾಥ ಕೆಬಿ
| Edited By: |

Updated on: Oct 03, 2024 | 3:48 PM

Share

ಹಾಸನ, ಅ.03: ಅನಾರೋಗ್ಯದಿಂದ ಹೆಣ್ಣಾನೆವೊಂದು ಕಳೆದ ಮೂರು ದಿನಗಳಿಂದ ಒಂದೇ ಸ್ಥಳದಲ್ಲಿ ನಿಂತಲ್ಲೇ ನಿಂತು ಕೊನೆಗೆ ಪ್ರಾಣ ಬಿಟ್ಟ ದಾರುಣ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ(Sakleshpur) ತಾಲ್ಲೂಕಿನ ವಣಗೂರು ಬಳಿ ನಡೆದಿದೆ. ಅನಾರೋಗ್ಯದಿಂದ ಆಹಾರ ತ್ಯಜಿಸಿ ನರಳುತ್ತಿದ್ದ ಹೆಣ್ಣಾನೆಗೆ ಇಂದು(ಗುರುವಾರ) ಅರಣ್ಯ ಇಲಾಖೆಯವರು ಚಿಕಿತ್ಸೆ ನೀಡಲು ಮುಂದಾಗಿದ್ದರು. ಈ ವೇಳೆ ಮೃತಪಟ್ಟಿರುವುದು ಬೆಳಿಕಿಗೆ ಬಂದಿದೆ. ಸುಮಾರು ಇಪ್ಪತ್ತು ವರ್ಷದ ಹೆಣ್ಣಾನೆ ಇದಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳದಲ್ಲೇ ಅಂತ್ಯಕ್ರಿಯೆ ಮಾಡಲು ನಿರ್ಧರಿಸಲಾಗಿದೆ.

ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಸ್ಪರ್ಶ; ಲೈನ್ ಮ್ಯಾನ್ ಸಾವು

ದಾವಣಗೆರೆ: ತಾಲೂಕಿನ ಮಳಲ್ಕೆರೆ ಗ್ರಾಮದಲ್ಲಿ ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಮುತ್ತುರಾಜ್‌(32) ಎಂಬಾತ ಸಾವನ್ನಪ್ಪಿದ ಘಟನೆ ನಡೆದಿದೆ. ಇನ್ನು ಗಂಟೆ ಗಟ್ಟಲೇ ಟಿಸಿ ಮೇಲೆಯೇ ಮೃತದೇಹ ನೇತಾಡಿದ್ದು, ವಿದ್ಯುತ್ ತೆಗೆಯಲಾಗಿತ್ತಾ, ಇಲ್ಲವಾ ಎನ್ನುವುದು ಸಂಶಯಕ್ಕೆ ಕಾರಣವಾಗಿದೆ. ಇದರ ಜೊತೆಗೆ ಎಲ್‌ಸಿ ತೆಗೆದುಕೊಂಡಿದ್ದರೂ ವಿದ್ಯುತ್ ಪ್ರವಹಿಸಿದ್ದು ಹೇಗೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಿದ್ದು, ಈ ಕುರಿತು ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಶಿವಮೊಗ್ಗ: ಕಾಡಾನೆ ದಾಳಿಗೆ ಕೃಷಿ ಕಾರ್ಮಿಕ ಸಾವು; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ವಿದ್ಯುತ್ ತಗುಲಿ ಯುವಕ ಸಾವು

ಶಿವಮೊಗ್ಗ: ಹೊಳೆಹೊನ್ನೂರಿನ ಆನವೇರಿ ಹನುಮಂತಾಪುರದಲ್ಲಿ ವಿದ್ಯುತ್ ತಂತಿ ತಗುಲಿ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ರಕ್ಷಿತ್(22) ಮೃತ ಯುವಕ. ಶೆಡ್‌ಗೆ ಸಂಪರ್ಕ ಕಲ್ಪಿಸುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ದುರ್ಘಟನೆ ನಡೆದಿದೆ. ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ