ಕುಡಿದ ಅಮಲಿನಲ್ಲಿ ಚಾಲಕ ದಾರಿ ಮಧ್ಯೆ ಆ್ಯಂಬುಲೆನ್ಸ್ ನಿಲ್ಲಿಸಿದ್ದ ಪ್ರಕರಣ: ರೋಗಿ ಸಾವು

| Updated By: ಸಾಧು ಶ್ರೀನಾಥ್​

Updated on: Dec 27, 2021 | 10:03 AM

ಆ್ಯಂಬುಲೆನ್ಸ್ ಮೂಲಕ ಅವರನ್ನು ಬೆಂಗಳೂರಿನತ್ತ ಕರೆದೊಯ್ಯಲಾಗಿತ್ತು. ಆದರೆ ಆ್ಯಂಬುಲೆನ್ಸ್ ಚಾಲಕ ಮಧ್ಯೆ ಮಧ್ಯೆ ಆ್ಯಂಬುಲೆನ್ಸ್ ನಿಲ್ಲಿಸುತ್ತಿದ್ದ. ಹುಣಸೂರು ಬಳಿ ಇನ್ನು ಮುಂದಕ್ಕೆ ಹೋಗಲು ಸಾಧ್ಯವೇ ಇಲ್ಲ ಎಂದು ಚಾಲಕ ಆ್ಯಂಬುಲೆನ್ಸ್ ಅನ್ನು ನಿಲ್ಲಿಸಿಬಿಟ್ಟಿದ್ದ.

ಕುಡಿದ ಅಮಲಿನಲ್ಲಿ ಚಾಲಕ ದಾರಿ ಮಧ್ಯೆ ಆ್ಯಂಬುಲೆನ್ಸ್ ನಿಲ್ಲಿಸಿದ್ದ ಪ್ರಕರಣ: ರೋಗಿ ಸಾವು
ಕುಡಿದ ಅಮಲಿನಲ್ಲಿ ದಾರಿ ಮಧ್ಯೆ ಆ್ಯಂಬುಲೆನ್ಸ್ ನಿಲ್ಲಿಸಿದ್ದ ಪ್ರಕರಣ: ರೋಗಿ ಸಾವು
Follow us on

ಮೈಸೂರು: ಚಾಲಕ ತಾನು ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ನಿಲ್ಲಿಸಿದ್ದ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರೋಗಿ ಸಾವನ್ನಪ್ಪಿದ್ದಾರೆ. ಹಾಸನದ ಸಿದ್ದಾಪುರ ಗ್ರಾಮದ 30 ವರ್ಷದ ತೀರ್ಥಾನಂದ ಮೃತಪಟ್ಟವರು. ಡಿಸೆಂಬರ್ 25ರ ರಾತ್ರಿ ಸದರಿ ಆ್ಯಂಬುಲೆನ್ಸ್ ಮಡಿಕೇರಿಯಿಂದ ಬೆಂಗಳೂರಿಗೆ ಹೊರಟಿತ್ತು. ಆದರೆ ಚಾಲಕ ಮೈಸೂರಿನ ಹುಣಸೂರು ನಗರದಲ್ಲಿ ಆ್ಯಂಬುಲೆನ್ಸ್ ನಿಲ್ಲಿಸಿಬಿಟ್ಟಿದ್ದ. ಪೇಷೆಂಟ್ ತೀರ್ಥಾನಂದ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಪೋಷಕರು ಆತನನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿನ ವೈದ್ಯರು ಬೆಂಗಳೂರು ನಿಮ್ಹಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದರು.

ಆ್ಯಂಬುಲೆನ್ಸ್ ಮೂಲಕ ಅವರನ್ನು ಬೆಂಗಳೂರಿನತ್ತ ಕರೆದೊಯ್ಯಲಾಗಿತ್ತು. ಆದರೆ ಆ್ಯಂಬುಲೆನ್ಸ್ ಚಾಲಕ ಮಧ್ಯೆ ಮಧ್ಯೆ ಆ್ಯಂಬುಲೆನ್ಸ್ ನಿಲ್ಲಿಸುತ್ತಿದ್ದ. ಹುಣಸೂರು ಬಳಿ ಇನ್ನು ಮುಂದಕ್ಕೆ ಹೋಗಲು ಸಾಧ್ಯವೇ ಇಲ್ಲ ಎಂದು ಚಾಲಕ ಆ್ಯಂಬುಲೆನ್ಸ್ ಅನ್ನು ನಿಲ್ಲಿಸಿಬಿಟ್ಟಿದ್ದ. ತಕ್ಷಣ ಸ್ಥಳೀಯರು ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಟ್ಟಿದ್ದರು. ರೋಗಿಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತೀರ್ಥಾನಂದ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಈಗಾಗಲೇ ಆ್ಯಂಬುಲೆನ್ಸ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಸ್ಥಳದಲ್ಲೇ ಸಾವು, ಕಾರು ನಿಲ್ಲಿಸದೇ ಎಸ್ಕೇಪ್ ಆದ ಚಾಲಕ
ಬೆಂಗಳೂರು: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ಬೆಂಗಳೂರಿನ ನಾಗರಬಾವಿಯ ರಿಂಗ್ ರಸ್ತೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬೇನಂ ಬರ್ಮನ್(42) ಮೃತ ದುರ್ದೈವಿ. ಘಟನೆ ಬಳಿಕ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದು ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೇನಂ ಬರ್ಮನ್ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದಿದೆ. ಈ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದೆ. ನಾಯಂಡನಹಳ್ಳಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ, ಕಾಮಾಕ್ಷಿಪಾಳ್ಯದ ಸಂಬಂಧಿಕರ ಮನೆಯಿಂದ ಹಿಂತಿರುಗುವ ವೇಳೆ ದುರ್ಘಟನೆ ಸಂಭವಿಸಿದೆ. ಅಪಘಾತದ ನಂತರ ಕಾರನ್ನ ನಿಲ್ಲಿಸದೇ ಕಾರು ಚಾಲಕ ಪರಾರಿಯಾಗಿದ್ದಾನೆ. ಸ್ಥಳೀಯರು ಹಾಗೂ ಪ್ರತ್ಯಕ್ಷದರ್ಶಿಗಳಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Local Body Election: ಭಾಗ್ಯನಗರದ ಮತಗಟ್ಟೆ 5 ರಲ್ಲಿ ಮಾನಸಿಕ ಅಸ್ವಸ್ಥ ದೇವೇಂದ್ರ ಮತದಾನ|Tv9Kannada

ಇದನ್ನು ಓದಿ:
ಡಿ. 31ರಿಂದ ಬೆಂಗಳೂರಿಗರಿಗೆ ಮತ್ತೊಂದು ಶಾಕ್, ಕಸ ವಿಲೇವಾರಿ ಗುತ್ತಿಗೆದಾರರಿಂದಲೂ ಪ್ರತಿಭಟನೆಗೆ ಕರೆ, ಏನಿದೆ ಕರ್ನಾಟಕ ಬಂದ್​ ಪರಿಸ್ಥಿತಿ?

Published On - 9:56 am, Mon, 27 December 21