AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ನಿಮ್ಮ ಧರ್ಮ’: ವಿವಾದ ಸೃಷ್ಟಿಸಿದ ಸಚಿವ ಶಿವಲಿಂಗೇಗೌಡರ ಹೇಳಿಕೆ

ಸಕಲೇಶಪುರ ಪ್ರಜಾಸೇವೆ ಆಂದೋಲನ ಸಭೆಯಲ್ಲಿ "ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ನಿಮ್ಮ ಧರ್ಮ" ಎಂದು ಹೇಳುವ ಮೂಲಕ ಸಚಿವ ಶಿವಲಿಂಗೇಗೌಡರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಸಚಿವರ ಹೇಳಿಕೆ ಬಗ್ಗೆ ಕಿಡಿ ಕಾರಿರುವ ವಿಪಕ್ಷ ನಾಯಕ ಆರ್​​. ಅಶೋಕ್​​, ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳ ಸಮ್ಮುಖದಲ್ಲಿ ಈ ಹೇಳಿಕೆ ನೀಡಿರುವುದು ಲಂಚವನ್ನು ಅಧಿಕೃತಗೊಳಿಸಿದಂತಿದೆ ಎಂದವರು ಆರೋಪಿಸಿದ್ದಾರೆ.

'ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ನಿಮ್ಮ ಧರ್ಮ': ವಿವಾದ ಸೃಷ್ಟಿಸಿದ ಸಚಿವ ಶಿವಲಿಂಗೇಗೌಡರ ಹೇಳಿಕೆ
ವಿವಾದ ಸೃಷ್ಟಿಸಿದ ಸಚಿವ ಶಿವಲಿಂಗೇಗೌಡರ ಹೇಳಿಕೆ Image Credit source: Tv9 Kannada
ಮಂಜುನಾಥ ಕೆಬಿ
| Edited By: |

Updated on: Sep 20, 2026 | 6:28 PM

Share

ಹಾಸನ, ಸೆಪ್ಟೆಂಬರ್​​ 20: ಸಕಲೇಶಪುರ ತಹಸಿಲ್ದಾರ್ ಕಚೇರಿ ಆವರಣದಲ್ಲಿ ನಡೆದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸಚಿವ ಶಿವಲಿಂಗೇಗೌಡ ಮಾತಿನ ಬರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ. ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ನಿಮ್ಮ ಧರ್ಮ. ಆದರೆ ಬಲತ್ಕಾರವಾಗಿ ದುಡ್ಡು ಕಿತ್ತುಕೊಳ್ಳೋದು ಸರಿಯಲ್ಲ ಎಂದು ಸಚಿವರು ಹೇಳಿದ್ದಾರೆ. ಸಚಿವರ ಮಾತಿಗೆ ಸ್ಥಳದಲ್ಲಿದ್ದ ಜನರು ಕೆರಳಿದ್ದು, ಗೌರವಯುತವಾಗಿ ಯಾಕೆ ಕೊಡಬೇಕು? ಅವರಿಗೆ ಸಂಬಳ ಕೊಡಲ್ವಾ? ಎಂದು ಪ್ರಶ್ನಿಸಿದ್ದಾರೆ. ಈ ವಿಡಿಯೋ ಭಾರಿ ವೈರಲ್​​ ಆಗಿದ್ದು, ಸಚಿವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗೆ ಗ್ರಾಸವಾಗಿದೆ.

ಹೇಳಿಕೆ ಬಳಿಕ ಸ್ಪಷ್ಟನೆ ಕೊಟ್ಟ ಸಚಿವ ಶಿವಲಿಂಗೇಗೌಡ

ತಾನು ಹೇಳಿದ್ದು ಗೌರವ ಕೊಡಿ ಎಂದೇ ಹೊರತು ಲಂಚ‌ಕೊಡಿ ಅಂದಿಲ್ಲ ಎಂದು ಸಚಿವ ಶಿವಲಿಂಗೇಗೌಡ ಬಳಿಕ ಸ್ಪಷ್ಟನೆ ನೀಡಿದ ಪ್ರಸಂಗವೂ ಈ ವೇಳೆ ನಡೆದಿದೆ. ಆದರೂ ಸಚಿವರ ಹೇಳಿಕೆ ಬಗ್ಗೆ ವ್ಯಕ್ತಿಯೋರ್ವ ಆಕ್ಷೇಪ ತೆಗೆದ ಹಿನ್ನೆಲೆ, ಆತ ಸಭೆ ಹಾಳುಮಾಡಲು ಬಂದಿದ್ದಾನೆ ಎಂದ ಸಚಿವರು ಪೊಲೀಸರ ಮೂಲಕ ವ್ಯಕ್ತಿಯನ್ನು ಹೊರಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: ‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಸಿಎಂರನ್ನ ಹಾಡಿ ಹೊಗಳಿದ ಬಿಜೆಪಿ ನಾಯಕ

ಸಚಿವ ಶಿವಲಿಂಗೇಗೌಡ ಹೇಳಿಕೆ ವಿರುದ್ಧ ಅಶೋಕ್​​ ಕಿಡಿ

ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ನಿಮ್ಮ ಧರ್ಮ ಎಂಬ ಸಚಿವ ಶಿವಲಿಂಗೇಗೌಡರ ಹೇಳಿಕೆ ಬಗ್ಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ಕಿಡಿ ಕಾರಿದ್ದಾರೆ. ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳ ಸಮ್ಮುಖದಲ್ಲಿ ಈ ಹೇಳಿಕೆ ನೀಡಿರುವುದು ಲಂಚವನ್ನು ಅಧಿಕೃತಗೊಳಿಸಿದಂತಿದೆ ಎಂದವರು ಆರೋಪಿಸಿದ್ದಾರೆ. ಅಲ್ಲದೆ, ಇಂತಹ ಹೇಳಿಕೆ ನೀಡಿದ ಸಚಿವರಿಗೆ ನೊಬೆಲ್ ಪ್ರಶಸ್ತಿ ನೀಡಬೇಕೆಂದು ವ್ಯಂಗ್ಯವಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ