ಜೈನಮುನಿ ಹತ್ಯೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ: ಸಮಗ್ರ ತನಿಖೆ ಸೂಚನೆ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 08, 2023 | 8:37 PM

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದು, ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಆಗುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನಿಡಿದ್ದಾರೆ.

ಜೈನಮುನಿ ಹತ್ಯೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ: ಸಮಗ್ರ ತನಿಖೆ ಸೂಚನೆ
ಜೈನಮುನಿ ಕಾಮಕುಮಾರನಂದಿ ಮಹಾರಾಜ, ಸಿಎಂ ಸಿದ್ಧರಾಮಯ್ಯ
Follow us on

ಹಾಸನ: ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಆಘಾತ ವ್ಯಕ್ತಪಡಿಸಿದ್ದು, ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಆಗುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನಿಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪು ಯಾರೇ ಮಾಡಿದ್ದರೂ ಕಠಿಣ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಈಗಾಗಲೇ ಪೊಲೀಸರು ಇಬ್ಬರು ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನೂ ಹಲವು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಆರೋಪಿ ಕಾನೂನಿನಿಂದ ತಪ್ಪಿಸಿಕೊಳ್ಳಬಾರದೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ: 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ

ಇಬ್ಬರು ಆರೋಪಿಗಳ ಬಂಧನ

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಾರಾಯಣ ಮಾಳಿ, ಹುಸೇನ್ ಢಾಲಾಯತ್ ಬಂಧಿತ ಆರೋಪಿಗಳು. ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ನಾರಾಯಣ ಮಾಳಿ, ಜೈನಮುನಿ ಆಶ್ರಮದ ಬಳಿ ಜಮೀನು ಲೀಸ್ ಪಡೆದು ಉಳುಮೆ ಮಾಡುತ್ತಿದ್ದ. ಇದೇ ವೇಳೆ ಜೈನಮುನಿಗೆ ಆಪ್ತನಾಗಿದ್ದು, ಆಶ್ರಮದಲ್ಲಿ ಸಣ್ಣಪುಟ್ಟ ಕೆಲಸ ಮಾಡಿ ಜೈನಮುನಿಗಳ ವಿಶ್ವಾಸಗಳಿಸಿದ್ದ.

ವೈಯಕ್ತಿಕ ಕಾರಣಕ್ಕೆ ಮಾಳಿ ಜೈನಮುನಿಗಳ ಬಳಿ 6 ಲಕ್ಷ ರೂ. ಹಣ ಪಡೆದಿದ್ದ. ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಜೈನಮುನಿಗಳ ಕೊಲೆಗೈಯಲಾಗಿದೆ ಎನ್ನಲಾಗುತ್ತಿದೆ. ಜು.5ರ ರಾತ್ರಿ ಹಿರೇಕೋಡಿ ನಂದಿಪರ್ವತ ಆಶ್ರಮದ ಕೋಣೆಯಲ್ಲೇ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ನಡೆದಿದೆ. ವಿದ್ಯುತ್​​ ಶಾಕ್​ ನೀಡಿ ಕತ್ತು ಹಿಸುಕಿ ಹತ್ಯೆ ಮಾಡಿದ್ದು, ಬಳಿಕ ಸ್ನೇಹಿತ ಹುಸೇನ್‌ಗೆ ಕರೆಮಾಡಿ ಕರೆಸಿಕೊಂಡಿದ್ದ. ಇಬ್ಬರು ಮೃತದೇಹ ಕತ್ತರಿಸಿ ಬಟ್ಟೆ ಸುತ್ತಿ ಕೊಳವೆಬಾವಿಗೆ ಎಸೆದಿದ್ದರು.

ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್; ವಿದ್ಯುತ್ ಶಾಕ್ ಕೊಟ್ಟು ಹತ್ಯೆ ಮಾಡಿದ್ರಾ ಆರೋಪಿಗಳು?

ನಾಳೆ ಬೆಳಗ್ಗೆ ಮರಣೋತ್ತರ ಪರೀಕ್ಷೆ

ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಜೈನಮುನಿ ಮೃತದೇಹ ಶಿಫ್ಟ್ ಮಾಡಲಾಗಿದೆ. ನಾಳೆ ಬೆಳಗ್ಗೆ 9 ಗಂಟೆಗೆ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಬಳಿಕ ಹಿರೇಕೋಡಿಗೆ ಮೃತದೇಹ ರವಾನೆ ಮಾಡಲಾಗುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:35 pm, Sat, 8 July 23