AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗರ್ ಹುಕುಂ ಹಗರಣ: ಜೆಡಿಎಸ್​​ ಮಾಜಿ ಶಾಸಕ ಸಿಐಡಿ ವಶಕ್ಕೆ

ಹಾಸನ ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಬಗರ್ ಹುಕುಂ ಭೂಮಿ ಮಂಜೂರಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ದಾಖಲಿಸಿದ್ದ ದೂರಿನ ಮೇರೆಗೆ ಸಿಐಡಿ ಅಧಿಕಾರಿಗಳು ಲಿಂಗೇಶ್ ಅವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ಬಗರ್ ಹುಕುಂ ಹಗರಣ: ಜೆಡಿಎಸ್​​ ಮಾಜಿ ಶಾಸಕ ಸಿಐಡಿ ವಶಕ್ಕೆ
Jds Ex Mla Lingesh
ಮಂಜುನಾಥ ಕೆಬಿ
| Edited By: |

Updated on:Jun 19, 2026 | 2:56 PM

Share

ಹಾಸನ, (ಜೂನ್ 19): ಅಕ್ರಮವಾಗಿ ಬಗರ್ ಹುಕುಂ ಜಮೀನು (bagar hukum Land) ಮಂಜೂರಾತಿ ಮಾಡಿ ಆರೋಪದಲ್ಲಿ ಹಾಸನ (Hassan) ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೇಲೂರು ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷರಾಗಿದ್ದ ವೇಳೆ 2016 ರಿಂದ 2022ರ ನಡುವೆ ಬರೋಬ್ಬರಿ 2,750 ಎಕರೆ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಕೋಲಾರದ ಸಾಮಾಜಿಕ ಕಾರ್ಯಕರ್ತ ರಮೇಶ್‌ ಕುಮಾರ್ ಎಂಬುವರು ದಾಖಲಿಸಿದ್ದ ದೂರಿನ ಮೇರೆಗೆ ಸಿಐಡಿ ಅಧಿಕಾರಿಗಳು, ಇಂದು (ಜೂನ್ 19) ಹಳೇಬೀಡಿನಲ್ಲಿರುವ ಅವರ ನಿವಾಸದಲ್ಲೇ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಖ್ಯಾಂಶಗಳು

  • ಬೇಲೂರು ಕ್ಷೇತ್ರದ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಸಿಐಡಿ ವಶಕ್ಕೆ
  • ಬೆಂಗಳೂರಿನಿಂದ ಬಂದು ವಿಚಾರಣೆಗೆ ಕರೆದೊಯ್ದ ಸಿಐಡಿ ಪೊಲೀಸರು
  • ಬಗರ್ ಹುಕುಂ ಕಮಿಟಿಯ ಅಧ್ಯಕ್ಷರಾಗಿದ್ದ ವೇಳೆ ಅಕ್ರಮ ಆರೋಪ
  • ಅಕ್ರಮವಾಗಿ ಮಾಜಿ ಶಾಸಕ ಲಿಂಗೇಶ್ ಭೂಮಂಜೂರಾತಿ ಆರೋಪ
  • ಬೇಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ
  • ಕೋಲಾರದ RTI ಕಾರ್ಯಕರ್ತ ರಮೇಶ್‌ಕುಮಾರ್ ನೀಡಿದ್ದ ದೂರು

2018ರಲ್ಲಿ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕರಾಗಿದ್ದ ಕೆ.ಎಸ್.ಲಿಂಗೇಶ್, ಬಗರ್ ಹುಕುಂ ಕಮಿಟಿಯ ಅಧ್ಯಕ್ಷರಾಗಿದ್ದರು. ಬರೋಬ್ಬರಿ 2,750 ಎಕರೆ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಕೋಲಾರದ ಸಾಮಾಜಿಕ ಕಾರ್ಯಕರ್ತ ರಮೇಶ್‌ ಕುಮಾರ್ ಎಂಬುವರು ನೀಡಿದ ದೂರಿನ ಮೇರೆಗೆ ಬೇಲೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಬಳಿಕ ಪ್ರಕರಣವನ್ನು ಸಿಐಡಿಗೆ ಹಸ್ತಾಂತಿರಿಸಲಾಗಿತ್ತು.

ದೂರಿನಲ್ಲಿ ಸುಮಾರು 2750 ಎಕರೆ ಸರ್ಕಾರಿ ಜಮೀನನನ್ನು ನಕಲಿ ದಾಖಲೆಗಳ ಆಧಾರದ ಮೇಲೆ 1430 ಬೋಗಸ್ ಫಲಾನುಭವಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಮಾಜಿ ಶಾಸಕ ಲಿಂಗೇಶ್ ಸೇರಿದಂತೆ ಇತರರ ವಿರುದ್ಧ ವಿವಿಧ ಸೆಕ್ಷನ್​​ಗಳಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ನಂತರದ ಬಂಧನ ಭೀತಿ ಎದುರಾಗುತ್ತಿದ್ದಂತೆಯೇ ಲಿಂಗೇಶ್ ಹಾಗೂ ಇತರರು ಅವರು ತಮ್ಮ ವಿರುದ್ಧ ಪ್ರಕರಣ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​ ವಜಾ ಮಾಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Fri, 19 June 26

Follow Us
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ