AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಕಿತ್ತಾಡಿಕೊಂಡ ಶಿವಲಿಂಗೇಗೌಡ, ಹೆಚ್​​ಕೆ ಸುರೇಶ್

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮದ್ಯದ ಅಂಗಡಿ ತೆರೆದ ವಿಚಾರವಾಗಿ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ ಮತ್ತು ಹೆಚ್​.ಕೆ.ಸುರೇಶ್ ಕಿತ್ತಾಡಿಕೊಂಡಿದ್ದಾರೆ. ಶಾಸಕರ ವಾಗ್ವಾದ ಕಂಡು ಸಚಿವ ಕೆಎನ್​ ರಾಜಣ್ಣ ಅವರು ಕಕ್ಕಾಬಿಕ್ಕಿಯಾದರು. ಬಳಿಕ ಮಧ್ಯಪ್ರವೇಶಿಸಿದ ಅಧಿಕಾರಿಗಳು ಶಾಸಕರನ್ನು ಸಮಾಧಾನಪಡಿಸಿದರು.

ಮಂಜುನಾಥ ಕೆಬಿ
| Edited By: Rakesh Nayak Manchi|

Updated on:Oct 16, 2023 | 3:03 PM

Share

ಹಾಸನ, ಅ.16: ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮದ್ಯದ ಅಂಗಡಿ ತೆರೆದ ವಿಚಾರವಾಗಿ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ (K. M. Shivalinge Gowda) ಮತ್ತು ಬಿಜೆಪಿ ಶಾಸಕ ಹೆಚ್​.ಕೆ.ಸುರೇಶ್ (H.K. Suresh) ಕಿತ್ತಾಡಿಕೊಂಡಿದ್ದಾರೆ. ಶಾಸಕರ ವಾಗ್ವಾದ ಕಂಡು ಸಚಿವ ಕೆ.ಎನ್.​ ರಾಜಣ್ಣ (K.N.Rajanna) ಅವರು ಕಕ್ಕಾಬಿಕ್ಕಿಯಾದ ಪ್ರಸಂಗವೂ ನಡೆಯಿತು.

ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಶಾಸಕ ಸುರೇಶ್ ಅವರು, ಮದ್ಯದಂಗಡಿ ತೆರೆದು ಹೆಣ್ಣುಮಕ್ಕಳ ತಾಳಿ ಕಿತ್ತುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಉತ್ತರ ನೀಡಿದ ಶಿವಲಿಂಗೇಗೌಡ, ಜನ ಸೇರಿಸುವವನು ನಾನು, ನೀನು‌ ಹದಿನೈದು ಜನ ಕರೆದುಕೊಂಡು ಬಂದು ಸಭೆ ಹಾಳು ಮಾಡಲು ಬಂದಿದ್ದೀಯಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಿವಕುಮಾರ್ ರನ್ನು ಜೈಲಿಗೆ ಕಳಿಸಲೆಂದೇ ಕುಮಾರಸ್ವಾಮಿ ಬಿಜೆಪಿ ಜೊತೆ ಸಖ್ಯ ಬೆಳೆಸಿರುವರೇ? ಕೆಎಂ ಶಿವಲಿಂಗೇಗೌಡ

ಈ ವೇಳೆ ಸಿಟ್ಟಾದ ಸುರೇಶ್, ನನಗೂ ಜಾವಗಲ್ ಗ್ರಾಮ ಸೇರುತ್ತದೆ, ನನಗೂ ಹಕ್ಕಿದೆ ಎಂದು ಹೇಳಿದ ಸುರೇಶ್, ಮದ್ಯದಂಗಡಿ ತೆರೆದಿರುವವನು ಶಿವಲಿಂಗೇಗೌಡರ ಸ್ನೇಹಿತ ಎಂದು ಮೈಕ್​ ಹಿಡಿದು ಆರೋಪಿಸಿದ್ದಾರೆ. ಇದರಿಂದ ಕೆರಳಿದ ಶಿವಲಿಂಗೇಗೌಡ ಅವರು, ಓವರ್ ಆಗಿ ಆಡಬೇಡ. ನಮ್ಮ ಸರ್ಕಾರ ಬಂದು ಐದು ತಿಂಗಳು ಆಯ್ತು ಒಂದು ಮದ್ಯದಂಗಡಿಗೂ‌ ಅನುಮತಿ ನೀಡಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ತೆರೆದಿದ್ದಾರೆ ಎಂದು ಆರೋಪಿಸಿದರು.

ಇಷ್ಟು ಹೇಳಿದ್ದೇ ತಡ, ಹರ್ಷಗೊಂಡ ಕೈ ಕಾರ್ಯಕರ್ರತರು ಶಿವಲಿಂಗೇಗೌಡರ ಪರ ಜೈಕಾರ ಕೂಗಿದರು. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಸುರೇಶ್ ಪರ ಜೈಕಾರ ಕೂಗಿದ್ದಾರೆ. ಶಾಸಕರ ನಡುವಿನ ಕಿತ್ತಾಟ ನೋಡಿ ಸಚಿವ ರಾಜಣ್ಣ ಅವರು ಕಕ್ಕಾಬಿಕ್ಕಿಯಾಗಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಸಕರನ್ನು ಸಮಾಧಾನಪಡಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Mon, 16 October 23

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ