ಕನ್ನಡದ ಕೃತಿಗೆ ಮೊದಲ ಬಾರಿ ಒಲಿದ ಬೂಕರ್: ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್

ಹಾಸನದ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರ "ಹಸೀನಾ ಮತ್ತು ಇತರ ಕತೆಗಳು" ಕೃತಿಯ ಇಂಗ್ಲಿಷ್ ಅನುವಾದ "ಹಾರ್ಟ್ ಲ್ಯಾಂಪ್" ಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಆ ಮೂಲಕ ಕನ್ನಡದ ಕೃತಿಗೆ ಮೊದಲ ಬಾರಿ ಬೂಕರ್ ಪ್ರಶಸ್ತಿ ಒಲಿದಿದೆ. ಬಾನು ಮುಷ್ತಾಕ್ ಅವರು ಬೂಕರ್ ಪ್ರಶಸ್ತಿ ಪಡೆದ ಮೊದಲ ಕನ್ನಡ ಸಾಹಿತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕನ್ನಡದ ಕೃತಿಗೆ ಮೊದಲ ಬಾರಿ ಒಲಿದ ಬೂಕರ್: ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್
ಹಿರಿಯ ಸಾಹಿತಿ ಬಾನು ಮುಷ್ತಾ, ಅನುವಾದಕಿ ದೀಪಾ ಭಸ್ತಿ
Updated By: ಗಂಗಾಧರ​ ಬ. ಸಾಬೋಜಿ

Updated on: May 21, 2025 | 2:59 PM

ಹಾಸನ, ಮೇ 21: ಕನ್ನಡದ ಹೆಸರಾಂತ ಹಿರಿಯ ಸಾಹಿತಿ ಬಾನು ಮುಷ್ತಾಕ್ (Banu Mushtaq)​​ ಅವರು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ (booker award) ಭಾಜನರಾಗಿದ್ದಾರೆ. ಆ ಮೂಲಕ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಎಂಬ ಹೆಗ್ಗಳಿಕೆಗೆ ಬಾನು ಮುಷ್ತಾಕ್ ಪಾತ್ರರಾಗಿದ್ದಾರೆ. ‘ಹಾರ್ಟ್ ಲ್ಯಾಂಪ್’ ಎಂಬ ಕೃತಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹಾಗಾಗಿ ಕರುನಾಡಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಒಲಿದಿದೆ. ಮಂಗಳವಾರ ಇಂಗ್ಲೆಂಡ್​ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಶಸ್ತಿಯು ಅಂದಾಜು 57.28 ಲಕ್ಷ ರೂ. ನಗದು ಒಳಗೊಂಡಿದೆ.

ಪ್ರತಿಷ್ಠಿತ ಸಾಹಿತ್ಯ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಹಿರಿಯ ಸಾಹಿತಿ ಬಾನು ಮುಷ್ತಾಕ್​​ ಅವರು ಮೂಲತಃ ಹಾಸನದವರು. ಇತ್ತೀಚೆಗೆ ಅಂದರೆ ಫೆಬ್ರುವರಿಯಲ್ಲಿ ಅವರು ಕೃತಿ ಲಾಂಗ್ ಲಿಸ್ಟ್​​ನಲ್ಲಿ ಆಯ್ಕೆಯಾಗಿತ್ತು. ಬಳಿಕ ಏಪ್ರಿಲ್ 8 ರಂದು ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದಿತ್ತು.

ಇದನ್ನೂ ಓದಿ
ಬೆಂಗಳೂರು ಮಂಗಳೂರು ಪ್ರಯಾಣಿಕರಿಗೆ ತಪ್ಪದ ಸಂಕಷ್ಟ
ಹಾಸನದಲ್ಲಿ 15ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವು
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬೂಕರ್ ಪ್ರಶಸ್ತಿಯ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದ ಹಾಸನದ ಸಾಹಿತಿ

ಬೂಕರ್ ಪ್ರಶಸ್ತಿ ಟ್ವೀಟ್​

12 ಕತೆಗಳನ್ನು ಒಳಗೊಂಡ ‘ಹಸೀನಾ ಮತ್ತು ಇತರೆ ಕತೆಗಳು’ ಎಂಬ ಕೃತಿಯನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್​​ಗೆ ಅನುವಾದ ಮಾಡಿದ್ದಾರೆ. ಸಾಕಷ್ಟು ಕೃತಿಗಳು ಬೂಕರ್ ಪ್ರಶಸ್ತಿಗೆ ನಿರ್ದೇಶಿತವಾಗಿದ್ದವು. ಅದರಲ್ಲಿ ಒಟ್ಟು 153 ಕೃತಿಗಳು ಲಾಂಗ್​ ಲಿಸ್ಟ್ ನಲ್ಲಿ ಸ್ಥಾನ ಪಡೆದಿದ್ದವು. ಅಂತಿಮವಾಗಿ ಶಾರ್ಟ್ ಲಿಸ್ಟ್​ನಲ್ಲಿ ಆರು ಕೃತಿಗಳು ಸ್ಥಾನ ಪಡೆದಿದ್ದವು.

ಬಾನು ಮುಷ್ತಾಕ್ ಹೇಳಿದ್ದಿಷ್ಟು 

ಇಂಗ್ಲೆಂಡ್​ನಲ್ಲಿ ನಡೆದ ಸಮಾರಂಭದಲ್ಲಿ ಅನುವಾದಕಿ ದೀಪಾ ಭಸ್ತಿ ಅವರೊಂದಿಗೆ ಹಿರಿಯ ಸಾಹಿತಿ ಬಾನು ಮುಷ್ತಾಕ್ ಪ್ರಶಸ್ತಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಗೆಲುವನ್ನು ವೈವಿಧ್ಯತೆಯ ಗೆಲುವು ಎಂದು ಬಣ್ಣಿಸಿದ್ದಾರೆ. ‘ಯಾವುದೇ ಕಥೆ ಸಣ್ಣದಲ್ಲ, ಅನುಭವವೆಂಬ ವಸ್ತ್ರದ ಪ್ರತಿಯೊಂದು ಎಳೆಯೂ ಇಡೀ ಕಥೆಯ ತೂಕವನ್ನು ಹೊಂದಿರುತ್ತದೆ ಎಂಬ ನಂಬಿಕೆಯಿಂದ ಈ ಪುಸ್ತಕ ರಚಿಸಲಾಗಿದೆ’ ಎಂದು ಬಾನು ಮುಷ್ತಾಕ್ ಹೇಳಿದ್ದಾರೆ.

ಇದನ್ನೂ ಓದಿ: ಹಾರ್ಟ್ ಲ್ಯಾಂಪ್ ಮೂಲಕ ಕನ್ನಡದ ಸತ್ವವನ್ನು ಜಾಗತಿಕ ಮಟ್ಟದಲ್ಲಿ ಜನರಿಗೆ ತಲುಪಿಸುವ ಅವಕಾಶ: ಬಾನು ಮುಷ್ತಾಕ್

ಇನ್ನು ಅನುವಾದಕಿ ದೀಪಾ ಭಸ್ತಿ ಅವರು ಮಾತನಾಡಿ, ‘ನನ್ನ ಸುಂದರ ಭಾಷೆಗೆ ದೊರೆತ ಎಂತಹ ಸುಂದರ ಗೆಲುವು’ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡುವ ಮೂಲಕ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:06 am, Wed, 21 May 25