AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ದಾಳಿಗೆ ಹಾಸನದಲ್ಲಿ ಸರಣಿ ಬಲಿ ಬಳಿಕ ಎಚ್ಚೆತ್ತ ಸರ್ಕಾರ: 10 ಸಲಗಗಳ ಸೆರೆ ಹಿಡಿದು ಸ್ಥಳಾಂತರಕ್ಕೆ ಆದೇಶ

ಹಾಸನ ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಜನಾಕ್ರೋಶ ವ್ಯಕ್ತವಾಗಿದ್ದು, ಎಚ್ಚೆತ್ತ ಸರ್ಕಾರ ಮಾನವ-ಆನೆ ಸಂಘರ್ಷಕ್ಕೆ ಕಾರಣವಾಗಿರುವ 10 ಗಂಡು ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರಿಸಲು ಮಹತ್ವದ ಆದೇಶ ಹೊರಡಿಸಿದೆ. ಈ ನಡುವೆಯೇ ಹಾಸನ-ಚಿಕ್ಕಮಗಳೂರು ಗಡಿ ಭಾಗದಲ್ಲಿ 53 ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿವೆ.

ಆನೆ ದಾಳಿಗೆ ಹಾಸನದಲ್ಲಿ ಸರಣಿ ಬಲಿ ಬಳಿಕ ಎಚ್ಚೆತ್ತ ಸರ್ಕಾರ: 10 ಸಲಗಗಳ ಸೆರೆ ಹಿಡಿದು ಸ್ಥಳಾಂತರಕ್ಕೆ ಆದೇಶ
10 ಸಲಗಗಳ ಸೆರೆ ಹಿಡಿದು ಸ್ಥಳಾಂತರಕ್ಕೆ ಆದೇಶ
ಮಂಜುನಾಥ ಕೆಬಿ
| Edited By: |

Updated on: Nov 16, 2026 | 6:28 PM

Share

ಹಾಸನ, ನವೆಂಬರ್​​ 16: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಎರಡು ದಿನಗಳ ಅಂತರದಲ್ಲಿ ಇಬ್ಬರು ಬಲಿಯಾಗಿರುವ ಬೆನ್ನಲ್ಲೇ ಜನಾಕ್ರೋಶ ಕಟ್ಟೆಯೊಡೆದಿದೆ. ಪ್ರತಿಭಟನೆ, ರಸ್ತೆ ತಡೆಯಂತಹ ಘಟನೆಗಳ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಜನರಲ್ಲಿ ಭೀತಿ ಸೃಷ್ಟಿಸಿರುವ ಹತ್ತು ಕಾಡಾನೆಗಳ ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ಆದೇಶ ನೀಡಿದೆ. ಬೇಲೂರು ತಾಲೂಕಿನ ಚೌಡನಹಳ್ಳಿಯಲ್ಲಿ ಶನಿವಾರ ಜಯಮ್ಮ, ಇಂದು ನಾಗೇನಹಳ್ಳಿ ಗ್ರಾಮದಲ್ಲಿ ಹಫೀಝುರ್ ರೆಹಮಾನ್ ಆನೆ ದಾಳಿಗೆ ಬಲಿಯಾಗಿದ್ದರು. ಹೀಗಾಗಿ ಈ ಸಂಬಂಧ ರಾಜ್ಯ ಪ್ರಧಾನ ವನ್ಯಜೀವಿ ಸಂರಕ್ಷಣಾ ಅಧಿಕಾರಿ ಮಹತ್ವದ ಸೂಚನೆ ನೀಡಿದ್ದಾರೆ.

ಆದೇಶದಲ್ಲಿ ಏನಿದೆ?

ಹಾಸನ ವಿಭಾಗದಲ್ಲಿ ಮಾನವ-ಆನೆ ಸಂಘರ್ಷಕ್ಕೆ ಕಾರಣವಾಗಿರುವ 10 ಗಂಡು ಕಾಡಾನೆಗಳನ್ನು ನಿರ್ದಿಷ್ಟವಾಗಿ ಗುರುತಿಸಿ, ಸುರಕ್ಷತಾ ದೃಷ್ಟಿಯಿಂದ ಹಾಗೂ ಅವುಗಳಿಂದ ಉಂಟಾಗಬಹುದಾದ ಪ್ರಾಣಹಾನಿ ಹಾಗೂ ಇನ್ನಿತರ ದಾಳಿ ಮತ್ತು ಅನಾಹುತಗಳನ್ನು ತಪ್ಪಿಸುವ ಸಲುವಾಗಿ ಆನೆಗಳನ್ನು ಸೆರೆ ಹಿಡಿಯಬೇಕು. ಬಳಿಕ ಆನೆಗಳ ಆರೋಗ್ಯ ಸ್ಥಿತಿಗತಿಗಳಿಗೆ ಅನುಗುಣವಾಗಿ ಅವುಗಳ ಆವಾಸಕ್ಕೆ ಸೂಕ್ತವಾಗಿರುವ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲು ವನ್ಯಜೀವಿ (ರಕ್ಷಣಾ) ಕಾಯ್ದೆ, 1972ರ ಸೆಕ್ಷನ್ 11(1)(ಎ) ರನ್ವಯ ಅನುಮತಿ ನೀಡಲಾಗಿದೆ. ಆನೆ ಸೆರೆ ಕಾರ್ಯಾಚರಣೆಗೆ ಉಲ್ಲೇಖ (3)ರ ಆದೇಶದಂತೆ ಪುನರ್ ರಚಿಸಲಾಗಿರುವ ಸಾಕಾನೆ ತಂಡ ಎ ಮತ್ತು ಸಿ ಕುಮ್ಕಿ ಆನೆಗಳನ್ನು ಉಪಯೋಗಿಸಿಕೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕಾಡಾನೆ ದಾಳಿಗೆ ಹಾಸನದಲ್ಲಿ ಮತ್ತೊಂದು ಬಲಿ: ಮೃತದೇಹವಿದ್ದ ಆ್ಯಂಬುಲೆನ್ಸ್​​ ತಡೆದು ಉದ್ರಿಕ್ತರಿಂದ ಪ್ರತಿಭಟನೆ

53 ಕಾಡಾನೆಗಳ ಹಿಂಡು ಪ್ರತ್ಯಕ್ಷ

ಕಾಡಾನೆ ದಾಳಿಗೆ ಹಾಸನದಲ್ಲಿ ಇಬ್ಬರು ಪ್ರಾಣ ಬಿಟ್ಟಿರುವ ನಡುವೆಯೇ ಹಾಸನ-ಚಿಕ್ಕಮಗಳೂರು ಗಡಿ ಭಾಗದಲ್ಲಿ 53 ಕಾಡಾನೆಗಳು ಪ್ರತ್ಯಕ್ಷವಾಗಿವೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಗೋಣಿಬೀಡು ಗ್ರಾಮಕ್ಕೆ ಕೂಗಳತೆ ದೂರದಲ್ಲಿ ಗಜಪಡೆ ಕಂಡುಬಂದಿದ್ದು, ಯಾವುದೇ ಕ್ಷಣದಲ್ಲಿ ಅವು ಗೋಣಿಬೀಡು ‌ಪ್ರವೇಶ ಮಾಡುವ ಸಾಧ್ಯತೆ ಇದೆ. ಹೀಗಾಗಿ ಕಾಫಿತೋಟದ ಕಾರ್ಮಿಕರು ಜಾಗೃತಿಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌
ಇ-ಕೆವೈಸಿ ಹೆಸರಲ್ಲಿ ವಸೂಲಿಗಿಳಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ
ಇ-ಕೆವೈಸಿ ಹೆಸರಲ್ಲಿ ವಸೂಲಿಗಿಳಿದ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ
ಜೆಡಿಎಸ್‌-ಬಿಜೆಪಿ ಮೈತ್ರಿ ಭಿನ್ನಾಭಿಪ್ರಾಯವಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ
ಜೆಡಿಎಸ್‌-ಬಿಜೆಪಿ ಮೈತ್ರಿ ಭಿನ್ನಾಭಿಪ್ರಾಯವಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ
'ನಿಖಿಲ್​​ಗೆ ದೇಗುಲ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ?': ಪ್ರಿಯಾಂಕ್​​
'ನಿಖಿಲ್​​ಗೆ ದೇಗುಲ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ?': ಪ್ರಿಯಾಂಕ್​​