ಬೇಲೂರು ದೇವಸ್ಥಾನವನ್ನು ಯುನೆಸ್ಕೋ ಶಾಶ್ವತ ಪಟ್ಟಿಗೆ ಸೇರಿಸಲು ದಾಖಲೆ ಸಲ್ಲಿಸಿದ ಕರ್ನಾಟಕ ಸರ್ಕಾರ: ಸಿಎಂ ಬೊಮ್ಮಾಯಿ ಮಾಹಿತಿ

ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ದೇವಸ್ಥಾನ ಯುನೆಸ್ಕೋ ತಾತ್ಕಾಲಿಕ ಪಟ್ಟಿ ಸೇರಿದೆ. ಇದನ್ನು ಶಾಶ್ವತ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಇದಕ್ಕೆ ಬೇಕಾದ ಇತಿಹಾಸದ ಎಲ್ಲ ದಾಖಲೆಗಳನ್ನು ಕರ್ನಾಟಕ ಸರ್ಕಾರ ಸಲ್ಲಿಸಿದೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ.

ಬೇಲೂರು ದೇವಸ್ಥಾನವನ್ನು ಯುನೆಸ್ಕೋ ಶಾಶ್ವತ ಪಟ್ಟಿಗೆ ಸೇರಿಸಲು ದಾಖಲೆ ಸಲ್ಲಿಸಿದ ಕರ್ನಾಟಕ ಸರ್ಕಾರ: ಸಿಎಂ ಬೊಮ್ಮಾಯಿ ಮಾಹಿತಿ
ಬೇಲೂರು ಚೆನ್ನಕೇಶವ ದೇವಸ್ಥಾನ
Follow us
|

Updated on:Feb 21, 2023 | 5:34 PM

ಹಾಸನ: ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ದೇವಸ್ಥಾನ (Belur Temple) ಯುನೆಸ್ಕೋ (UNESCO) ತಾತ್ಕಾಲಿಕ ಪಟ್ಟಿ ಸೇರಿದೆ. ಇದನ್ನು ಶಾಶ್ವತ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಇದಕ್ಕೆ ಬೇಕಾದ ಇತಿಹಾಸದ ಎಲ್ಲ ದಾಖಲೆಗಳನ್ನು ಕರ್ನಾಟಕ ಸರ್ಕಾರ (Karnataka Govt) ಸಲ್ಲಿಸಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮಾಹಿತಿ ನೀಡಿದ್ದಾರೆ. ಬೇಲೂರಿನಲ್ಲಿ ಚನ್ನಕೇಶವ ದೇವರ (Belur Chennakeshava Temple) ದರ್ಶನದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಲೂರಿನ ದೇವಸ್ಥಾನ ಯುನೆಸ್ಕೋ ತಾತ್ಕಾಲಿಕ ಪಟ್ಟಿಯಲ್ಲಿದೆ. ಶಾಶ್ವತ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಬೇಕಾದ ಇತಿಹಾಸದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೇವೆ ಎಂದರು.

ಬೇಲೂರು ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿದ್ದು, ಇಲ್ಲಿನ ಕಲೆ ಎಲ್ಲಾ ಕಡೆಗಳಲ್ಲಿ ಪ್ರಸಿದ್ಧಿ ಪಡೆದಿದೆ. ಅಧಿಕೃತವಾಗಿ ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ ಪಡೆದರೆ ವಿದೇಶದಿಂದ ದೊಡ್ಡ ಪ್ರಮಾಣದಲ್ಲಿ ಪ್ರವಾಸಿಗರು ಬರುತ್ತಾರೆ. ದೇಶ-ವಿದೇಶಗಳಿಂದ ಪ್ರವಾಸಿಗರು ಬರಲು ಅನುಕೂಲವಾಗುತ್ತದೆ. ಇದರಿಂದ ಅಭಿವೃದ್ಧಿಗೆ ಹೆಚ್ಚಿನ ದುಡ್ಡು ಬರುತ್ತದೆ ಎಂದರು. ಹಂಪಿ ಬಳಿಕ ಯುನೆಸ್ಕೋ ಪಟ್ಟಿಗೆ ಸೇರುತ್ತಿರುವ ಎರಡನೇ ಕ್ಷೇತ್ರ ಬೇಲೂರಿನ ದೇಗುಲವಾಗಿದೆ. ಬೇಲೂರು ಹಾಗೂ ಹಳೇಬೀಡು ಅಭಿವೃದ್ಧಿಯಿಂದ ಪ್ರವಾಸೋದ್ಯಮ ವೃದ್ಧಿಯಾಗಿದ್ದು, ಭವಿಷ್ಯದ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ. ಈ‌ ನಾಡಿನ ಬೆಳವಣಿಗೆಯಿಂದ, ಬೇಲೂರು, ಹಳೇಬೀಡು ಬೆಳವಣಿಗೆಯಿಂದ ಬಹಳ ದೊಡ್ಡಮಟ್ಟದಲ್ಲಿ ಪ್ರವಾಸೋದ್ಯಮ ಬೆಳವಣಿಗೆ ಆಗುತ್ತದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Tue, 21 February 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ