Kempegowda Jayanthi 2023: ಇದೇ ಮೊದಲ ಬಾರಿಗೆ ಬೆಂಗಳೂರಿನ ಹೊರಗೆ ಕೆಂಪೇಗೌಡರ ಜಯಂತಿ ಆಯೋಜಿಸಿದ ಸರ್ಕಾರ

ಇಂದು ಬೆಂಗಳೂರು ಸೃಷ್ಟಿಸಿದ ಮಹಾಪುರಷ ನಾಡಪ್ರಭು ಕೆಂಪೇಗೌಡ (KempeGowda) ಅವರ 514ನೇ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರಿನ ಹೊರಗೆ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.

Kempegowda Jayanthi 2023: ಇದೇ ಮೊದಲ ಬಾರಿಗೆ ಬೆಂಗಳೂರಿನ ಹೊರಗೆ ಕೆಂಪೇಗೌಡರ ಜಯಂತಿ ಆಯೋಜಿಸಿದ ಸರ್ಕಾರ
ಕೆಂಪೇಗೌಡ ಜಯಂತಿ
Follow us
ರಮೇಶ್ ಬಿ. ಜವಳಗೇರಾ
|

Updated on:Jun 27, 2023 | 7:38 AM

ಹಾಸನ: ಬೆಂಗಳೂರು ನಗರವನ್ನು ಸೃಷ್ಟಿಸಿದ ಮಹಾಪುರಷ ನಾಡಪ್ರಭು ಕೆಂಪೇಗೌಡ (KempeGowda) ಅವರ ಜಯಂತಿಯನ್ನು ಪ್ರತಿ ವರ್ಷ ಜೂನ್ 27ರಂದು ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಇಂದು ಬೇರೆ ಜಿಲ್ಲೆಯಲ್ಲಿ ಕೆಂಪೇಗೌಡರ 514ನೇ ಜಯಂತಿಯನ್ನು(kempegowda jayanthi 2023) ಆಚರಿಸಲಾಗುತಿದೆ. ಆದ್ರೆ, ಇದೇ ಮೊದಲ ಬಾರಿಗೆ ಬೆಂಗಳೂರಿನ ಹೊರಗೆ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸರ್ಕಾರದ ಅಧಿಕೃತ ಕಾರ್ಯಕ್ರಮವನ್ನು ಇಂದು(ಜೂನ್ 27) ಇದೇ ಮೊದಲ ಬಾರಿಗೆ ಹಾಸನದಲ್ಲಿ ಆಯೊಜಿಸಲಾಗಿದೆ. ಈ ಹಿನ್ನೆಲೆಯಲ್ಲಿಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಹಾಸನಕ್ಕೆ ಭೇಟಿ ನೀಡಲಿದ್ದಾರೆ. ಹಾಸನದ ಹಳೇ ತಾಲೂಕು ಕಚೇರಿ ಪಕ್ಕದ ರಸ್ತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೆಂಗಳೂರಿನಿಂದ ಹೆಲಿಕಾಪ್ಟರ್‌ ಮೂಲಕ ಮಧ್ಯಾಹ್ನ 12.30ಕ್ಕೆ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಸಿಎಂ, ಡಿಸಿಎಂ ಆಗಮಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಜೊತೆಗೆ ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:Kempegowda Awards 2023: ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತರ ಹೆಸರು ಪ್ರಕಟ

ಹದಿನಾರನೇ ಶತಮಾನದಲ್ಲಿ ಬೆಂಗಳೂರು ನಗರವನ್ನು ಸೃಷ್ಟಿಸಿದ ಮಹಾಪುರಷನ ಸ್ಮರನಾರ್ಥವಾಗಿ ಈ ಹಿಂದೆ ಎಸ್​ಎಂ ಕೃಷ್ಣ ಸರ್ಕಾರ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನ ಬೆಂಗಳೂರು ಹಬ್ಬ ಎಂದು ಘೋಷಣೆ ಮಾಡಲಾಗಿತ್ತು. ಅಲ್ಲದೇ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರತಿ ವರ್ಷ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು (Kempegowda International Awards 2023) ನೀಡಲಾಗುತ್ತಿದೆ.

ನಾಡಪ್ರಭು ಕೆಂಪನಂಜೇಗೌಡ ಹಾಗೂ ಲಿಂಗಾಂಬೆ ದಂಪತಿಗಳಿಗೆ 1510ರಲ್ಲಿ ಮೊದಲನೆಯ ಕೆಂಪೇಗೌಡರು ಯಲಹಂಕದಲ್ಲಿ ಜನಿಸಿದ್ದರು. ಕುಲದೇವತೆಯಾದ ಕೆಂಪಮ್ಮ ಹಾಗೂ ಭೈರವರ ಅನುಗ್ರಹದಿಂದ ಜನಿಸಿದ ಕಾರಣ ಕೆಂಪನಂಜೇಗೌಡ ದಂಪತಿಗಳು ಮಗುವಿಗೆ ಕೆಂಪ, ಕೆಂಪಯ್ಯ, ಕೆಂಪಣ್ಣ ಎಂಬ ಹೆಸರಿನಿಂದ ಕರೆಯಲಾಯ್ತು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಠಿಯಿಂದ ಬೆಂಗಳೂರನ್ನು ನಿರ್ಮಿಸಿದ್ದರು ಎಂದು ಹೇಳಲಾಗುತ್ತಿದೆ. ಕೆಂಪೇಗೌಡರ ತಾಯಿ ಕೆಂಪಾಂಬೆ ಮತ್ತು ಪತ್ನಿ ಚೆನ್ನಮಾಂಬೆ(ಸೋದರ ಮಾವನ ಮಗಳು) ಇಬ್ಬರೂ ಹಳೆ ಬೆಂಗಳೂರಿನವರು. ಹಾಗಾಗಿ ಇಬ್ಬರ ಪ್ರೀತಿಯ ನೆನಪಿಗಾಗಿ ತಾವು ನಿರ್ಮಿಸಿದ ಪಟ್ಟಣಕ್ಕೆ ಬೆಂಗಳೂರು ಎಂದು ಹೆಸರಿಟ್ಟಿರೆಂಬುದು ಹಲವು ವಿದ್ವಾಂಸರ ಅಭಿಪ್ರಾಯವಾಗಿದೆ. ಈಗ ಬೆಂಗಳೂರು ನಗರ ಕರ್ನಾಟಕ ರಾಜ್ಯದಕೆಂಪೇಗೌಡರ ಕಾಲದಲ್ಲೂ ಬೆಂಗಳೂರು ವಾಣಿಜ್ಯ ಕೇಂದ್ರವಾಗಿತ್ತು. ಅರಳೇಪೇಟೆ, ಅಕ್ಕಿಪೇಟೆ, ಕುಂಬಾರಪೇಟೆ, ರಾಗಿಪೇಟೆ, ಗಾಣಿಗರಪೇಟೆ, ಗೊಲ್ಲರಪೇಟೆ, ಮಡಿವಾಳ ಪೇಟೆ, ಮಂಡಿ ಪೇಟೆ, ಬಳೇಪೇಟೆ, ದೊಡ್ಡಪೇಟೆ, ಚಿಕ್ಕಪೇಟೆ ಹೀಗೆ ಮುಂತಾಗಿ 54 ಪೇಟೆಗಳನ್ನು ನಾಡಪ್ರಭು ಕೆಂಪೇಗೌಡರು ಅಂದು ನಿರ್ಮಿಸಿದ್ದರು. ಈ ಪೈಕಿ ದೊಡ್ಡ ಪೇಟೆ ರಾಜಕಾರಣಕ್ಕೆ, ಚಿಕ್ಕಪೇಟೆ ವ್ಯಾಪಾರಕ್ಕೆ ಮೀಸಲಾಗಿದ್ದವು. ಈಗಲೂ ಈ ಕೆಲವು ಪೇಟೆಗಳ ಹೆಸರುಗಳನ್ನು ಗಮನಿಸಬಹುದು. ಕಾಲಕ್ಕೆ ತಕ್ಕಂತೆ ಪೇಟೆಯ ಸ್ವರೂಪ ಮತ್ತು ಚಟುವಟಿಕೆಗಳು ಬದಲಾಗಿವೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:25 am, Tue, 27 June 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ