ಹಾಸನ ಸಂಸದ ಆಯ್ಕೆ ಅಸಿಂಧು ಕೋರಿ ಅರ್ಜಿ: ಶ್ರೇಯಸ್ ಪಟೇಲ್​ಗೆ ಹೈಕೋರ್ಟ್​ ನೋಟಿಸ್​

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಕಾಂಗ್ರೆಸ್​ನ ಶ್ರೇಯಸ್ ಪಾಟೀಲ್​ ಸೋಲಿಸಿ ಸಂಸತ್ ಪ್ರವೇಶಿಸಿದ್ದಾರೆ. ಆದ್ರೆ, ಆರಂಭದಲ್ಲಿ ಶ್ರೇಯಸ್​ ಪಾಟೀಲ್​ಗೆ ಕಾನೂನು ತೊಡಕು ಎದುರಾಗಿದೆ.

ಹಾಸನ ಸಂಸದ ಆಯ್ಕೆ ಅಸಿಂಧು ಕೋರಿ ಅರ್ಜಿ: ಶ್ರೇಯಸ್ ಪಟೇಲ್​ಗೆ ಹೈಕೋರ್ಟ್​ ನೋಟಿಸ್​
ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್​
Edited By:

Updated on: Aug 23, 2024 | 4:30 PM

ಬೆಂಗಳೂರು/ಹಾಸನ, (ಆಗಸ್ಟ್ 23): ಹಾಸನ ಕಾಂಗ್ರೆಸ್​ ಸಂಸದ ಶ್ರೇಯಸ್ ಪಾಟೀಲ್​ಗೆ ಕರ್ನಾಟಕ ಹೈಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್ ಅವರು ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್​ ಇಂದು (ಆಗಸ್ಟ್ 23) ವಿಚಾರಣೆ ನಡೆಸಿದ್ದು, ಈ ಸಂಬಂಧ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್​ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್‌ನ ಶ್ರೇಯಸ್‌ ಎಂ.ಪಟೇಲ್‌ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಪುತ್ರ ಡಿ.ಚರಣ್ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್​ನ ಇಬ್ಬರು ಸಂಸದರ ಆಯ್ಕೆ ಅಸಿಂಧು ಕೋರಿ ಕೋರ್ಟ್​ಗೆ ಅರ್ಜಿ

ಶ್ರೇಯಸ್‌ ಪಟೇಲ್‌ ಅವರ ನಾಮಪತ್ರ ಕ್ರಮಬದ್ಧವಾಗಿಲ್ಲ. ಅವರು ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಿಲ್ಲ. ಪ್ರಮಾಣ ಪತ್ರದಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ. ಚುನಾವಣಾ ವೆಚ್ಚದ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ. ನಿಗದಿಗಿಂತ ಹೆಚ್ಚಿನ ಹಣ ವ್ಯಯಿಸಿದ್ದು, ಸರಿಯಾದ ಲೆಕ್ಕವನ್ನು ಆಯೋಗಕ್ಕೆ ಸಲ್ಲಿಕೆ ಮಾಡಿಲ್ಲ. ಹಾಗಾಗಿ ಅವರ ಆಯ್ಕೆಯನ್ನೇ ರದ್ದುಗೊಳಿಸಬೇಕು ಎಂದು ಅರ್ಜಿದಾರ ಡಿ.ಚರಣ್‌ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
Loading...
Unable to load recommendations.
Follow Us