AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಜೆಡಿಎಸ್​ ಭದ್ರಕೋಟೆ ಹೊಳೆನರಸೀಪುರ ಪುರಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಗೆಲುವು

ಜೆಡಿಎಸ್ ಭದ್ರಕೋಟೆ ಹೊಳೆನರಸೀಪುರ ಪುರಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ರವಿಕುಮಾರ್ ವಿರುದ್ಧ ಕಾಂಗ್ರೆಸ್​ನ ಭೈರಶೆಟ್ಟಿಗೆ ವಿಜಯಶಾಲಿಯಾಗಿದ್ದಾರೆ.

ಹಾಸನ: ಜೆಡಿಎಸ್​ ಭದ್ರಕೋಟೆ ಹೊಳೆನರಸೀಪುರ ಪುರಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಗೆಲುವು
ಕರ್ನಾಟಕ ಚುನಾವಣೆ
TV9 Web
| Edited By: |

Updated on: Dec 30, 2023 | 11:31 AM

Share

ಹಾಸನ, ಡಿಸೆಂಬರ್​ 30: ಜೆಡಿಎಸ್ (JDS)​ ಭದ್ರಕೋಟೆ ಹೊಳೆನರಸೀಪುರ ಪುರಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ (Congress)​ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ರವಿಕುಮಾರ್ ವಿರುದ್ಧ ಕಾಂಗ್ರೆಸ್​ನ ಭೈರಶೆಟ್ಟಿಗೆ ವಿಜಯಶಾಲಿಯಾಗಿದ್ದಾರೆ. ಹೊಳೆನರಸೀಪುರ ಪುರಸಭೆಯ 23 ವಾರ್ಡ್​ಗಳ ಪೈಕಿ 23 ರಲ್ಲೂ ಜೆಡಿಎಸ್​ ಗೆದ್ದಿತ್ತು. ಆದರೆ 11ನೇ ವಾರ್ಡ್​ ಸದಸ್ಯ ಅಕಾಲಿಕ ನಿಧನ ಹೊಂದಿದ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆದಿದೆ. ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 235, ಜೆಡಿಎಸ್ 219, ಪಕ್ಷೇತರ ಅಭ್ಯರ್ಥಿ ಸುರೇಶ್​ಗೆ 63 ಮತಗಳು ಬಂದಿವೆ. ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ​ಭೈರಶೆಟ್ಟಿ ಗೆದ್ದಿದ್ದಾರೆ. ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ 10 ವರ್ಷಗಳ ಬಳಿಕ‌ ಗೆದ್ದು ಬೀಗಿದೆ.

ಬಿಜೆಪಿ ಅಭ್ಯರ್ಥಿಗೆ ಗೆಲವು

ಮೈಸೂರು: ನಂಜನಗೂಡು ನಗರಸಭೆ‌ ಉಪ ಚುನಾವಣೆಯಲ್ಲಿ ​ಬಿಜೆಪಿ ಅಭ್ಯರ್ಥಿ ಮಹೇಶ್‌ ಗೆದ್ದು ಬೀಗಿದ್ದಾರೆ. ನಂಜನಗೂಡು ನಗರಸಭೆ‌ಯ 20ನೇ ವಾರ್ಡ್‌ಗೆ ಉಪ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್‌ ​ಅವರು 231 ಮತಗಳನ್ನು ಪಡೆಯುವ ಮೂಲಕ ಜಯಶಾಲಿಯಾಗಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ದೊರೆಸ್ವಾಮಿ 186 ಮತಗಳು ಪಡೆದುಕೊಂಡಿದ್ದಾರೆ. ಜೆಡಿಎಸ್​​ ಅಭ್ಯರ್ಥಿಗೆ ಸುಬ್ರಹ್ಮಣ್ಯಗೆ 144 ಮತಗಳು ಬಿದ್ದಿವೆ.

ಕಾಂಗ್ರೆಸ್​ಗೆ ಮುಖಭಂಗ, ಜೆಡಿಎಸ್​ ಗೆಲವು

ಮಂಡ್ಯ: ಪಾಂಡವಪುರ ಪುರಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಮುಖಭಂಗವಾಗಿದೆ. ಜೆಡಿಎಸ್​ ಅಭ್ಯರ್ಥಿಗಳು ಭರ್ಜರಿ ಜಯಬೇರಿ ಬಾರಿಸಿದ್ದಾರೆ. ಪುರಸಭೆ 2, 9ನೇ ವಾರ್ಡ್​ಗೆ ನಡೆದಿದ್ದ ಉಪ ಚುನಾವಣೆಯಲ್ಲಿ ಜೆಡಿಎಸ್​ನ ಯಶವಂತ್ ಹಾಗೂ ಜ್ಯೋತಿ ಅವರು ಕಾಂಗ್ರೆಸ್ ಮತ್ತು ರೈತಸಂಘದ ಮೈತ್ರಿ ಅಭ್ಯರ್ಥಿಗಳ ಎದುರು ಗೆದ್ದಿದ್ದಾರೆ.

ಇದನ್ನೂ ಓದಿ: ಗುಡಿಬಂಡೆ ಪಟ್ಟಣ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಆರೋಪ; ಧರಣಿ ನಡೆಸಿದ ಕೌನ್ಸಿಲರ್​ಗಳು

ಡಿಕೆ ಶಿವಕುಮಾರ್ ತವರಲ್ಲಿ ಜೆಡಿಎಸ್​ಗೆ ಜಯ

ರಾಮನಗರ: ಕನಕಪುರ ಪುರಸಭೆ ವಾರ್ಡ್ ಸಂಖ್ಯೆ ‌5ರಲ್ಲಿ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್​ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಚಾಮರಾಜ್ ವಿರುದ್ಧ 50 ಮತಗಳ‌ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಲೋಕೇಶ್​ಗೆ ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶಿವರುದ್ರ ಕೊನೇ ಹಂತದಲ್ಲಿ ಚುನಾವಣೆಯಿಂದ ಹಿಂದೆ ಸರಿದಿದರು. ಕಾಂಗ್ರೆಸ್ ಸದಸ್ಯ ಕೃಷ್ಣಪ್ಪ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿದೆ.

ಕಾಂಗ್ರೆಸ್​ ಪಾಲಾದ ಹುಣಸಗಿ ಪಟ್ಟಣ ಪಂಚಾಯಿತಿ

ಯಾದಗಿರಿ: ಹುಣಸಗಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಗೆಲವು ಸಾಧಿಸಿದೆ. 16 ಸ್ಥಾನಗಳ ಪೈಕಿ 14 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಕೇವಲ ಎರಡು ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಹುಣಸಗಿ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಕ್ಷೇತ್ರ ಸುರಪುರ ವ್ಯಾಪ್ತಿಗೆ ಬರುತ್ತದೆ. ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯಾ ಉಪಾಧ್ಯಕ್ಷ ರಾಜುಗೌಡಗೆ ಭಾರಿ ಹಿನ್ನಡೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ