ಹಾಸನ: ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ
ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಕ್ಷುಲ್ಲಕ ವಿಚಾರಗಳಿಗೆ ಸಾವಿನ ನಿರ್ಧಾರವನ್ನು ಕೈಗೊಳ್ಳುತ್ತಿರುವುದು ನಿಜಕ್ಕೂ ದುರಂತ. ಅದರಂತೆ ಇಂದು(ಮೇ.09) ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ(Channarayapatna) ಗಾಯತ್ರಿ ಬಡಾವಣೆಯಲ್ಲಿ ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿಯೂಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹಾಸನ, ,ಮೇ.09: ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿಯೂಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ(Channarayapatna) ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. ಸೋಮಶೇಖರ್, ಭಾಗ್ಯ ದಂಪತಿ ಪುತ್ರಿ ದೀಪಾ(34) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಇವರು ಚನ್ನರಾಯಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ದೀಪಾ ಇಂದು(ಮೇ.09) ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಾರುತಿ 800 ಕಾರು ಪಲ್ಟಿ; ಚಾಲಕ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ4 ರಾಯರಪಾಳ್ಯ ಗೇಟ್ ಬಳಿ ನೆಲಮಂಗಲದಿಂದ ತುಮಕೂರಿಗೆ ಹೋಗುತ್ತಿದ್ದ ಮಾರುತಿ 800 ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ದಾಟಿ ಪಲ್ಟಿಯಾಗಿದೆ. ಚಾಲಕ ರಮೇಶ್ಗೆ ಗಂಭೀರ ಗಾಯವಾಗಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಕ್ಷಣ ಆಂಬುಲೆನ್ಸ್ ಸಿಗದ ಹಿನ್ನೆಲೆ ಹೈವೇ ಮೊಬೈಲ್ ವಾಹನದಲ್ಲೇ ಗಾಯಳುಗಳಿಗೆ ಕರತಂದು ಚಿಕಿತ್ಸೆ ನೀಡಲಾಗಿದೆ. ಕಾನ್ಸ್ಟೇಬಲ್ ಸತೀಶ್ ಹಾಗೂ ASI ವಿಜಯಕುಮಾರ್ ಕಾರ್ಯಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರ: ಅತ್ತಿಗೆ ಕಿರುಕುಳಕ್ಕೆ ಬೇಸತ್ತ ಮೈದುನ ನೇಣುಬಿಗಿದುಕೊಂಡು ಆತ್ಮಹತ್ಯೆ
ಬೈಕ್ಗೆ ಕಾರು ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ದಾವಣಗೆರೆ: ನಗರದ ಆಂಜನೇಯ ಬಡಾವಣೆಯಲ್ಲಿ ಬೈಕ್ಗೆ ಕಾರು ಡಿಕ್ಕಿ ಹೊಡೆದು ಪರಾರಿಯಾದರೆ, ಇತ್ತ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಟಿವಿಎಸ್ ಎನ್ಟಾರ್ಕ್ ಗಾಡಿಗೆ ಪಾರ್ಚುನರ್ ಕಾರು ಡಿಕ್ಕಿ ಹೊಡೆದಿದ್ದು, ಘಟನೆ ನಡೆಯುತ್ತಿದ್ದಂತೆ ಕಾರು ನಿಲ್ಲಿಸದೇ ಪರಾರಿಯಾಗಿದ್ದಾರೆ. ಈ ಕುರಿತು ವಿದ್ಯಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:01 pm, Thu, 9 May 24