AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗಿದು ಮೂರನೇ ಜನ್ಮ, ವರ್ಷದೊಳಗೆ ನಿಮ್ಮ ಸೇವೆಗೆ ಮತ್ತೊಂದು ಅವಕಾಶ ದೊರೆಯಲಿದೆ: ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

ಕರ್ನಾಟಕ ರಾಜಕೀಯದಲ್ಲಿ ಮುಂದಿನ ಒಂದು ವರ್ಷದ ಒಳಗೆ ಭಾರಿ ಬದಲಾವಣೆಯಾಗಲಿದ್ದು ಜನರ ಸೇವೆಗೆ ತಮಗೆ ಮತ್ತೊಮ್ಮೆ ಅವಕಾಶ ದೊರೆಯಲಿದೆ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಹಾಸನದಲ್ಲಿ ಹೇಳಿದ್ದಾರೆ. ಮತ್ತೊಮ್ಮೆ ಸಿಎಂ ಆಗುವ ಬಗ್ಗೆ ಮಾರ್ಮಿಕವಾಗಿ ಈ ರೀತಿ ಹೇಳಿದ್ದಾರೆ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಈಗ ಚರ್ಚೆ ನಡೆಯುತ್ತಿದೆ.

ನನಗಿದು ಮೂರನೇ ಜನ್ಮ, ವರ್ಷದೊಳಗೆ ನಿಮ್ಮ ಸೇವೆಗೆ ಮತ್ತೊಂದು ಅವಕಾಶ ದೊರೆಯಲಿದೆ: ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ
ಕುಮಾರಸ್ವಾಮಿ
Ganapathi Sharma
|

Updated on:Apr 12, 2024 | 6:59 AM

Share

ಹಾಸನ, ಏಪ್ರಿಲ್ 12: ಮುಂದಿನ ಒಂದು ವರ್ಷದಲ್ಲಿ ಕರ್ನಾಟಕ ರಾಜಕೀಯದಲ್ಲಿ (Karnataka Politics) ಸಾಕಷ್ಟು ಬದಲಾವಣೆ ಆಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​​​ಡಿ ಕುಮಾರಸ್ವಾಮಿ (HD Kumaraswamy) ಗುರುವಾರ ಹೇಳಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ (Prajwal Revanna) ಪರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ದೇವರ ಇಚ್ಛೆಯಿಂದ ನಿಮ್ಮ ಸೇವೆ ಮಾಡಲು ನನಗೆ ಇನ್ನೊಂದು ಅವಕಾಶ ಸಿಗುತ್ತದೆ. ನಾನು ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ನಿಮ್ಮ ಆಶೀರ್ವಾದದಿಂದಲೇ ನನಗೆ ಮೂರನೇ ಜನ್ಮ ಸಿಕ್ಕಿದೆ. ಈ ಜನ್ಮದಲ್ಲಿ ಇನ್ನೊಂದು ವರ್ಷದೊಳಗೆ ನಿಮ್ಮ ಸೇವೆಗೆ ಅವಕಾಶ ಸಿಗಲಿದೆ ಎಂದಿದ್ದಾರೆ. ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ಬಗ್ಗೆ ಮಾರ್ಮಿಕವಾಗಿ ಈ ರೀತಿ ಸುಳಿವು ನೀಡಿದ್ದಾರೆಯೇ ಎಂಬ ಗುಸುಗುಸು ಇದೀಗ ಆರಂಭವಾಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದಕ್ಕೆ ನಮಗೆ ಹೊಟ್ಟೆಕಿಚ್ಚು ಇಲ್ಲ. ಆದರೆ, ಈಗಿನ ಬೆಳವಣಿಗೆಗಳನ್ನು ನೋಡಿದರೆ ರಾಜ್ಯ ಎಲ್ಲಿಗೆ ಹೋಗುತ್ತದೋ ಎಂಬ ಆತಂಕ ಕಾಡುತ್ತಿದೆ. ಉಚಿತ ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ಪಕ್ಷವೇನೂ ಅದರ ಹಣ ಖರ್ಚು ಮಾಡುತ್ತಿಲ್ಲ. ಬದಲಾಗಿ ಜನರ ಹಣದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

1.05 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಈ ಪೈಕಿ 58,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ವ್ಯಯಿಸುತ್ತಿದ್ದಾರೆ. ರಾಜ್ಯದಲ್ಲಿ 6.87 ಲಕ್ಷ ಕೋಟಿ ಸಾಲವಿದೆ. ಅದನ್ನು ಮರುಪಾವತಿ ಮಾಡುವವರು ಯಾರು? ಇಂದು ಕಾಂಗ್ರೆಸ್ ಸರ್ಕಾರ ಇದೆ, ನಾಳೆ ಹೋಗುತ್ತಾರೆ. ಜನರು ಅದನ್ನು ಮರುಪಾವತಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಆದಿಚುಂಚನಗಿರಿ ಮಠದ ವಿಚಾರವಾಗಿ ಕಾಂಗ್ರೆಸ್ ಮಾಡಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕೆಆರ್ ಪೇಟೆ ಕೃಷ್ಣ ಸೇರಿದಂತೆ ವಿಶ್ವ ಒಕ್ಕಲಿಗರ ಸಂಘದ ಅನೇಕರು ಬೇರೆ ಮಠಕ್ಕೆ ಹುಡುಕಾಟ ನಡೆಸಿದ್ದಾರೆ. ಹೀಗಾಗಿ, ನಾನು ಬೆಂಬಲವನ್ನು ನೀಡಿದ್ದೇನೆ. ಇದು ತಪ್ಪೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಕೊತ್ವಾಲ ರಾಮಚಂದ್ರನ ಗರಡಿಯಿಂದ ಬಂದ ಶಿವಕುಮಾರ್ ಸ್ಟ್ರೀಟ್ ಫೈಟರ್ ಆಗದೆ ಮತ್ತೇನಾಗಲು ಸಾಧ್ಯ? ಹೆಚ್ ಡಿ ಕುಮಾರಸ್ವಾಮಿ

ಈ ಮಧ್ಯೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಬಂಡಾಯವನ್ನು ಶಮನಗೊಳಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದ್ದು, ಅವರು ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಆರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 am, Fri, 12 April 24

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?