ಅತ್ಯಾಚಾರ ಆರೋಪ ಪ್ರಕರಣ; ವಕೀಲ ದೇವರಾಜೇಗೌಡ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ ಕೋರ್ಟ್

ವಕೀಲ ದೇವರಾಜೇಗೌಡ ವಿರುದ್ದ ಅತ್ಯಾಚಾರ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ಸಂತ್ರಸ್ಥೆ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ದೇವರಾಜೇಗೌಡ ಅವರ ಅವಧಿ ಇಂದಿಗೆ ಮುಗಿದ ಹಿನ್ನಲೆ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ಕೋರ್ಟ್​ ಆದೇಶಿಸಿದೆ.

ಅತ್ಯಾಚಾರ ಆರೋಪ ಪ್ರಕರಣ; ವಕೀಲ ದೇವರಾಜೇಗೌಡ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ ಕೋರ್ಟ್
ದೇವರಾಜೇಗೌಡ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
Updated By: ಕಿರಣ್ ಹನುಮಂತ್​ ಮಾದಾರ್

Updated on: May 24, 2024 | 7:25 PM

ಹಾಸನ, ಮೇ.24: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ(Devarajegowda) ವಿರುದ್ದದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಅವಧಿಯನ್ನ ವಿಸ್ತರಿಸಿ ಹಾಸನ(Hassan) 2 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಮತ್ತೆ 14 ದಿನ ಅಂದರೆ ಜೂನ್ 7 ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ದೇವರಾಜೇಗೌಡರ ನ್ಯಾಯಾಂಗ ಬಂಧನ ಇಂದಿಗೆ ಮುಗಿದಿದ್ದ ಹಿನ್ನೆಲೆ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ಈ ವೇಳೆ ವಿಚಾರಣೆ ನಡೆಸಿ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಅತ್ಯಾಚಾರ ಆರೋಪ ಕೇಸ್​ನಲ್ಲಿ ವಕೀಲ ದೇವರಾಜೇಗೌಡರಿಗೆ ಮೇ.11 ರಂದು  14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಎಂಎಫ್​ಸಿ ಕೋರ್ಟ್​ ಆದೇಶಿಸಿತ್ತು. ಬಳಿಕ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ 4 ದಿನ ಕಸ್ಟಡಿಗೆ ಅನುಮತಿ ಪಡೆದಿದ್ದರು. ಅದರಂತೆ ವಿಚಾರಣೆ ಮುಕ್ತಾಯ ಹಿನ್ನಲೆ ಕೋಟ್​ಗೆ ಹಾಜರುಪಡಿಸಿ ನಂತರ ಮೇ.24ರವರೆಗೂ JMFC ಕೋರ್ಟ್​​ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಈ ಮಧ್ಯೆ ಒಂದು ದಿನ ಎಸ್​ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿತ್ತು.​ ಇಂದಿಗೆ ನ್ಯಾಯಾಂಗ ಬಂಧನ ಅವಧಿ ಮುಗಿದಿದ್ದ ಹಿನ್ನೆಲೆ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಇದನ್ನೂ ಓದಿ:ಪೆನ್​ಡ್ರೈವ್​ ಕೇಸ್: ಶಿವರಾಮೇಗೌಡ, ದೇವರಾಜೇಗೌಡ, ಡಿಕೆಶಿ ​ಸೀಕ್ರೆಟ್ ಆಡಿಯೋ​ ವೈರಲ್

ಇದೇ ಮೇ. 28 ಕ್ಕೆ ದೇವರಾಜೇಗೌಡರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇನ್ನು ಇವರು ಮೇ 11. ರಂದು ಬಂಧನಕ್ಕೆ ಒಳಗಾಗಿದ್ದರು. ದೇವರಾಜೇಗೌಡನನ್ನು ಮೇ 14. ರಿಂದ ಮೇ‌16 ರವರೆಗೆ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಕಸ್ಟಡಿಗೆ ಪಡೆದಿದ್ದರು. ಬಳಿಕ ಮತ್ತೊಂದು ದಿನ ಕಸ್ಟಡಿಗೆ ಮನವಿ ಮಾಡಿ ಮೇ.17 ಮದ್ಯಾಹ್ನದ ವರೆಗೆ ಪೊಲೀಸರು ವಿಚಾರಣೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:18 pm, Fri, 24 May 24