AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiradi Ghat: ಶಿರಾಡಿಘಾಟ್​ ಹೆದ್ದಾರಿಯಲ್ಲಿ ಭೂ ಕುಸಿತ: ರಾತ್ರಿವೇಳೆ ಭಾರಿ ವಾಹನ ಸಂಚಾರ ನಿಷೇಧ

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಏಕ ಮುಖ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಸರದಿಯಲ್ಲಿ ವೇಗಮಿತಿಯೊಳಗೆ ಎಲ್ಲ ಬಗೆಯ ವಾಹನಗಳು ಸಂಚರಿಸಲು ಅವಕಾಶ ನೀಡಲಾಗಿದೆ.

Shiradi Ghat: ಶಿರಾಡಿಘಾಟ್​ ಹೆದ್ದಾರಿಯಲ್ಲಿ ಭೂ ಕುಸಿತ: ರಾತ್ರಿವೇಳೆ ಭಾರಿ ವಾಹನ ಸಂಚಾರ ನಿಷೇಧ
ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್​ನಲ್ಲಿ ಭೂಕುಸಿತ ಸಂಭವಿಸಿದೆ.
TV9 Web
| Edited By: |

Updated on:Jul 15, 2022 | 8:54 AM

Share

ಹಾಸನ: ಬೆಂಗಳೂರಿನಿಂದ ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕಕ್ಕೆ ಸಂಪರ್ಕ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ‘ರಾಷ್ಟ್ರೀಯ ಹೆದ್ದಾರಿ 75’ರ (NH 75) ಶಿರಾಡಿ ಘಾಟ್​ನಲ್ಲಿ (Shiradi Ghat) ಭೂ ಕುಸಿತ  (Land Slide) ಸಂಭವಿಸಿದೆ. ದುರಸ್ತಿ ಕಾರ್ಯ ಭರದಿಂದ ಸಾಗಿದ್ದು, ಸಂಜೆ 6ರಿಂದ ಬೆಳಿಗ್ಗೆ 6ರವರೆಗೆ ಲಾರಿಗಳೂ ಸೇರಿದಂತೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಏಕ ಮುಖ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಸರದಿಯಲ್ಲಿ ವೇಗಮಿತಿಯೊಳಗೆ ಎಲ್ಲ ಬಗೆಯ ವಾಹನಗಳು ಸಂಚರಿಸಲು ಅವಕಾಶ ನೀಡಲಾಗಿದೆ. ಹೆದ್ದಾರಿ ಪ್ರಾಧಿಕಾರದ ಅದಿಕಾರಿಗಳ ಸಲಹೆಯಂತೆ ರಸ್ತೆ ಸಂಚಾರ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.

ನಿರಂತರ ಮಳೆಯಿಂದಾಗಿ ಶಿರಾಡಿಘಾಟ್​ನ (Shiradi Ghat) ದೋಣಿಗಲ್​​ ಸಮೀಪ ಭೂಕುಸಿತ ಉಂಟಾಗಿದೆ. ಸಕಲೇಶಪುರ ತಾಲೂಕಿನ ದೋಣಿಗಲ್ ಗ್ರಾಮದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಘಟನೆ ನಡೆದಿದೆ. ಭೂ ಕುಸಿತದಿಂದಾಗಿ ನಿನ್ನೆ (ಜುಲೈ 14) ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ, ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ವಾರದ ಹಿಂದಷ್ಟೇ ಅಲ್ಪ ಪ್ರಮಾಣದಲ್ಲಿ ಶಿರಾಡಿ ಘಾಟ್​ನ ರಸ್ತೆ ಕುಸಿದಿತ್ತು. 4 ದಿನಗಳು ಹಿಂದೆ ಲೋಕೋಪಯೋಗಿ ಸಚಿವರು ಭೇಟಿ ನೀಡಿದ್ದರು. ಇದೀಗ ದೋಣಿಗಲ್​​ ಸಮೀಪ ಮತ್ತೆ ರಸ್ತೆ ಕುಸಿದು ಬಿದ್ದಿದೆ. ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಹಲವೆಡೆ ಎಡಬಿಡದೆ ಸುರಿಯುತ್ತಿದೆ. ಸಕಲೇಶಪುರ, ಆಲೂರು, ಅರಕಲಗೂಡು, ಬೇಲೂರಿನಲ್ಲಿ ಭಾರೀ ಮಳೆಯಾಗಿದೆ.

ಚಾರ್ಮಾಡಿ ಘಾಟ್​ನಲ್ಲಿ ಲಘು ಭೂಕುಸಿತ

ಕಳೆದ 10 ಚಿಕ್ಕಮಗಳೂರು ಜಿಲ್ಲೆಯ ದಿನಗಳಿಂದ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ (Charmadi Ghat) ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ನಿರಂತರ ಮಳೆಯಿಂದ (Rain) ವಾಹನ ಸಂಚಾರ ದುಸ್ತರವಾಗಿದೆ. ಅಲ್ಲದೆ ಚಾರ್ಮಾಡಿ ಘಾಟ್​ನ ಸೋಮನಕಾಡು ಸಮೀಪ ಲಘು ಭೂಕುಸಿತವಾಗಿದ್ದು ಸದ್ಯ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಹೆದ್ದಾರಿ ಪ್ರಾಧಿಕಾರದ ಜೆಸಿಬಿ ಯಂತ್ರಗಳು ಮಣ್ಣು ತೆರವುಗೊಳಿಸುತ್ತಿವೆ.

Published On - 6:43 am, Fri, 15 July 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ