AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಮಳೆಯಿಂದಾಗಿ ಶಿರಾಡಿಘಾಟ್​ನಲ್ಲಿ ಮತ್ತೆ ಭೂಕುಸಿತ: ಭಾರೀ ವಾಹನಗಳ ಸಂಚಾರ ನಿರ್ಬಂಧ

ವಾರದ ಹಿಂದಷ್ಟೇ ಹೆದ್ದಾರಿಯಲ್ಲಿ ಅಲ್ಪ ಪ್ರಮಾಣದ ರಸ್ತೆ ಕುಸಿದಿತ್ತು. 4 ದಿನದ ಹಿಂದೆ ಲೋಕೋಪಯೋಗಿ ಸಚಿವರು ಭೇಟಿ ನೀಡಿದ್ದರು. ಈಗ ದೋಣಿಗಲ್​​ ಸಮೀಪ ಮತ್ತೆ ರಸ್ತೆ ಕುಸಿದು ಬಿದ್ದಿದೆ.

ನಿರಂತರ ಮಳೆಯಿಂದಾಗಿ ಶಿರಾಡಿಘಾಟ್​ನಲ್ಲಿ ಮತ್ತೆ ಭೂಕುಸಿತ: ಭಾರೀ ವಾಹನಗಳ ಸಂಚಾರ ನಿರ್ಬಂಧ
ಶಿರಾಡಿಘಾಟ್​ನಲ್ಲಿ ಮತ್ತೆ ಭೂಕುಸಿತ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 14, 2022 | 1:39 PM

Share

ಹಾಸನ: ನಿರಂತರ ಮಳೆಯಿಂದಾಗಿ ಶಿರಾಡಿಘಾಟ್​ನ (Shiradighat) ದೋಣಿಗಲ್​​ ಸಮೀಪ ಮತ್ತೆ ಭೂಕುಸಿತ ಉಂಟಾಗಿದ್ದು, ರಸ್ತೆ ಕುಸಿದು ಬಿದಿದ್ದೆ. ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಗ್ರಾಮದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಘಟನೆ ನಡೆದಿದೆ. ಭೂ ಕುಸಿತದಿಂದಾಗಿ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಸದ್ಯ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ವಾರದ ಹಿಂದಷ್ಟೇ ಹೆದ್ದಾರಿಯಲ್ಲಿ ಅಲ್ಪ ಪ್ರಮಾಣದ ರಸ್ತೆ ಕುಸಿದಿತ್ತು. 4 ದಿನದ ಹಿಂದೆ ಲೋಕೋಪಯೋಗಿ ಸಚಿವರು ಭೇಟಿ ನೀಡಿದ್ದರು. ಈಗ ದೋಣಿಗಲ್​​ ಸಮೀಪ ಮತ್ತೆ ರಸ್ತೆ ಕುಸಿದು ಬಿದ್ದಿದೆ. ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಹಲವೆಡೆ ಎಡಬಿಡದೆ ಸುರಿಯುತ್ತಿದೆ. ಸಕಲೇಶಪುರ, ಆಲೂರು, ಅರಕಲಗೂಡು, ಬೇಲೂರಿನಲ್ಲಿ ಭಾರೀ ಮಳೆಯಾಗಿದ್ದು, ಇಂದು ಆಲೂರು, ಸಕಲೇಶಪುರ, ಅರಕಲಗೂಡು, ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಕಾಡಾನೆ ದಾಳಿಯಿಂದ ಮೃತಪಟ್ಟವರ ಮನೆಗೆ ಕೇಂದ್ರ ಸಚಿವ ಕೃಷ್ಣಪಾಲ್ ಗುರ್ಜಾರ್ ಭೇಟಿ; ಕುಟುಂಬಕ್ಕೆ ಕೆಲಸದ ಭರವಸೆ

ಮನೆಯೊಳಗೆ ನುಗ್ಗಿದ ನೀರು:

ಹೇಮಾವತಿ ಜಲಾಶಯಕ್ಕೆ 33164 ಕ್ಯೂಸೆಕ್ ಒಳಹರಿವು, ಜಲಾಶಯದಿಂದ 35350 ಕ್ಯೂಸೆಕ್ ನೀರು ಹೊರಹರಿವಾಗಿದೆ. ಹೇಮಾವತಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2922 ಅಡಿ. ಇಂದು ಜಲಾಶಯದಲ್ಲಿನ ನೀರಿನ ಮಟ್ಟ 2920.30 ಅಡಿ. ಜಲಾಶಯದ ನೀರಿನ ‌ಸಂಗ್ರಹ ಪ್ರಮಾಣ 37.103 ಟಿಎಂಸಿ ಇದ್ದು, ಇಂದು ಜಲಾಶಯದಲ್ಲಿರುವ ನೀರಿನ ಪ್ರಮಾಣ 35.460 ಟಿಎಂಸಿ. ನಿರಂತರ ಮಳೆಯಿಂದ ಜಲ ಉಕ್ಕಿ ಹರಿದು ಮನೆಯೇ ಕುಸಿದು ಬೀಳೋ ಆತಂಕ ಉಂಟಾಗಿರುವಂತ ಘಟನೆ ಕೂಡ  ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ತರಗಳಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಉಮೇಶ್ ಎಂಬುವವರ ಮನೆಯೊಳಗೆ ನೀರು ನುಗ್ಗಿ ಆತಂಕ ಸೃಷ್ಟಿಯಾಗಿದ್ದು, ರಾತ್ರಿಯಿಡಿ ಮನೆಯಿಂದ ನೀರು ಹೊರ ಹಾಕಿ ಪರದಾಡಿದ್ದಾರೆ. ಸೂಕ್ತ ಪರಿಹಾರಕ್ಕಾಗಿ ಸಂತ್ರಸ್ಥ ಕುಟುಂಬ ಸದಸ್ಯರ ಒತ್ತಾಯಿಸಿದರು.

ಇದನ್ನೂ ಓದಿ: Shocking Video: ಫೋಟೋ ಆಸೆಯಿಂದ ಸಮುದ್ರದಲ್ಲಿ ಕೊಚ್ಚಿ ಹೋದ ಕುಟುಂಬ; ಶಾಕಿಂಗ್ ವಿಡಿಯೋ ವೈರಲ್

5 ಲಕ್ಷ ಪರಿಹಾರ ನೀಡುವುದಾಗಿ ಸಚಿವ ಕೆ.ಗೋಪಾಲಯ್ಯ ಭರವಸೆ

ಇನ್ನೂ 150ಕ್ಕೂ ಹೆಚ್ಚು ಮನೆಗಳು ಮಳೆಯಿಂದ ಹಾನಿಗೊಳಗಾಗಿವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅರಕಲಗೂಡು ತಾಲೂಕಿನ ಬಸನವಹಳ್ಳಿ ಗ್ರಾಮದಲ್ಲಿ ಹೇಳಿದ್ದರು. ಮನೆ ಕಳೆದುಕೊಂಡವರಿಗೆ ತಕ್ಷಣ 10,000 ರೂಪಾಯಿ ಪರಿಹಾರ ನೀಡಿದ್ದು, ಸಂಪೂರ್ಣ ಹಾನಿಯಾಗಿರುವ ಮನೆಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಭಾಗಶಃ ಹಾನಿಯಾದ ಮನೆಗಳಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು. ಹೊಳೆನರಸೀಪುರ, ಅರಕಲಗೂಡು ತಾಲೂಕಿನಲ್ಲಿ ಹೆಚ್ಚಿನ ಮನೆಗಳಿಗೆ ಹಾನಿಯಾಗಿವೆ. ಮಳೆಯಿಂದ ಹಾನಿಯಾದ ತಂಬಾಕು, ಶೇಂಗಾ, ಆಲೂಗಡ್ಡೆ ಬೆಳೆ ಬಗ್ಗೆ ವರದಿ ಪಡೆದಿದ್ದೇನೆ. ವರದಿ ಪರಿಶೀಲಿಸಿ ರೈತರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು. ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜನರ ಸಮಸ್ಯೆ ಆಲಿಸುವಂತೆ ತಹಶೀಲ್ದಾರ್​ಗಳಿಗೆ ಸೂಚಿಸಿದ್ದೇನೆ ಎಂದು ಅವರು ಹೇಳಿದರು.

Published On - 1:38 pm, Thu, 14 July 22