AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಆನೆಯನ್ನು ಮೈಸೂರಿಗೆ ಕಳಿಸಿಕೊಡಿ, ಇಲ್ಲ ನನ್ನನ್ನೂ ಅರ್ಜುನ ಜತೆ ಮಣ್ಣು ಮಾಡಿ: ಅಂಗಲಾಚಿದ ಮಾವುತ

ಕಾಡಾಳೆ ಸೆರೆ ವೇಳೆ ಮೃತ ಪಟ್ಟ ಅರ್ಜುನ ನೋಡಲು ಜನ ಮುಗಿಬಿದ್ದಿದ್ದು, ಅಂತಿಮ ದರ್ಶನಕ್ಕೆ ಮೈಸೂರಿನಿಂದ ಜನರು ಆಗಮಿಸುತ್ತಿದ್ಆರೆ. ಇನ್ನು ಅರ್ಜುನನ್ನು ಕಂಡು ಮಾವುತ ವಿವುನ ಆಕ್ರಂದನ ಮುಗಿಲು ಮುಟ್ಟಿದೆ.

ನನ್ನ ಆನೆಯನ್ನು ಮೈಸೂರಿಗೆ ಕಳಿಸಿಕೊಡಿ, ಇಲ್ಲ ನನ್ನನ್ನೂ ಅರ್ಜುನ ಜತೆ ಮಣ್ಣು ಮಾಡಿ: ಅಂಗಲಾಚಿದ ಮಾವುತ
ಆಯೇಷಾ ಬಾನು
| Edited By: |

Updated on:Dec 05, 2023 | 3:18 PM

Share

ಹಾಸನ, (ಡಿಸೆಂಬರ್ 05): ಮೈಸೂರು ದಸರಾ ಉತ್ಸವದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಸಾಕಾನೆ ‘ಅರ್ಜುನ’ (Arjuna) ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟಿದೆ. ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿಯ ದಬ್ಬಳಿಕಟ್ಟೆ ಅರಣ್ಯದಲ್ಲಿ ಸೋಮವಾರ ಸಾವನ್ನಪ್ಪಿದ್ದು, ಇಡೀ ಕರ್ನಾಟಕವೇ ಮಮ್ಮಲ ಮರುಗಿದೆ. ಇನ್ನು ಅರ್ಜುನನ್ನು ನೋಡಿಕೊಳ್ಳುತ್ತಿದ್ದ ಮಾವುತ ವಿನು ಆಕ್ರಂದನ ಮುಗಿಲು ಮುಟ್ಟಿದೆ. ನನ್ನ ಆನೆಯನ್ನು ಬದುಕಿಸಿಕೊಡಿ, ನನ್ನ ಆನೆಯನ್ನು ಮೈಸೂರಿಗೆ ಕಳುಸಹಿಸಿಕೊಡಿ. ಇಲ್ಲಾ ನನ್ನನ್ನು, ನನ್ನನ್ನೂ ಅರ್ಜುನನ ಜೊತೆ ಮಣ್ಣು ಮಾಡಿ ಎಂದು ಅಂಗಲಾಚಿ ಬೇಡಿಕೊಳ್ಳುತ್ತಿದ್ದಾರೆ.

ನನ್ನ ಆನೆಗೆ ಆಕಸ್ಮಿಕವಾಗಿ ಕಾಲಿಗೆ ಗುಂಡು ಬಿತ್ತು. ಅವರೇನು ಬೇಕಂತ ಫೈರ್ ಮಾಡಿಲ್ಲ. ಆಕಸ್ಮಿಕವಾಗಿ ಗುಂಡೇಟು ಬಿದ್ದಿದೆ. ಗುಂಡೇಟು ತಗುಲಿದ ಬಳಿಕ ಆನೆ ಕುಂಟಲು ಶುರುವಾಯ್ತು. ಅವನು ಕುಂಟುತ್ತಾ ಎಷ್ಟು ಹೋರಾಟ ಮಾಡ್ತಾನೆ ಸಾರ್, ಆಗದೇ ಅಲ್ಲೇ ಕುಸಿದು ಬಿದ್ದ. ಪ್ರಶಾಂತ ಆನೆಗೆ ಮಿಸ್ಸಾಗಿ ಅರವಳಿಕೆ ಮದ್ದಿನ ಫೈರ್ ಆಗಿತ್ತು. ಆ ಆನೆಯನ್ನು ಸಂತೈಸಲು ಹೋದಾಗ ಸಲಗ ಅರ್ಜುನನ ಮೇಲೆ ದಾಳಿ ‌ಮಾಡಿದೆ. ನಾನು ಇದ್ದಿದ್ದರೆ ಹೀಗೆ ಆಗಲು ಬಿಡುತ್ತಿರಲಿಲ್ಲ ಸಾರ್. ನಾನು ನನ್ನ ಆನೆ ಬಿಟ್ಟು ಹೋಗಲ್ಲ. ಸಾರ್ ನನ್‌ ರಾಜಾ ಮಲಗಿದಾನೆ ಸಾರ್ ಎದ್ದೇಳಿಸಿ. ಅರ್ಜುನ ಸತ್ತಿಲ್ಲ ಎಂದು ನನ್ನ ಹೆಂಡತಿ ಮಕ್ಕಳಿಗೆ ಹೇಳಿದ್ದೇನೆ. ಅರ್ಜುನನನ್ನು ನನ್ನ‌ ಜೊತೆ ಕಳುಹಿಸಿಕೊಡಿ ಸಾರ್ ಎಂದು ಕಣ್ಣೀಡುತ್ತಿದ್ದಾರೆ.

ಇದನ್ನೂ ಓದಿ: ಅರಣ್ಯ ಇಲಾಖೆ ಸಿಬ್ಬಂದಿ ಪ್ರಮಾದದಿಂದ ಅರ್ಜುನ ಬಲಿ? ಆನೆ ಸಾವಿನ ಸತ್ಯ ಬಿಚ್ಚಿಟ್ಟ ಮಾವುತ

ಇನ್ನು ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿಯ ದಬ್ಬಳಿಕಟ್ಟೆ ಅರಣ್ಯದಲ್ಲಿ ಅರ್ಜುನ ಮೃತ ಪಟ್ಟಿದ್ದು, ಅಲ್ಲೇ ಅಂತ್ಯಕ್ರಿಯೆ ನಡೆಸಲು ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಆದ್ರೆ, ಜನರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸ್ಮಾರಕ ಕಟ್ಟುವ ಸಲುವಾಗಿ ಬೇರೆಡೆ ಅಂತ್ಯಕ್ರಿಯೆ ಮಾಡುವಂತೆ ಆಗ್ರಹಿಸಿದ್ದಾರೆ. ಇನ್ನು ಪ್ರೀತಿ ಆನೆ ಅರ್ಜುನಮ ಅಂತಿಮದರ್ಶನಕ್ಕೆ ಜನರ ದಂಡು ಬರುತ್ತಿದೆ. ಮೈಸೂರು ಹಾಗೂ ಸುತ್ತಮುತ್ತಲಿನ ಗ್ರಾಮದ ಜನರು ಬಂದು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮೃತ ಅರ್ಜುನನ ಕಳೇಬರಕ್ಕೆ ಹಾರ ಹಾಕಿ ನಮನ ಸಲ್ಲಿಸಿ ಗೌರವ ಸೂಚಿಸುತ್ತಿದ್ದಾರೆ.

ಇನ್ನು ಇದರ ಮಧ್ಯೆ ಪ್ರವೇಶಿಸಿದ ಅರಮನೆ ಪುರೋಹಿತ ಪ್ರಾಹ್ಲಾದ್, ಆನೆ ಮೃತಪಟ್ಟ ಸ್ಥಳದಲ್ಲಿ ಅಂತ್ಯಕ್ರಿಯೆ ಆಗಬೇಕು. ಈಗಾಗಲೇ ಅರ್ಜನನಿಗೆ ನೋವಾಗಿದೆ. ಮತ್ತೆ ನೋವಾಗುವುದು ಬೇಡ ಎಂದು ಜನರಿಗೆ ಕೈಮುಗಿದು ಮನವಿ ಮಾಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:05 pm, Tue, 5 December 23

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ