ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮನ್ ಸಾವು

| Updated By: ವಿವೇಕ ಬಿರಾದಾರ

Updated on: Jul 18, 2022 | 9:10 PM

ವಿದ್ಯುತ್ ಪರಿವರ್ತಕ (TC) ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮನ್ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಸಬ್ಬನಹಳ್ಳಿಯಲ್ಲಿ ನಡೆದಿದೆ.

ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮನ್ ಸಾವು
ಮೃತ ಲೈನ್ ಮನ್ ಮಂಜುನಾಥ್
Follow us on

ಹಾಸನ: ವಿದ್ಯುತ್ ಪರಿವರ್ತಕ (TC) ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮನ್ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನ ಸಬ್ಬನಹಳ್ಳಿಯಲ್ಲಿ ನಡೆದಿದೆ. ತಾಲ್ಲೂಕಿನ ಹೆಗ್ಗಡಿಹಳ್ಳಿಯ ಮಂಜುನಾಥ್ (35) ಮೃತ ಚೆಸ್ಕಾಂ (CHESCOM) ನೌಕರ. ಟ್ರಾನ್ಸ್​ಫರ್ಂನಲ್ಲಿ ರಿಪೇರಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಹರಿದಿದ್ದರಿಂದ  ಲೈನ್ ಮನ್ ಸಾವನ್ನಪ್ಪಿದ್ದಾನೆ. ಅದಿಕಾರಿಗಳ ನಿರ್ಲಕ್ಷ್ಯ ದಿಂದ ಲೈನ್ ಮನ್ ಸಾವನ್ನಪ್ಪಿದ್ದಾನೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸೂಕ್ತ ಪರಿಹಾರ ನೀಡುವಂತೆ ಸಂಬಂಧಿಕರು ಸ್ಥಳದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟ್ರಾನ್ಸ್‌ಫರ್ ಬಳಿ ಕಸ ಕ್ಲೀನ್ ಮಾಡುವಾಗ ವ್ಯಕ್ತಿಗೆ ವಿದ್ಯುತ್ ಸ್ಪರ್ಶ

ಕೊಪ್ಪಳ: ಟ್ರಾನ್ಸ್‌ಫರ್ ಬಳಿ ಕಸ ಕ್ಲೀನ್ ಮಾಡುವಾಗ ವ್ಯಕ್ತಿಗೆ ವಿದ್ಯುತ್ ಸ್ಪರ್ಶಗೊಂಡು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರಟಗಿ ತಾಲೂಕಿನ ನಂದಿಹಳ್ಳಿ ಗ್ರಾಮದ ಬಳಿ ನಡೆದಿದೆ. ಕಕ್ಕರಗೋಳ ಗ್ರಾಮದ ನಿವಾಸಿ ಭೀಮಣ್ಣ ( 38) ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ವಿದ್ಯುತ್ ಸ್ಪರ್ಶದಿಂದ  ಗಾಯಗೊಂಡು, ನರಳಾಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಿಸಿ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

Published On - 7:32 pm, Mon, 18 July 22