AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; 4 ಬೈಕ್​​ಗಳಿಗೆ ಲಾರಿ ಡಿಕ್ಕಿ, ಇಬ್ಬರು ಮಕ್ಕಳು ಸಾವು

Hassan News: ಹಾಸನದ ಗವೇನಹಳ್ಲಿಯ ಶಿವಾನಂದ್ ಪತ್ನಿ ಜ್ಯೋತಿಗೆ ಗಂಭೀರ ಗಾಯವಾಗಿದೆ. ಮೃತ ಮಕ್ಕಳ ಮಕ್ಕಳ‌ ಪೋಷಕರ ಸ್ಥಿತಿ ಗಂಭೀರವಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಸನ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; 4 ಬೈಕ್​​ಗಳಿಗೆ ಲಾರಿ ಡಿಕ್ಕಿ, ಇಬ್ಬರು ಮಕ್ಕಳು ಸಾವು
ಸಾಂಕೇತಿಕ ಚಿತ್ರ
TV9 Web
| Updated By: ganapathi bhat|

Updated on:Dec 19, 2021 | 11:27 PM

Share

ಹಾಸನ: ಇಲ್ಲಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಒಂದು ನಾಲ್ಕು ಬೈಕ್​ಗಳಿಗೆ ಡಿಕ್ಕಿ ಹೊಡೆದಿದೆ. ಎರಡು ಪುಟ್ಟ ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕುಡಿದ ಮತ್ತಿನಲ್ಲಿ ಲಾರಿ ಚಾಲಕ ಮನಬಂದಂತೆ ವಾಹನ ಚಲಾಯಿಸಿದ್ದಾನೆ. ಸುಮಾರು ಎರಡು ಕಿಲೋಮೀಟರ್ ಬೈಕ್ ಎಳೆದುಕೊಂಡು ಹೋಗಿರುವ ಲಾರಿಗೆ ಸಿಲುಕಿ ಪ್ರಣತಿ (3) ಪ್ರಣವ್ (3) ಎಂಬ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಹಾಸನದ ಗವೇನಹಳ್ಲಿಯ ಶಿವಾನಂದ್ ಪತ್ನಿ ಜ್ಯೋತಿಗೆ ಗಂಭೀರ ಗಾಯವಾಗಿದೆ. ಮೃತ ಮಕ್ಕಳ ಮಕ್ಕಳ‌ ಪೋಷಕರ ಸ್ಥಿತಿ ಗಂಭೀರವಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಸನ ಹೊರ ವಲಯದ ಬೂವನಹಳ್ಳಿ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಲಾರಿ ನಿಲ್ಲಿಸದೆ ಲಾರಿ ಚಾಲಕ ಪರಾರಿ ಆಗಿದ್ದ. ಅಪಘಾತ ಸ್ಥಳದಿಂದ ಮೂರು ಕಿಲೋಮೀಟರ್ ಮುಂದೆ ಹೋಗುವಾಗ ಮತ್ತೆ ಮೂರು ಬೈಕ್​ಗಳಿಗೆ ಲಾರಿ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರ ರಿಂಗ್ ರಸ್ತೆಯ ಬೂವನಹಳ್ಳಿಯಿಂದ ಹೊಸಕೊಪ್ಪಲು ನಡುವೆ ಅದೇ ಲಾರಿ ನಾಲ್ಕು ಬೈಕ್​ಗಳಿಗೆ ಡಿಕ್ಕಿ ಆಗಿದೆ. ಲಾರಿ ಹಿಂಬಾಲಿಸಿದ ಜನರು ಮೈಸೂರು ರಸ್ತೆಯ ಹೊಸಕೊಪ್ಪಲು ಬಳಿ ಲಾರಿ ತಡೆದು ನಿಲ್ಲಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆ ಅಳಿಯನಿಂದಲೇ ಮಾವನ ಹತ್ಯೆ ಕೌಟುಂಬಿಕ ಕಲಹ ಹಿನ್ನೆಲೆ ಅಳಿಯನಿಂದಲೇ ಮಾವನ ಹತ್ಯೆಯಾದ ದುರ್ಘಟನೆ ತುಮಕೂರು ನಗರದ ಎನ್.ಆರ್.ಕಾಲೋನಿಯಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಚಂದ್ರಯ್ಯ(36) ಬರ್ಬರ ಕೊಲೆ ಮಾಡಲಾಗಿದೆ. ಅಳಿಯ ನಕುಲ್ ಮಾವನನ್ನೇ ಬರ್ಬರವಾಗಿ ಹತ್ಯೆಗೈದಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆ ಜಗಳ ನಡೆದು ಬರ್ಬರ ಹತ್ಯೆ ಆಗಿದೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮಂಗಳೂರು: ನೇಣುಬಿಗಿದುಕೊಂಡು ಎಂಬಿಬಿಎಸ್​ ವಿದ್ಯಾರ್ಥಿನಿ ಆತ್ಮಹತ್ಯೆ ನೇಣುಬಿಗಿದುಕೊಂಡು ಎಂಬಿಬಿಎಸ್​ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಂಗಳೂರು ಬಳಿ ಕುತ್ತಾರು ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಬೀದರ್ ಮೂಲದ ವೈಶಾಲಿ ಗಾಯಕ್ವಾಡ್ (25) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೇಮ ವೈಫಲ್ಯದಿಂದ ನೊಂದು ಆತ್ಮಹತ್ಯೆಗೆ ಶರಣಾದ ಶಂಕೆ ವ್ಯಕ್ತವಾಗಿದೆ. ಯುವತಿ ಸ್ನೇಹಿತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬಳ್ಳಾರಿ: ಶಾರ್ಟ್​​​ ಸರ್ಕ್ಯೂಟ್​ನಿಂದ ರಸ್ತೆಯಲ್ಲಿ ಹೊತ್ತಿ ಉರಿದ ಕಾರು ಶಾರ್ಟ್​​​ ಸರ್ಕ್ಯೂಟ್​ನಿಂದ ಕಾರೊಂದು ರಸ್ತೆಯಲ್ಲಿ ಹೊತ್ತಿ ಉರಿದ ದುರ್ಘಟನೆ ನಡೆದಿದೆ. ಬಳ್ಳಾರಿಯ ಮೋತಿ ಸರ್ಕಲ್​​ನಲ್ಲಿ ಕಾರು ಹೊತ್ತಿಉರಿದಿದೆ. ಹೊಸಪೇಟೆಯಿಂದ ಆಂಧ್ರಕ್ಕೆ ತೆರಳ್ತಿದ್ದ ಸ್ಕಾರ್ಪಿಯೋ ಕಾರು ಬೆಂಕಿಗೆ ಆಹುತಿ ಆಗಿದೆ. ಅದೃಷ್ಟವಶಾತ್​ ಕಾರಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ದಾವಣಗೆರೆ: ಗಾಯಾಳುಗಳನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ದಾಖಲಿಸಿದ ಶಾಸಕ ರಾಮಪ್ಪ ಅಪಘಾತಗೊಂಡ ಗಾಯಾಳನ್ನು ಹರಿಹರ ಶಾಸಕ ಎಸ್ ರಾಮಪ್ಪ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಬೆಳ್ಳೂಡಿ ಕ್ರಾಸ್ ಬಳಿ ಕಾರು – ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಆಗಿತ್ತು. ಹರಿಹರ ಕಾಂಗ್ರೆಸ್ ಶಾಸಕ ಎಸ್ ರಾಮಪ್ಪ ಅಪಘಾತದಿಂದ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೂಕ್ತ ಚಿಕಿಕ್ಸೆ ನೀಡುವಂತೆ ವೈದ್ಯರಿಗೆ ಶಾಸಕರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ; ಮೂವರ ಸ್ಥಿತಿ ಗಂಭೀರ, ಬಾಲಕ ಸಾವು

ಇದನ್ನೂ ಓದಿ: ಚಾಮರಾಜನಗರ: ಗ್ರಾಮ ವಾಸ್ತವ್ಯ ಮುಗಿಸಿ ಹಿಂದಿರುಗುತ್ತಿದ್ದ ಅಧಿಕಾರಿ ಸಾವು

Published On - 11:23 pm, Sun, 19 December 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ