8 ವರ್ಷದ ಪ್ರೀತಿಗೆ ಪೋಷಕರ ನಿರಾಕರಣೆ; ವಿಷ ಸೇವಿಸಿ ಯುವಕ ಸಾವು, ಸಾಮಾಜಿಕ ಜಾಲತಾಣದಲ್ಲಿ ಯುವತಿ, ಪೋಷಕ ಪೋಟೋ ಹಾಕಿ ಸ್ನೇಹಿತರ ಆಕ್ರೋಶ

ಕಾಫಿ ಬೆಳೆಗಾರ ಗಂಗಾಧರ್-ಪಾರ್ವತಿ ಪುತ್ರ ಅನಿಲ್, ಕಾಫಿ ಬೆಳೆಗಾರ ಶಿವರಾಂ-ಸವಿತಾ ಪುತ್ರಿ ಭಾವನಾಳನ್ನ ಪ್ರೀತಿಸುತ್ತಿದ್ದ. ಆದ್ರೆ ಭಾವನಾ ಪೋಷಕರು ಮದುವೆ ನಿರಾಕರಿಸಿದ್ದರು. ಇದರಿಂದ ಮನನೊಂದು ಶುಕ್ರವಾರ ಬೆಳಿಗ್ಗೆ ಭಾವನಾಳ ಮನೆ ಮುಂದೆಯೇ‌ ವಿಷ ಸೇವಿಸಿದ್ದಾನೆ.

8 ವರ್ಷದ ಪ್ರೀತಿಗೆ ಪೋಷಕರ ನಿರಾಕರಣೆ; ವಿಷ ಸೇವಿಸಿ ಯುವಕ ಸಾವು, ಸಾಮಾಜಿಕ ಜಾಲತಾಣದಲ್ಲಿ ಯುವತಿ, ಪೋಷಕ ಪೋಟೋ ಹಾಕಿ ಸ್ನೇಹಿತರ ಆಕ್ರೋಶ
ಸಾಮಾಜಿಕ ಜಾಲತಾಣದಲ್ಲಿ ಯುವತಿ, ಪೋಷಕ ಪೋಟೋ ಹಾಕಿ ಸ್ನೇಹಿತರ ಆಕ್ರೋಶ
Follow us
TV9 Web
| Updated By: ಆಯೇಷಾ ಬಾನು

Updated on: Jun 01, 2022 | 6:17 PM

ಹಾಸನ: ಮದುವೆ ನಿರಾಕಸಿದ್ದಕ್ಕೆ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದ್ದು ಪ್ರೇಮಿಯ ದುರಂತ ಅಂತ್ಯ ಕಂಡ ಲವ್‌ಸ್ಟೋರಿ ವಿಷಯ ವೈರಲ್ ಆಗಿದೆ. ಮೃತನ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹಾಕಿಸಿ ಯುವತಿ ಹಾಗೂ ಆಕೆಯ ಪೋಷಕರ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದಲ್ಲಿ ಅನಿಲ್ (24) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ. ಹೀಗಾಗಿ ಈತನ ಸ್ನೇಹಿತರು ಅನಿಲ್ ಪ್ರೇಯಸಿಯ ಕುಟುಂಬಸ್ಥರ ಫೋಟೋಗಳನ್ನು ವೈರಲ್ ಮಾಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದ ನಿವಾಸಿ ಅನಿಲ್, ಅದೇ ಊರಿನ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಸುಮಾರು 8ವರ್ಷಗಳ ಕಾಲ ಇಬ್ಬರು ಓಡಾಡಿಕೊಂಡಿದ್ರು. ಈ ವಿಚಾರ ಹುಡುಗಿಯ ಪೋಷಕರಿಗೆ ಗೊತ್ತಾಗುತ್ತಿದ್ದಂತೆ, ಹೊರಗೆ ಹೋಗದಂತೆ ಸ್ಟ್ರಿಕ್ಟ್ ಮಾಡಿದ್ದಾರೆ. ಹುಡುಗ ಮನೆ ಬಳಿ ಹೋದ್ರು, ಹುಡುಗಿ ಕ್ಯಾರೆ ಎಂದಿಲ್ಲ. ಇದರಿಂದ ಮನನೊಂದ ಅನಿಲ್ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ತಿರುಮಲದಲ್ಲಿ ಭಕ್ತರು ಇನ್ನು ಮುಂದೆ ಇದನ್ನು ಬಳಸುವಂತಿಲ್ಲ; ಸಂಪೂರ್ಣ ನಿಷೇಧ ಹೇರಿದ TTD

ಕಾಫಿ ಬೆಳೆಗಾರ ಗಂಗಾಧರ್-ಪಾರ್ವತಿ ಪುತ್ರ ಅನಿಲ್, ಕಾಫಿ ಬೆಳೆಗಾರ ಶಿವರಾಂ-ಸವಿತಾ ಪುತ್ರಿ ಭಾವನಾಳನ್ನ ಪ್ರೀತಿಸುತ್ತಿದ್ದ. ಆದ್ರೆ ಭಾವನಾ ಪೋಷಕರು ಮದುವೆ ನಿರಾಕರಿಸಿದ್ದರು. ಇದರಿಂದ ಮನನೊಂದು ಶುಕ್ರವಾರ ಬೆಳಿಗ್ಗೆ ಭಾವನಾಳ ಮನೆ ಮುಂದೆಯೇ‌ ವಿಷ ಸೇವಿಸಿದ್ದಾನೆ. ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಅನಿಲ್ ಸಾವನ್ನಪ್ಪಿದ್ದಾರೆ. ಅನಿಲ್ ಸಾವಿಗೆ ಭಾವನಾ ಹಾಗೂ ಪೋಷಕರೇ ಕಾರಣ ಎಂದು ಅನಿಲ್ ಸ್ನೇಹಿತರು ಪೋಸ್ಟರ್ ಹಾಕಿದ್ದಾರೆ. ಭಾವನಾ ಆಕೆಯ ಪೋಷಕರು ಹಾಗೂ ಅನಿಲ್ ಭಾವಚಿತ್ರ ಹಾಕಿ‌ ನೋವು, ಆಕ್ರೋಶ ಹೊರಹಾಕಿದ್ದಾರೆ. ಆತ್ಮಹತ್ಯೆ ಬಗ್ಗೆ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಳಲಿ ದರ್ಗಾ ವಿವಾದ: ವಿಎಚ್ ಪಿ ಸಲ್ಲಿಸಿದ ಅರ್ಜಿ ವಜಾಗೊಳಿಸುವಂತೆ ವಾದ ಮಂಡಿಸುತ್ತಿರುವ ದರ್ಗಾ ಪರ ವಕೀಲರು

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ