ಹಾಸನ: ಆಸ್ಪತ್ರೆಯಲ್ಲಿ ವ್ಯಕ್ತಿ ಹಠಾತ್ ಸಾವು, ಕರ್ತವ್ಯ ಲೋಪ ಎಸಗಿದ ವೈದ್ಯ ಅಮಾನತು

ಎದೆ ನೋವು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಹಠಾತ್ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಇದರಿಂದ ಆಕ್ರೋಶಗೊಂಡ ಮೃತನ ಸಂಬಂಧಿಕರು ವೈದ್ಯರು ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ, ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆ ಅರವಳಿಕೆ ತಜ್ಞರನ್ನು ಅಮಾನತುಗೊಳಿಸಲಾಗಿದೆ.

ಹಾಸನ: ಆಸ್ಪತ್ರೆಯಲ್ಲಿ ವ್ಯಕ್ತಿ ಹಠಾತ್ ಸಾವು, ಕರ್ತವ್ಯ ಲೋಪ ಎಸಗಿದ ವೈದ್ಯ ಅಮಾನತು
ಮೃತ ವ್ಯಕ್ತಿಯ ಸಂಬಂಧಿಕರ ಜೊತೆ ಮಾತನಾಡುತ್ತಿರುವ ಹಾಸನ ಡಿಹೆಚ್​ಒ
Follow us
ಮಂಜುನಾಥ ಕೆಬಿ
| Updated By: Rakesh Nayak Manchi

Updated on: Sep 18, 2023 | 4:12 PM

ಹಾಸನ, ಸೆ.18: ಎದೆ ನೋವು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಹಠಾತ್ ಸಾವನ್ನಪ್ಪಿದ ಘಟನೆ ಹಾಸನ (Hassan) ಜಿಲ್ಲೆಯ ಬೇಲೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಇದರಿಂದ ಆಕ್ರೋಶಗೊಂಡ ಮೃತನ ಸಂಬಂಧಿಕರು ವೈದ್ಯರು ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ, ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆ ಅರವಳಿಕೆ ತಜ್ಞರನ್ನು ಅಮಾನತುಗೊಳಿಸಲಾಗಿದೆ.

ಹೆಬ್ಬಾಳು ಗ್ರಾಮದ ಶಿವಣ್ಣ (60) ಎದೆ ನೋವು ಹಿನ್ನೆಲೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಸ್ಪತ್ರೆಗೆ ಬಂದಾಗ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡದೆ ಕರ್ತವ್ಯ ಲೋಪ ಎಸಗಿದ ಆರೋಪ ವೈದ್ಯರ ವಿರುದ್ಧ ಕೇಳಿಬಂದಿದೆ. ಪರಿಣಾ, ಶಿವಣ್ಣ ಅವರು ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹಾಸನ: ಸಂಸದ ಪ್ರಜ್ವಲ್​ ರೇವಣ್ಣ ಅನರ್ಹಕ್ಕೆ ಯಾವ್ಯಾವ ಕೇಸ್​ಗಳು ಗೊತ್ತಾ? ವಕೀಲರು ಹೇಳಿದ್ದಿಷ್ಟು

ಇದರಿಂದ ಆಕ್ರೋಶಗೊಂಡ ಮೃತನ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದು, ಹೋರಾಟ ನಿರತರ ಪರ ನಿಂತು ವೈದ್ಯರ ನಿರ್ಲಕ್ಷದ ಬಗ್ಗೆ ಬೇಲೂರು ಶಾಸಕ ಎಚ್.ಕೆ.ಸುರೇಶ್ ಅಸಮದಾನ ಹೊರ ಹಾಕಿದರು. ಮುಂದೆ ಇಂತಹ ಘಟನೆ ಮರುಕಳಿಸದಂತೆ ವೈದ್ಯರಿಗೆ ಸೂಚಿಸಿದರಲ್ಲದೆ, ಹೋರಾಟ ಹಿಂಪಡೆಯಲು ಮೃತರ ಸಂಬಂಧಿಕರಿಗೆ ಮನವಿ ಮಾಡಿದರು.

ಇತ್ತ, ಸ್ಥಳಕ್ಕೆ ದೌಡಾಯಿಸಿದ ಡಿಹೆಚ್​ಒ ಡಾ.ಶಿವಸ್ವಾಮಿ ತನಿಖೆ ನಡೆಸಿದಾಗ ಮೇಲ್ನೋಟಕ್ಕೆ ವೈದ್ಯನ ಕರ್ತವ್ಯ ಲೋಪ ಸಾಬೀತಾಗಿದೆ. ಹೀಗಾಗಿ ಅರವಳಿಕೆ ತಜ್ಞ ಡಾ.ಹರ್ಷ ಅವರನ್ನು ಅಮಾನತುಗೊಳಿಸಿದ ಡಿಹೆಚ್​ಒ, ತಾಲ್ಲೂಕು ವೈದ್ಯಾಧಿಕಾರಿ ಹಾಗೂ ರಾತ್ರಿ ಕರ್ತವ್ಯದಲ್ಲಿದ್ದ ನರ್ಸ್‌ಗೆ ನೋಟೀಸ್ ನೀಡಲು ಮುಂದಾಗಿದ್ದಾರೆ. ವೈದ್ಯರನ್ನು ಅಮಾನತು ಮಾಡುತ್ತಿದ್ದಂತೆ ಪ್ರತಿಭಟನೆ ಹಿಂಪಡೆದ ಸಂಬಂಧಿಕರು ಶವವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್