AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಪಾದಾಚಾರಿ ಸ್ಥಳದಲ್ಲೇ ಸಾವು: ಸ್ಥಳೀಯರಿಂದ ಹೆದ್ದಾರಿ ತಡೆದು ಪ್ರತಿಭಟನೆ

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗೂಳಿಹೊನ್ನೇನಹಳ್ಳಿ ಗ್ರಾಮದ ಬಳಿ ನಡೆದಿದೆ.

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಪಾದಾಚಾರಿ ಸ್ಥಳದಲ್ಲೇ ಸಾವು: ಸ್ಥಳೀಯರಿಂದ ಹೆದ್ದಾರಿ ತಡೆದು ಪ್ರತಿಭಟನೆ
ಅಪಘಾತ ಸ್ಥಳದಲ್ಲಿ ಸಾಲುಗಟ್ಟಿ ನಿಂತಿ ನೂರಾರು ವಾಹನಗಳು
ಗಂಗಾಧರ​ ಬ. ಸಾಬೋಜಿ
|

Updated on:Jun 11, 2023 | 9:42 PM

Share

ಹಾಸನ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಇನೋವಾ ಕಾರು ಡಿಕ್ಕಿ (accident) ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗೂಳಿಹೊನ್ನೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಜಗದೀಶ್ (55) ಮೃತ ದುರ್ದೈವಿ. ಘಟನೆ ಖಂಡಿಸಿ ಸ್ಥಳದಲ್ಲಿ ಪ್ರತಿಭಟನೆ ಮಾಡಿದ್ದು, ಇನೋವಾ ಕಾರು ಸರ್ವೀಸ್ ರಸ್ತೆಯಲ್ಲಿ ಬಂದು ಅಪಘಾತ‌ ಮಾಡಿದ್ದಾರೆಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಕಳೆದು ಒಂದು ಗಂಟೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಗುತ್ತಿದ್ದು, ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ.

ರಜೆ ಮುಗಿಸಿ ಬೆಂಗಳೂರಿಗೆ ವಾಪಸ್ಸು ತೆರಳುತ್ತಿದ್ದವರಿಗೆ ಪ್ರತಿಭಟನೆ ಬಿಸಿ ತಟ್ಟಿದ್ದು, ಪೊಲೀಸರು ಪ್ರತಿಭಟನಾಕಾರರ ಮನವೋಲಿಸಲು ಪ್ರಯತ್ನಿಸುತ್ತಿದ್ದಾರೆ.

ಸಿಡಿಲು ಬಡಿದು ಓರ್ವ ಸಾವು, ನಾಲ್ವರಿಗೆ ಗಾಯ

ಚಿಕ್ಕಮಗಳೂರು: ಸಿಡಿಲು ಬಡಿದು ಓರ್ವ ಮೃತಪಟ್ಟಿದ್ದು, ನಾಲ್ವರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರ ಗ್ರಾಮದಲ್ಲಿ ನಡೆದಿದೆ. ದೇವಸ್ಥಾನದ ಹೊರಭಾಗದಲ್ಲಿ ನಿಂತಿದ್ದ ಮುಕೇಶ್(40) ಮೃತ ವ್ಯಕ್ತಿ. ಗಾಯಾಳುಗಳಿಗೆ ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: Udupi News: ಖಾಸಗಿ ಬಸ್​ಗೆ ಕಾರು ಡಿಕ್ಕಿ: ಇಬ್ಬರು ಶಿಕ್ಷಕರು ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ

ಲಾರಿಗೆ ಸಾರಿಗೆ ಬಸ್ ಡಿಕ್ಕಿ: ಪ್ರಯಾಣಿಕರು ಪಾರು

ಚಿತ್ರದುರ್ಗ: ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ಲಾರಿಗೆ ಸರ್ಕಾರಿ ಬಸ್​ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್​ ಬಸ್​ನಲ್ಲಿ ಪ್ರಯಾಣಿಸುತ್ತಿದ್ದವರು ಸುರಕ್ಷಿತರಾಗಿದ್ದು, ಯಾವುದೇ ಪ್ರಾಣಹಾನಿ ಆಗಿಲ್ಲ. ಹಿರಿಯೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಾಲೇಜಿನ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ನಿಟ್ಟೆ ಮೀನಾಕ್ಷಿ ಕಾಲೇಜಿನ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಯಲಹಂಕ ನ್ಯೂ ಟೌನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ ವಿವೇಕ್​​(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಾಲ್ಕನೇ ಸೆಮಿಸ್ಟರ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹಲವು ಪೊಲೀಸರಿಗೆ ವಂಚಿಸಿದ್ದ ನಕಲಿ ಐಪಿಎಸ್ ಅರ್ಜುನ್ ಅರೆಸ್ಟ್

ಹಣಕಾಸಿನ ವಿಚಾರದಲ್ಲಿ ನಡೆದ ಗಲಾಟೆ: ಓರ್ವನ ಕೊಲೆ

ತುಮಕೂರು: ಹಣಕಾಸಿನ ವಿಚಾರಕ್ಕೆ ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ತುರುವೇಕೆರೆ ತಾಲೂಕಿನ ಕರೇಕಲ್ಲು ಗ್ರಾಮದಲ್ಲಿ ನಡೆದಿದೆ. ದಿಲೀಪ್(22) ಮೃತ ದುರ್ದೈವಿ. ಪ್ರಸಾದ್ ಮತ್ತು ಮಂಜುನಾಥ್ ಕೊಲೆ ಆರೋಪಿಗಳು. ಹಣಕಾಸಿನ ವಿಚಾರಕ್ಕೆ ಪ್ರಸಾದ್, ಕಿರಣ್ ನಡುವೆ ಗಲಾಟೆ ಆಗಿತ್ತು. ರಾಜಿ ಮಾಡಿಸಲು ಬಂದಿದ್ದ ಕಿರಣ್ ಕುಮಾರ್ ಸ್ನೇಹಿತ ದಿಲೀಪ್ ಆಗಮಿಸಿದ್ದನು. ಈ ವೇಳೆ ದಿಲೀಪ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿತ್ತು. ಗಾಯಾಳು ದಿಲೀಪ್​​ನನ್ನು ಕೂಡಲೇ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದಿಲೀಪ್​ ಸಾವನ್ನಪ್ಪಿದ್ದಾನೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:34 pm, Sun, 11 June 23

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ