Hassan News: ಹಳೇಬೀಡು ಗ್ರಾ. ಪಂಚಾಯತಿ ಅಧ್ಯಕ್ಷ ಗಾದಿಗೇರುವ ವಿಚಾರದಲ್ಲಿ ಹೊಡೆದಾಟ; ಕುಸಿದು ಬಿದ್ದ ಸದಸ್ಯ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 29, 2023 | 9:35 AM

ಹಳೇಬೀಡು ಗ್ರಾಮ ಪಂಚಾಯತಿ ಅಧ್ಯಕ್ಷ ಚುನಾವಣೆ ಬಳಿಕ ವಿಜಯೋತ್ಸವದ ವೇಳೆ ಬಿಜೆಪಿ ಹಾಗೂ ಜೆಡಿಎಸ್​ ಬೆಂಬಲಿತ ಸದಸ್ಯರ ನಡುವೆ ಗಲಾಟೆಯಾದ ಘಟನೆ ಹಾಸನ ಜಿಲ್ಲೆಯ ಹಳೇಬೀಡು ಗ್ರಾಮದ ಹೋಯ್ಸಳ ವೃತ್ತದಲ್ಲಿ ನಡೆದಿದೆ.

Hassan News: ಹಳೇಬೀಡು ಗ್ರಾ. ಪಂಚಾಯತಿ ಅಧ್ಯಕ್ಷ ಗಾದಿಗೇರುವ ವಿಚಾರದಲ್ಲಿ ಹೊಡೆದಾಟ; ಕುಸಿದು ಬಿದ್ದ ಸದಸ್ಯ
ಹಳೇಬೀಡು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೊಡೆದಾಟ
Follow us on

ಹಾಸನ, ಜು.29: ಹಳೇಬೀಡು ಗ್ರಾಮ ಪಂಚಾಯತಿ ಅಧ್ಯಕ್ಷ ಚುನಾವಣೆ ಬಳಿಕ ವಿಜಯೋತ್ಸವದ ವೇಳೆ ಬಿಜೆಪಿ ಹಾಗೂ ಜೆಡಿಎಸ್​ ಬೆಂಬಲಿತ ಸದಸ್ಯರ ನಡುವೆ ಗಲಾಟೆಯಾದ ಘಟನೆ ಹಾಸನ(Hassan)ಜಿಲ್ಲೆಯ ಹಳೇಬೀಡು ಗ್ರಾಮದ ಹೋಯ್ಸಳ ವೃತ್ತದಲ್ಲಿ ನಡೆದಿದೆ. ಗಲಾಟೆಯಲ್ಲಿ ಓರ್ವ ಸದಸ್ಯನಿಗೆ ಗಾಯಗಳಾಗಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಇನ್ನು ಹಿಂದುಳಿದ (ಎ) ವರ್ಗಕ್ಕೆ ಮೀಸಲಾಗಿದ್ದ ಗ್ರಾ.ಪಂಚಾಯತಿ ಅಧ್ಯಕ್ಷ ಸ್ಥಾನ ಮೀಸಲಾಗಿತ್ತು. ಅದಂತೆ ಅಧ್ಯಕ್ಷ ಸ್ಥಾನಕ್ಕೆ ಮೂವರ ನಡುವೆ ಪೈಪೋಟಿ ಏರ್ಪಟ್ಟಿತ್ತು. 20 ಸದಸ್ಯರ ಸಂಖ್ಯಾಬಲ ಹೊಂದಿರುವ ಹಳೇಬೀಡು ಪಂಚಾಯತಿ ಅಧ್ಯಕ್ಷರ ಹೆಸರು ಘೋಷಣೆ ಬಳಿಕ ಸದಸ್ಯರು ಗಲಾಟೆ ಮಾಡಿಕೊಂಡಿದ್ದಾರೆ. ಈ ಕುರಿತು ಹಳೇಬೀಡು ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.

ಇನ್ನು ಇದೇ ಜುಲೈ 23ರ ರಂದು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ದಬ್ಬೇಘಟ್ಟ ಗ್ರಾಮ ಪಂಚಾಯತಿ ಅಧ್ಯಕ್ಷ ಚುನಾವಣೆಯಲ್ಲಿ ಸೋತ ಹಿನ್ನಲೆ ಸದಸ್ಯೆಯೊಬ್ಬರು ಮತ್ತೋರ್ವ ಸದಸ್ಯ ಮಂಜುನಾಥ್ ಎಂಬುವವರ ಮೇಲೆ ಚಪ್ಪಲಿಯಿಂದ ಹೊಡೆದು, ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿತ್ತು. ಅಧ್ಯಕ್ಷ ಸ್ಥಾನಕ್ಕೆ ಸೋತ ಹತಾಶೆಯಲ್ಲಿದ್ದ ಸದಸ್ಯೆ ಸುಧಾ ಜಿ.ಎನ್. ಎಂಬುವವರು ‘ನನಗೆ ಮತ ಹಾಕಿಲ್ಲ, ಹಾಗಾಗಿ ನಾನು ಸೋತಿದ್ದೇನೆ ಎಂದು ಗ್ರಾಮ ಪಂಚಾಯತಿ ಕಚೇರಿ ಒಳಗೆ ನುಗ್ಗಿ ಹಲ್ಲೆ ಮಾಡಿದ್ದರು. ಬಳಿಕ ಸುಧಾ ವಿರುದ್ಧ ಸ್ಪರ್ಧಿಸಿದ್ದ ಛಾಯಮಣಿ ಎಂಬುವವರು ಅಧ್ಯಕ್ಷೆಯಾಗಿ ಗೆಲುವು ಸಾಧಿಸಿದ್ದರು. ಇನ್ನು ಹಲ್ಲೆ ಮಾಡಿದ ಬಳಿಕ ಸುಧಾ‌ ಅವರು ತಲೆ ಮರೆಸಿಕೊಂಡಿದ್ದರು. ಈ ಕುರಿತು ಸುಧಾ ವಿರುದ್ಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ದೇವಾಲಯದ ಮಾಲೀಕತ್ವದ ವಿವಾದ; ಅಯೋಧ್ಯೆಯಲ್ಲಿ ಸಾಧು ಮೇಲೆ ಹಲ್ಲೆ ನಡೆಸಿದ ಜನರ ಗುಂಪು, ಕೃತ್ಯ ವಿಡಿಯೊದಲ್ಲಿ ಸೆರೆ

ಗಿಡ್ಡಾಪುರ ಬಳಿ ಖಾಸಗಿ ಬಸ್ ಪಲ್ಟಿ; 10ಜನರಿಗೆ ಸಣ್ಣಪುಟ್ಟ ಗಾಯ

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗಿಡ್ಡಾಪುರ ಬಳಿ ಖಾಸಗಿ ಬಸ್ ಪಲ್ಟಿಯಾಗಿ 10ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ.ನಾಯಕನಹಟ್ಟಿಯಿಂದ ಗರಣಿ ಕ್ರಾಸ್ ಕಡೆ ಹೋಗುತ್ತಿದ್ದ ಈ ಬಸ್ ಎದುರುಗಡೆ ಬಂದ ಬೈಕ್​ನ್ನು ತಪ್ಪಿಸಲು ಹೋಗಿ ಪಲ್ಟಿಯಾಗಿದೆ. ಇನ್ನು ಗಾಯಾಳುಗಳನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ