ಶಿರಾಡಿಘಾಟ್​​ನಲ್ಲಿ ಸುರಂಗ​ ಮಾರ್ಗ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ

ಶಿರಾಡಿಘಾಟ್‌ನಲ್ಲಿ ಪರ್ಯಾಯ ಮಾರ್ಗ ಚಿಂತನೆ ಮಾಡಿದ್ದೇವೆ ಎಂದು ಹೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಅವರು ಹಾಸನ-ಶಿರಾಡಿಘಾಟ್​​ನಲ್ಲಿ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಸುಳಿವು ನೀಡಿದ್ದಾರೆ.

ಶಿರಾಡಿಘಾಟ್​​ನಲ್ಲಿ ಸುರಂಗ​ ಮಾರ್ಗ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ
ಶಿರಡಿಘಾಟ್​ನಲ್ಲಿ ಸುರಂಗ ಮಾರ್ಗ ನಿರ್ಮಾಣದ ಬಗ್ಗೆ ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾಪ ಮಾಡಲು ಸೋಮವಾರ ದೆಹಲಿಗೆ ತೆರಳಲಿರುವ ಸತೀಶ್ ಜಾರಕಿಹೊಳಿ
Follow us
Rakesh Nayak Manchi
|

Updated on:Jun 24, 2023 | 8:58 PM

ಹಾಸನ: ಶಿರಾಡಿಘಾಟ್​​ನಲ್ಲಿ ಸುರಂಗ​ ನಿರ್ಮಿಸುವ ಬಗ್ಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಸುಳಿವು ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ಮಾತನಾಡಿದ ಅವರು, ಶಿರಾಡಿಘಾಟ್‌ನಲ್ಲಿ (ShiradiGhat) ಪರ್ಯಾಯ ಮಾರ್ಗ ಚಿಂತನೆ ಮಾಡಿದ್ದು, ಈ ಬಗ್ಗೆ ಕೇಂದ್ರ ಸಾರಿಗೆ ಸಚಿವರ ಜೊತೆ ಮಾತನಾಡಲು ಸೋಮವಾರ ದೆಹಲಿಗೆ ಹೋಗುತ್ತಿದ್ದೇನೆ. ಈ ಯೋಜನೆಗೆ ಕೇಂದ್ರ ಸರ್ಕಾರವು ಒಪ್ಪಿಗೆ ಸೂಚಿಸಿದರೆ ದೇಶದಲ್ಲೇ ಹೊಸ ಮೈಲಿಗಲ್ಲು ನಿರ್ಮಾಣವಾಗಲಿದೆ ಎಂದರು.

ಸಕಲೇಶಪುರ ತಾಲ್ಲೂಕಿನ ವಿವಿದೆಡೆ ರಾಷ್ಟ್ರೀಯ ಹೆದ್ದಾರಿ 75 ರ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದ ಅವರು, ಶಿರಾಡಿಘಾಟ್‌ನಲ್ಲಿ ಪರ್ಯಾಯ ಮಾರ್ಗ ವ್ಯವಸ್ಥೆಗೆ ಎನ್​ಹೆಚ್​ಎಐ ಅಧಿಕಾರಿಗಳು ನೀಲನಕ್ಷೆ ತೋರಿಸಿದ್ದಾರೆ. ಇದು 30 ಕಿ.ಮಿ‌ ರಸ್ತೆಯಾಗಿದ್ದು, ಮೂರು ಕಡೆ ಟನಲ್ ನಿರ್ಮಾಣವಾಗುತ್ತದೆ. ಈ ಬಗ್ಗೆ ಕೇಂದ್ರ ಸಾರಿಗೆ ಸಚಿವರ ಗಮನಕ್ಕೆ ತರುತ್ತೇವೆ. ಸೋಮವಾರ ನಾನು ದೆಹಲಿಗೆ ಹೋಗಿ ಕೇಂದ್ರ ಸಚಿವರನ್ನ ಭೇಟಿ ಮಾಡಿ ವಿಷಯ ಪ್ರಸ್ತಾಪ‌ ಮಾಡುತ್ತೇನೆ. ಕೇಂದ್ರ ಸಚಿವರು ಒಪ್ಪಿಗೆ ಕೊಟ್ಟರೆ ದೇಶದಲ್ಲಿ ಹೊಸ ಮೈಲಿಗಲ್ಲು ನಿರ್ಮಾಣವಾಗಲಿದೆ ಎಂದರು.

ಇದನ್ನೂ ಓದಿ: Satish Jarkiholi: ಸರ್ವರ್ ಹ್ಯಾಕ್ ಅಂತ ಸುಳ್ಳು ಆರೋಪ ಮಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ತಪ್ಪನ್ನು ಸಮರ್ಥಿಸಿಕೊಂಡ ಬಗೆ ಆಘಾತಕಾರಿ!

ಪರ್ಯಾಯ ಮಾರ್ಗ ಮತ್ತು ಸುರಂಗ ಮಾರ್ಗದ ಬಗ್ಗೆ ಕೇಂದ್ರ ತೀರ್ಮಾನ ಮಾಡಬೇಕು. ಈ ಯೋಜನೆಗೆ ಸಂಪೂರ್ಣ ‌ದುಡ್ಡು ಕೊಡುವುದು ರಾಷ್ಟ್ರೀಯ ರಸ್ತೆ ಪ್ರಾಧಿಕಾರ. ನಾವು ಪರಿಸರಕ್ಕೆ ಯಾವುದೇ ತೊಂದರೆ ಮಾಡದೆ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ ಎಂದು ಹೇಳಿದರು.

ಇದಕ್ಕೂ ಮುನ್ನ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ ಮಾಡಿದ ಸತೀಶ್ ಜಾರಕಿಹೊಳಿ, ನವೆಂಬರ್ 1 ರ ಒಳಗೆ ಹಾಸನದಿಂದ ಸಕಲೇಶಪುರದ ವರೆಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು. ಆದರೆ 2024ರ ಮಾರ್ಚ್ ವರೆಗೆ ಸಂಪೂರ್ಣ ಕಾಮಗಾರಿ ಮುಗಿಸಲು ಕಾಲಾವಕಾಶ ಕೋರಿದ್ದಾರೆ. ಪ್ರತಿ ತಿಂಗಳೂ ಈ ಬಗ್ಗೆ ಸಭೆ ಕರೆದು ಕಾಮಗಾರಿ ಬಗ್ಗೆ ಗಮನ ಕೊಡುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Sat, 24 June 23

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ