Hassan News: ಪಿಎಸ್‌ಐ ಮನೆಗೆಯೇ ಬೆಂಕಿ ಹಚ್ಚಿದ ದುಷ್ಕರ್ಮಿಗಳು, ಲಕ್ಷಾಂತರ ಮೌಲ್ಯದ ವಸ್ತುಗಳು ಆಹುತಿ

ಸಬ್‌ಇನ್ಸ್‌ಪೆಕ್ಟರ್ ಮನೆಗೆಯೇ ದುರ್ಷರ್ಮಿಗಳು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಕರ್ನಾಟಕದಲ್ಲಿ ನಡೆದಿದೆ. ಕ್ರಿಮಿನಲ್ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ಪೊಲೀಸರ ಮನೆಗೆ ಬೆಂಕಿ ಇಟ್ಟಿದ್ದಾರೆಂದು ಹಾಸನ ಜಿಲ್ಲೆ ಬೆಚ್ಚಿಬಿದ್ದಿದೆ.

Hassan News: ಪಿಎಸ್‌ಐ ಮನೆಗೆಯೇ ಬೆಂಕಿ ಹಚ್ಚಿದ ದುಷ್ಕರ್ಮಿಗಳು, ಲಕ್ಷಾಂತರ ಮೌಲ್ಯದ ವಸ್ತುಗಳು ಆಹುತಿ
ಕೊಣನೂರು ಪಿಎಸ್‌ಐ ಶೋಭಾ ಭರಮಕ್ಕನವರ್
Follow us
ರಮೇಶ್ ಬಿ. ಜವಳಗೇರಾ
|

Updated on:May 27, 2023 | 11:59 AM

ಹಾಸನ: ಸಬ್‌ಇನ್ಸ್‌ಪೆಕ್ಟರ್ ಮನೆಗೆಯೇ ದುಷ್ಕರ್ಮಿಗಳು ಬೆಂಕಿ (Fire) ಹಚ್ಚಿರುವ ಆಘಾತಕಾರಿ ಘಟನೆ ಹಾಸನ (Hassan) ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆ ಪಿಎಸ್‌ಐ (PSI) ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಶೋಭಾ ರಜೆ ಮುಗಿಸಿ ಶುಕ್ರವಾರ ಮನೆಗೆ ವಾಪಸಾದಾಗ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು, ಡಿವೈಎಸ್‌ಪಿ ಮುರುಳೀಧರ್ ಹಾಗೂ ವೃತ್ತ ನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೋಭಾ ಭರಮಕ್ಕನವರ್ ಕಳೆದ ಮೂರುವರೆ ತಿಂಗಳ ಹಿಂದಷ್ಟೇ ಜಾವಗಲ್ ಪೊಲೀಸ್ ಠಾಣೆಯಿಂದ ಕೊಣನೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇದೀಗ ಘಟನೆ ಬಗ್ಗೆ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಅಲ್ಲದೇ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಹಾಸನದಲ್ಲಿ ಸರಗಳ್ಳರ ಕೈಚಳಕ

ಹಾಸನ: ಬೈಕ್‌ನಲ್ಲಿ ಹಿಂಬಾಲಿಸಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರಗಳನ್ನು ಕಿತ್ತು ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ರವೀಂದ್ರನಗರದ ಬಾಹುಬಲಿ ರಸ್ತೆಯಲ್ಲಿ ನಿನ್ನೆ ಸಂಜೆ ನಡೆದಿದೆ. ನಿವೃತ್ತ ಶಿಕ್ಷಕಿ ರೇಣುಕಾ ಚಿನ್ನದ ಸರ ಕಳೆದುಕೊಂಡ ಮಹಿಳೆ. ಕೆಆರ್‌ ಪುರ 10 ನೇ ಕ್ರಾಸ್‌ನಲ್ಲಿ ವಾಸವಿರುವ ರೇಣುಕಾ. ನಿನ್ನೆ ಸಂಜೆ ರಾಘವೇಂದ್ರಮಠಕ್ಕೆ ಭಜನೆಗೆ ಹೋಗುವುದಕ್ಕಾಗಿ ಎರಡು ಚಿನ್ನದ ಸರ ಹಾಕಿದ್ದ ರೇಣುಕಾ. ಸರಗಳ್ಳತನ ಮಾಡಲು ರಸ್ತೆಯಲ್ಲಿ ಹೊಂಚು ಹಾಕಿದ್ದ ಕಳ್ಳರು. ರೇಣುಕಾಳನ್ನು ಧರಿಸಿದ್ದ ಚಿನ್ನದ ಸರ ನೋಡಿ ಹಿಂಬಾಲಿಸಿದ್ದರು. ಮೊದಲಿಗೆ ಒಬ್ಬ ರೇಣುಕಾ ಹಿಂಬಾಲಿಸಿಕೊಂಡು ಬಂದಿದ್ದಾನೆ. ರಾಘವೇಂದ್ರ ಮಠದ ಕಡೆಗೆ ತಿರುಗುತ್ತಿದ್ದಂತೆ ರಸ್ತೆ ತಿರುವಿನಲ್ಲಿ ರೇಣುಕಾ ಕುತ್ತಿಗೆಗೆ ಕೈಹಾಕಿದ ಕಳ್ಳ. ಕುತ್ತಿಗೆಯಲ್ಲಿದ್ದ ಎರಡು ಚಿನ್ನದ ಸರ ಕಿತ್ತುಕೊಂಡಿದ್ದಾನೆ. ಇನ್ನೊರ್ವ ಕಳ್ಳ ಬೈಕ್‌ನಲ್ಲಿ ಬಂದಿದ್ದಾನೆ. ಕೂಡಲೇ ಕಳ್ಳರು ಬೈಕ್ ಹತ್ತಿ ಎಸ್ಕೇಪ್ ಆಗಿದ್ದಾರೆ.

60 ಗ್ರಾಂ ಚಿನ್ನದ ಎರಡು ಸರಗಳನ್ನು ಕದ್ದು ಎಸ್ಕೇಪ್ ಆಗಿರುವ ಖತರ್ನಾಕ್ ಸರಗಳ್ಳರು. ಸರಗಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ. ತನಿಖೆ ಕೈಗೊಂಡಿರುವ ಪೊಲೀಸರು ಸರಗಳ್ಳರ ಬಂಧನಕ್ಕೆ ಬಲೆ‌ ಬೀಸಿದ್ದಾರೆ.

Published On - 11:45 am, Sat, 27 May 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ