Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರು ಮೇಲೆ ಮಚ್ಚಿನಿಂದ ಮನಸೋ ಇಚ್ಛೆ ದಾಳಿ: ರಕ್ತದ ಮಡುವಿಲ್ಲಿ ನರಳಾಡುತ್ತಿರುವ ಮೂಕ ಪ್ರಾಣಿ

ಜಾತಿ-ಮತಗಳನ್ನು ನೋಡದೆ ಹಾಲು ನೀಡುವ ಹಸುಗಳ ಮೇಲಿನ ಕೃತ್ಯಗಳು ಮುಂದುವರೆದಿದೆ. ಉತ್ತರ ಕನ್ನಡ, ಮೈಸೂರು ಹಾಗೂ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಮೇಲೆ ದಾಳಿ ಪ್ರಕರಣಗಳು ಬಾರೀ ಸದ್ದು ಮಾಡಿದ್ದವು. ಇದರ ಬೆನ್ನಲ್ಲೇ ಇದೀಗ ಹಾಸನದಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದ್ದು, ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರು ಮೇಲೆ ದುರುಳರು ಮಚ್ಚಿನಿಂದ ಕೊಚ್ಚಿ ಕ್ರೌರ್ಯ ಮೆರೆದಿದ್ದಾರೆ.

ಕರು ಮೇಲೆ ಮಚ್ಚಿನಿಂದ ಮನಸೋ ಇಚ್ಛೆ ದಾಳಿ: ರಕ್ತದ ಮಡುವಿಲ್ಲಿ ನರಳಾಡುತ್ತಿರುವ ಮೂಕ ಪ್ರಾಣಿ
Violent Attacks On Calf
Follow us
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ

Updated on:Feb 18, 2025 | 4:30 PM

ಹಾಸನ, (ಫೆಬ್ರವರಿ 18): ಕರ್ನಾಟಕದಲ್ಲಿ ಹಸುಗಳ ಮೇಲಿನ ಕ್ರೌರ್ಯ ಮೆರೆಯುತ್ತಿರುವ ಪ್ರಕರಣಗಳು ನಡೆಯುತ್ತಲೇ ಇವೆ. ಇದೀಗ ಹಾಸನದಲ್ಲಿ ಜಿಲ್ಲೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರು ಮೇಲೆ ಕೀಚಕರು ಮಚ್ಚಿನಿಂದ ಮನಬಂದಂತೆ ಕೊಚ್ಚಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಅರೆಕೆರೆ ಗ್ರಾಮದಲ್ಲಿ ಈ ಹೇಯ ಕೃತ್ಯ ನಡೆದಿದೆ. ನವೀನ್ ಎಂಬುವವರಿಗೆ ಸೇರಿದ ಕರುವನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದ ವೇಳೆ ದುರುಳರು ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಕರು ರಕ್ತದ ಮಡುವಿಲ್ಲಿ ನರಳಾಡುತ್ತಿದೆ.

ಈ ಹಿಂದೆಯೂ ನವೀನ್ ಅವರು ಸಾಕಿದ್ದ ಜಾನುವಾರುಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದರು. ಇದೀಗ ಕೊಟ್ಟಿಗೆಯಲ್ಲಿ ಕಟ್ಟಿದ್ದ ಜಾನುವಾರು ಮೇಲೆ ಮಚ್ಚಿನಿಂದ ಕಡಿದಿದ್ದಾರೆ. ದುಷ್ಕರ್ಮಿಗಳ ಕೃತ್ಯದಿಂದ ರಕ್ತದ ಮಡುವಿಲ್ಲಿ ನರಳಾಡುತ್ತಿರುವ ಕರುವಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟದಲ್ಲಿ ಮತ್ತೊಂದು ಅಮಾನವೀಯ ಘಟನೆ: ಹಸುವಿನ ತಲೆ ಕಡಿದು ದೇಹ ಕೊಂಡೊಯ್ದ ದುರುಳರು

ಇತ್ತೀಚೆಗೆ ಬೆಂಗಳೂರಿನ ಚಾಮರಾಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಕ್ರೌರ್ಯ ಮರೆದಿರುವ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಮೈಸೂರಿನಲ್ಲಿ ಕಿಡಿಗೇಡಿಗಳು ಹಸುವಿನ ಬಾಲಕ್ಕೆ ಮಚ್ಚು ಹೊಡೆದು ಗಾಯಗೊಳಿಸಿರುವ ಪ್ರಕರಣ ಬೆಳಗೆ ಬಂದಿತ್ತು. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲೂ ಸಹ ಅಮಾನವೀಯ ಘಟನೆ ನಡೆದಿತ್ತು. ಗರ್ಭ ಧರಿಸಿದ ಹಸುವಿನ ತಲೆ ಕಡಿದು ದೇಹ ಕೊಂಡೊಯ್ದಿದ್ದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾನುವಾರಗಳ ಮೇಲೆ ನಿರಂತರವಾಗಿ ದಾಳಿಗಳು ನಡೆಯುತ್ತಲೇ ಇವೆ. ಮೇಯಲು ಕಾಡಿಗೆ, ಜಮೀನು ಕಡೆಗಳಿಗೆ ಹೋದ ಸಂದರ್ಭದಲ್ಲಿ ದುಷ್ಕರ್ಮಿಗಳು ದಾಳಿ ಮಾಡಿ ಮಾಂಸ ತೆಗೆದುಕೊಂಡು ಹೋಗುತ್ತಾರೆ ಎನ್ನುವ ಆರೋಪಗಳು ಕೇಳಿಬಂದಿವೆ.

ಮೊದಲೆಲ್ಲ ಜಾನುವಾರುಗಳ ಮೇಲೆ ಚಿರತೆ, ಹುಲಿ, ಸಿಂಹ ಸೇರಿದಂತೆ ಕಾಡು ಪ್ರಾಣಿಗಳು ದಾಳಿ ಮಾಡುವ ಪ್ರಕರಣಗಳು ಕೇಳುತ್ತಿದ್ದೆವು.  ಇದರರಿಂದ ಜಾನುವಾರುಗಳ ಮಾಲೀಕರು ಆತಂಕಕ್ಕೆ ಕಾರಣವಾಗಿತ್ತು. ಆದ್ರೆ, ಇದೀಗ ಮನುಷ್ಯನೇ ಈ ಮೂಕ ಪ್ರಾಣಿಗಳ ಮೇಲೆ ಅಟ್ಟಹಾಸ ಮೆರೆಯುತ್ತಿರುವ ಕೃತ್ಯಗಳು ನಡೆಯುತ್ತಿವೆ. ಯಾವುದೇ ಜಾತಿ ಧರ್ಮ ಎನ್ನದೇ ಜಾನುವಾರುಗಳು ಒಂದಲ್ಲ ಒಂದು ರೀತಿಯಾಗಿ ಮಾಲೀಕನಿಗೆ ಬೆನ್ನೆಲುಬಾಗಿವೆ.

ಹೀಗಿರುವಾಗ ಕೆಲವು ದುರುಳರು ಜಾನುವಾರಗಳ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕ್ರೌರ್ಯ ಮೆರೆಯುತ್ತಿರುವುದು ವಿಪರ್ಯಾಸ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:21 pm, Tue, 18 February 25

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ