ವಯನಾಡಿನ ವ್ಯಕ್ತಿ ಕುಟುಂಬಕ್ಕೆ ಹಣ, ಹಾಸನದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿ ಮನೆಯವರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ!

ಕೇರಳದ ವಯನಾಡಿನಲ್ಲಿ ಆನೆ ದಾಳಿಗೆ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕರ್ನಾಟಕ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, 2021ರಲ್ಲಿ ಹಾಸನ ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ನೀಡಿದ್ದ ಭರವಸೆಯಂತೆ ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಇದು ಮಲೆನಾಡು ಭಾಗದ ಜನರಲ್ಲಿ ಸರ್ಕಾರದ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ.

ವಯನಾಡಿನ ವ್ಯಕ್ತಿ ಕುಟುಂಬಕ್ಕೆ ಹಣ, ಹಾಸನದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿ ಮನೆಯವರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ!
ಸಕಲೇಶಪುರ ತಾಲ್ಲೂಕಿನ, ಹೆಬ್ಬನಹಳ್ಳಿ ಗ್ರಾಮದಲ್ಲಿ 2022 ನವೆಂಬರ್ 1 ರಂದು ನಡೆದಿದ್ದ ಪ್ರತಿಭಟನೆಯ ಸಂಗ್ರಹ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Feb 20, 2024 | 1:02 PM

ಹಾಸನ, ಫೆಬ್ರವರಿ 20: ಕೇರಳದ ವಯನಾಡಿನಲ್ಲಿ (Wayanad) ಆನೆ ತುಳಿತಕ್ಕೆ (Elephant Attack) ಬಲಿಯಾದ ವ್ಯಕ್ತಿಯ ಕುಟುಂಬದವರಿಗೆ ಕರ್ನಾಟಕ ಸರ್ಕಾರದಿಂದ (Karnataka Government) ಪರಿಹಾರ ಘೋಷಣೆ ಮಾಡಿರುವುದು ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಈ ಮಧ್ಯೆ, ಹಾಸನ (Hassan) ಜಿಲ್ಲೆಯಲ್ಲಿ ಕಾಡಾನೆ ತುಳಿತಕ್ಕೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ಇನ್ನೂ ಪರಿಹಾರ ದೊರೆಯದಿರುವುದೂ ತಿಳಿದುಬಂದಿದೆ. ಸಕಲೇಶಪುರ ತಾಲ್ಲೂಕಿನ, ಹೆಬ್ಬನಹಳ್ಳಿ ಗ್ರಾಮದಲ್ಲಿ 2022 ನವೆಂಬರ್ 1 ರಂದು ಮನು (35) ಎಂಬವರು ಕಾಡಾನೆ ದಾಳಿಗೆ ಬಲಿಯಾಗಿದ್ದರು.

ಆ ಸಂದರ್ಭದಲ್ಲಿ ಶವ ಮೇಲೆತ್ತಲು ಬಿಡದೆ ಸ್ಥಳೀಯರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ನಡೆಸುತ್ತಿದ್ದ ಮಾಜಿಶಾಸಕ ಎಚ್.ಎಂ. ವಿಶ್ವನಾಥ್‌ಗೆ ಕರೆ ಮಾಡಿದ್ದ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ, 7.5 ಲಕ್ಷ ರೂಪಾಯಿ ಪರಿಹಾರದ ಮೊತ್ತವನ್ನು 15 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದೇವೆ. ಮನು ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ಘೋಷಿಸಿದ್ದರು.

ಮಧ್ಯರಾತ್ರಿ ಹೆಬ್ಬನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಅಂದಿನ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಿದ್ದರು. ಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮನವಿಗೆ ಪ್ರತಿಭಟನಾಕಾರರು ಸ್ಪಂದಿಸಿದ್ದರು. ಅಹೋರಾತ್ರಿ ಧರಣಿ ವಾಪಾಸ್ ಪಡೆದಿದ್ದರು.

ಆದರೆ, ನಂತರದ ಬೆಳವಣಿಗೆಯಲ್ಲಿ ಮನು ಕುಟುಂಬಕ್ಕೆ 7.5 ಲಕ್ಷ ರೂಪಾಯಿ ಮಾತ್ರ ಪರಿಹಾರ ನೀಡಲಾಗಿತ್ತು. ಬಾಕಿ ಉಳಿದ ಮೊತ್ತ ನೀಡಲು ಅರಣ್ಯ ಇಲಾಖೆ ಹಾಗೂ ಸರ್ಕಾರ ಸಬೂಬು ಹೇಳುತ್ತಾ ಬಂದಿತ್ತು.

ಮನು 2023 ನವೆಂಬರ್ 1 ರಂದು ಮೃತಪಟ್ಟಿದ್ದಾರೆ. ಆದರೆ ಡಿಸೆಂಬರ್ 15 ರಿಂದ ಪರಿಹಾರ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ: ಆನೆ ದಾಳಿಗೆ ಬಲಿಯಾದ ವಯನಾಡ್ ವ್ಯಕ್ತಿಗೆ ಕರ್ನಾಟಕದ ಪರಿಹಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಇದೀಗ ಕೇರಳದ ವ್ಯಕ್ತಿಗೆ 15 ಲಕ್ಷ ರೂ. ಪರಿಹಾರ ಘೋಷಣೆ ಮಾಡಿರುವುದು ಮಲೆನಾಡು ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಬಲಿಯಾದವನಿಗೆ ಅನ್ಯಾಯ, ಹೊರ ರಾಜ್ಯದಲ್ಲಿ ಬಲಿಯಾದವನಿಗೆ ನ್ಯಾಯ ಎಂದು ಮಲೆನಾಡು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಸೆರೆಸಿಕ್ಕಿದ್ದು ಎನ್ನಲಾದ ಆನೆಯೊಂದು ವಯನಾಡಿನಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿರುವುದಕ್ಕೆ ಆ ವ್ಯಕ್ತಿಯ ಕುಟುಂಬದವರಿಗೆ 15 ಲಕ್ಷ ರೂ. ಪರಿಹಾರ ನೀಡುವುದಾಗಿ ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ ಘೋಷಣೆ ಮಾಡಿದೆ. ವಯನಾಡಿನ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಮೆಚ್ಚಿಸುವುದಕ್ಕಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ತೆರಿಗೆ ಹಣ ದುರ್ಬಳಕೆ ಮಾಡುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಹಾಸನ ಜಿಲ್ಲೆಯ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ದೊರೆಯದ ವಿಚಾರ ಮುನ್ನೆಲೆಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ