ಹಾಸನ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಮನೆಗಳಿಗೆ ಹಾನಿ; 5 ಲಕ್ಷ ಪರಿಹಾರ ನೀಡುವುದಾಗಿ ಸಚಿವ ಕೆ.ಗೋಪಾಲಯ್ಯ ಭರವಸೆ

ಹಾಸನ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಮನೆಗಳು ಮಳೆಯಿಂದ ಹಾನಿಗೊಳಗಾಗಿವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅರಕಲಗೂಡು ತಾಲೂಕಿನ ಬಸನವಹಳ್ಳಿ ಗ್ರಾಮದಲ್ಲಿ ಹೇಳಿದ್ದಾರೆ.

ಹಾಸನ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಮನೆಗಳಿಗೆ ಹಾನಿ;  5 ಲಕ್ಷ ಪರಿಹಾರ ನೀಡುವುದಾಗಿ ಸಚಿವ ಕೆ.ಗೋಪಾಲಯ್ಯ ಭರವಸೆ
ಸಚಿವ ಕೆ ಗೋಪಾಲಯ್ಯ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 13, 2022 | 7:30 PM

ಹಾಸನ: ಹಾಸನ (Hassan) ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಮನೆಗಳು ಮಳೆಯಿಂದ (Rain) ಹಾನಿಗೊಳಗಾಗಿವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ (K Gopalaiah) ಅರಕಲಗೂಡು (Arkalgud) ತಾಲೂಕಿನ ಬಸನವಹಳ್ಳಿ ಗ್ರಾಮದಲ್ಲಿ ಹೇಳಿದ್ದಾರೆ. ಮನೆ ಕಳೆದುಕೊಂಡವರಿಗೆ ತಕ್ಷಣ 10,000 ರೂಪಾಯಿ ಪರಿಹಾರ ನೀಡಿದ್ದಾರೆ. ಸಂಪೂರ್ಣ ಹಾನಿಯಾಗಿರುವ ಮನೆಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಭಾಗಶಃ ಹಾನಿಯಾದ ಮನೆಗಳಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು.

ಹೊಳೆನರಸೀಪುರ, ಅರಕಲಗೂಡು ತಾಲೂಕಿನಲ್ಲಿ ಹೆಚ್ಚಿನ ಮನೆಗಳಿಗೆ ಹಾನಿಯಾಗಿವೆ. ಮಳೆಯಿಂದ ಹಾನಿಯಾದ ತಂಬಾಕು, ಶೇಂಗಾ, ಆಲೂಗಡ್ಡೆ ಬೆಳೆ ಬಗ್ಗೆ ವರದಿ ಪಡೆದಿದ್ದೇನೆ. ವರದಿ ಪರಿಶೀಲಿಸಿ ರೈತರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು. ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜನರ ಸಮಸ್ಯೆ ಆಲಿಸುವಂತೆ ತಹಶೀಲ್ದಾರ್​ಗಳಿಗೆ ಸೂಚಿಸಿದ್ದೇನೆ ಎಂದು ಅವರು ಹೇಳಿದರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿಕೆ

ಜುಲೈ 11 ರಂದು ಪಿಡಬ್ಲ್ಯೂಡಿ ಸಚಿವರು ಶಿರಾಡಿಘಾಟ್ ರಸ್ತೆಗೆ ಭೇಟಿ ನೀಡಿದ್ದಾರೆ. ಪ್ರತಿವರ್ಷ ಮಳೆಗಾಲದಲ್ಲಿ ಶಿರಾಡಿಘಾಟ್ ರಸ್ತೆ ಕುಸಿಯುತ್ತಿದೆ. ಈ ವರ್ಷ ಹೊಸದಾಗಿ ಕುಸಿದಿಲ್ಲ. ರಸ್ತೆ ಕಾಮಗಾರಿ ನಿಧಾನವಾಗಿ ನಡೆಯುತ್ತಿದೆ. ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಲೋಕೋಪಯೋಗಿ ಸಚಿವರು, ಸಂಸದ ನಳಿನ್ ಕುಮಾರ್ ಕಟೀಲ್ ಅವರ ಜೊತೆಯೂ ಮಾತನಾಡಿದ್ದೇನೆ ಎಂದರು.

ಈಗಾಗಲೇ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಎಲ್ಲಾ ತಹಸೀಲ್ದಾರ್‌ಗಳು, ಉಪವಿಭಾಗಾಧಿಕಾರಿಗಳು ಮಳೆ ಹಾನಿ ಪ್ರದೇಶಕ್ಕೆ ತಕ್ಷಣ ಭೇಟಿ ಕೊಟ್ಟು ಸ್ಪಂದಿಸುವಂತೆ ಸೂಚನೆ ಕೊಟ್ಟಿದ್ದೇನೆ. ಮನೆ, ಬೆಳೆ ಹಾನಿಗೆ ಪರಿಹಾರವನ್ನು ಈಗಾಗಲೇ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರುಗಳ‌ ಜೊತೆ ಸಭೆ ನಡೆಸಿದ್ದಾರೆ. ಸರ್ಕಾರದಲ್ಲಿ ಯಾವುದೇ ಹಣದ ಕೊರತೆಯಿಲ್ಲ. ರೈತರಿಗೆ, ಮನೆ ಹಾನಿ ಕುಟುಂಬಗಳಿಗೆ ಆಗಿರುವ ನಷ್ಟಕ್ಕೆ ಸಹಾಯ ಮಾಡುವ ಕೆಲಸವನ್ನು ಮಾಡುತ್ತೇವೆ ಎಂದು ಮಾತನಾಡಿದರು.

Published On - 7:25 pm, Wed, 13 July 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ