AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮಧ್ಯಾಹ್ನದ ಬಿಸಿಯೂಟ ಅಹಾರದಲ್ಲಿ ಹಲ್ಲಿ ಬಿದ್ದು 34 ಮಕ್ಕಳು ಅಸ್ವಸ್ಥ

ಮಧ್ಯಾಹ್ನದ ಬಿಸಿಯೂಟ ಅಹಾರದಲ್ಲಿ ಹಲ್ಲಿ ಬಿದ್ದಿದ್ದು ಅದನ್ನು ಸೇವಿಸಿದ 34 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಮಧ್ಯಾಹ್ನ ಊಟಕ್ಕೆ ಕುಳಿತಾಗ ಊಟದಲ್ಲಿ ಹಲ್ಲಿ ಪತ್ತೆಯಾಗಿದೆ. ಈ ವಿಚಾರ ತಿಳಿಯುವ ಮುಂಚೆಯೇ ಹಲವು ಮಕ್ಕಳು ಊಟ ಸೇವಿಸಿದ್ದರು.

ಹಾಸನದಲ್ಲಿ ಮಧ್ಯಾಹ್ನದ ಬಿಸಿಯೂಟ ಅಹಾರದಲ್ಲಿ ಹಲ್ಲಿ ಬಿದ್ದು 34 ಮಕ್ಕಳು ಅಸ್ವಸ್ಥ
ಮಧ್ಯಾಹ್ನದ ಬಿಸಿಯೂಟ ಅಹಾರದಲ್ಲಿ ಹಲ್ಲಿ ಬಿದ್ದು 34 ಮಕ್ಕಳು ಅಸ್ವಸ್ಥ
TV9 Web
| Edited By: |

Updated on:Mar 24, 2022 | 4:56 PM

Share

ಹಾಸನ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 34 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಾರಾಯಣಗಟ್ಟಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಕ್ಕಳನ್ನು ಅರಸೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮಧ್ಯಾಹ್ನದ ಬಿಸಿಯೂಟ ಅಹಾರದಲ್ಲಿ ಹಲ್ಲಿ ಬಿದ್ದಿದ್ದು ಅದನ್ನು ಸೇವಿಸಿದ 34 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಮಧ್ಯಾಹ್ನ ಊಟಕ್ಕೆ ಕುಳಿತಾಗ ಊಟದಲ್ಲಿ ಹಲ್ಲಿ ಪತ್ತೆಯಾಗಿದೆ. ಈ ವಿಚಾರ ತಿಳಿಯುವ ಮುಂಚೆಯೇ ಹಲವು ಮಕ್ಕಳು ಊಟ ಸೇವಿಸಿದ್ದರು. ಇನ್ನು ಈ ವಿಚಾರ ತಿಳಿಯುತ್ತಲೆ ಹಲವು ಮಕ್ಕಳು ಅಸ್ವಸ್ಥವಾಗಿದ್ದಾರೆ. ತಕ್ಷಣವೇ ಶಿಕ್ಷಕರು ಅನ್ಯ ಮಕ್ಕಳು ಊಟ ಸೇವಿಸುವುದನ್ನು ತಡೆದಿದ್ದಾರೆ. ಅಸ್ವಸ್ಥಗೊಂಡಿರುವ ಎಲ್ಲಾ ಮಕ್ಕಳನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಿಜೆಪಿ ನಾಯಕ, ಸಿಎಂ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿದ್ದಾರೆ. ಸದ್ಯ ಎಲ್ಲಾ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಮತ್ತೊಂದೆಡೆ ಶಾಸಕ ಕೆ.ಎಂ‌‌.ಶಿವಲಿಂಗೇಗೌಡ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಅರೋಗ್ಯ ವಿಚಾರಿಸಿದ್ದಾರೆ. ಅಧಿಕಾರಿಗಳ ಬಳಿ ಮಾಹಿತಿ ಕಲೆ ಹಾಕಿದ್ದಾರೆ.

ಶಾಲೆಯಲ್ಲಿ ಒಟ್ಟು 34 ಮಕ್ಕಳಿದ್ದು ಊಟ ಬಡಿಸೋವೇಳೆಯಲ್ಲಿ ಮೂರನೇ ತರಗತಿಯ ಓರ್ವ ವಿದ್ಯಾರ್ಥಿಗೆ ತನಗೆ ಬಡಿಸಿದ ಊಟದಲ್ಲಿ ಹಲ್ಲಿ ಇರೋದು ಗೊತ್ತಾಗಿದೆ. ಅಷ್ಟೊತ್ತಿಗಾಗಲೆ ಕೆಲ ಮಕ್ಕಳು ಊಟ ಆರಂಭಿಸಿದ್ರು, ವಿದ್ಯಾರ್ಥಿ ತನ್ನ ಊಟದಲ್ಲಿ ಹಲ್ಲಿ ಇರೋದನ್ನ ಶಿಕ್ಷಕರಿಗೆ ತಿಳಿಸಿದ ಕೂಡಲೆ ತಕ್ಷಣ ಎಚ್ಚೆತ್ತ ಶಿಕ್ಷಕರು ಎಲ್ಲಾ ಮಕ್ಕಳನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯ ವಿವರಗಳನ್ನು ತಾಲ್ಲೂಕು ವೈದ್ಯಾಧಿಕಾರಿಗಳಿಗೆ ನೀಡಿದ್ದು ಕೂಡಲೆ ಎಲ್ಲಾ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ. ಸದ್ಯ ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ಸ್ಥಳೀಯ ಶಾಸಕ ಶಿವಲಿಂಗೇಗೌಡ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಮಕ್ಕಳಿಗೆ ಧೈರ್ಯ ಹೇಳಿದ್ದಾರೆ. ಜೊತೆಗೆ ಸಿಎಂ ರ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಕೂಡ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿರೋ ಶಿಕ್ಷಣ ಇಲಾಖೆ ಅಧಿಕಾರಿಗಳು ಆಗಿರುವ ಅಚಾತುರ್ಯದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಪ್ಪು ಸೀರೆ ಧರಿಸಿ ‘ಪ್ರೀ ಆಸ್ಕರ್​ ಪಾರ್ಟಿ’ಯಲ್ಲಿ ಮಿಂಚಿದ ‘ದೇಸಿ ಗರ್ಲ್​’ ಪ್ರಿಯಾಂಕಾ ಚೋಪ್ರಾ

ಬಸವಸಾಗರ ಜಲಾಶಯದ ಹಿನ್ನೀರಿನಲ್ಲಿ ಮೀನುಗಾರಿಕೆ; ಮೀನುಗಳಿಂದ 16 ಕೋಟಿ ರೂ. ಆದಾಯ ಗಳಿಕೆ

Published On - 4:34 pm, Thu, 24 March 22